Asia cup 2025: ಭಾರತ- ಪಾಕ್ ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದವರೇ ಬಾಸ್
India vs Pakistan Asia Cup 2025: ಏಷ್ಯಾಕಪ್ 2025 ರ ಸೂಪರ್ ಫೋರ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 21 ರಂದು ದುಬೈನಲ್ಲಿ ಮುಖಾಮುಖಿಯಾಗಲಿವೆ. ದುಬೈನಲ್ಲಿ ಚೇಸಿಂಗ್ ತಂಡಗಳು ಹೆಚ್ಚಾಗಿ ಗೆದ್ದಿರುವ ಇತಿಹಾಸವಿದೆ. ಲೀಗ್ ಹಂತದಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತ ತಂಡ ಉತ್ತಮ ಫಾರ್ಮ್‌ನಲ್ಲಿದ್ದರೂ, ಪಾಕಿಸ್ತಾನ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತದೆ.

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಸೂಪರ್ ಫೋರ್ ಸುತ್ತು ಇಂದಿನಿಂದ ಪ್ರಾರಂಭವಾಗಿದೆ. ಮೊದಲ ಪಂದ್ಯ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ನಡುವೆ ನಡೆಯುತ್ತಿದ್ದರೆ, ಎರಡಮೇ ಪಂದ್ಯ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಸೆಪ್ಟೆಂಬರ್ 21 ರಂದು ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದ್ದು, ಲೀಗ್ ಹಂತದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ಸೂಪರ್ ಫೋರ್‌ನಲ್ಲಿಯೂ ಈ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಆದಾಗ್ಯೂ, ದುಬೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸಬಹುದು ಎಂಬುದು ಅಂಕಿ ಅಂಶಗಳು ಹೇಳಿದ ಸತ್ಯವಾಗಿದೆ.
ದುಬೈನಲ್ಲಿ ಟಾಸ್ ದಾಖಲೆ ಹೇಗಿದೆ?
ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 21 ರಂದು ದುಬೈನಲ್ಲಿ ಮುಖಾಮುಖಿಯಾಗಲಿವೆ . ಇಲ್ಲಿ ಇಲ್ಲಿಯವರೆಗೆ ಆಡಿರುವ ಒಂಬತ್ತು ಟಿ20ಐ ಪಂದ್ಯಗಳಲ್ಲಿ ಚೇಸಿಂಗ್ ತಂಡ ಗೆದ್ದಿರುವುದರಿಂದ ಟಾಸ್ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದನ್ನು ಅರಿತುಕ್ಕೊಳ್ಳಬಹುದು. ಇದನ್ನು ಪರಿಗಣಿಸಿ, ಎರಡೂ ತಂಡಗಳು ಟಾಸ್ ಗೆದ್ದ ನಂತರ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು.
ಭಾರತ ಮತ್ತು ಪಾಕಿಸ್ತಾನ ಈ ಮೈದಾನದಲ್ಲಿ ಇದುವರೆಗೆ ನಾಲ್ಕು ಟಿ20 ಪಂದ್ಯಗಳನ್ನು ಆಡಿವೆ. ಇವುಗಳಲ್ಲಿ ಪ್ರತಿಯೊಂದರಲ್ಲೂ ಚೇಸಿಂಗ್ ಮಾಡಿದ ತಂಡ ಗೆದ್ದಿದೆ. ಈ ಟೂರ್ನಮೆಂಟ್‌ನ ಲೀಗ್ ಪಂದ್ಯದಲ್ಲಿ, ಚೇಸಿಂಗ್ ಮಾಡಿದ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ಏಳು ವಿಕೆಟ್‌ಗಳಿಂದ ಗೆದ್ದಿತ್ತು. ಈ ಪಿಚ್‌ನಲ್ಲಿ 185 ರನ್‌ಗಳ ಗುರಿಯನ್ನು ಇದುವರೆಗೆ ಬೆನ್ನಟ್ಟಲಾಗಿಲ್ಲ.
Asia cup 2025: ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ
ಭಾರತದ ಅಜೇಯ ಓಟ
ಇನ್ನು ಈ ಟೂರ್ನಮೆಂಟ್‌ನಲ್ಲಿ ಟೀಂ ಇಂಡಿಯಾ ಇಲ್ಲಿಯವರೆಗೆ ಯಾವುದೇ ಪಂದ್ಯವನ್ನು ಸೋತಿಲ್ಲ. ಸೂಪರ್ ಫೋರ್‌ನಲ್ಲಿ ಈ ಗೆಲುವಿನ ಓಟವನ್ನು ಮುಂದುವರಿಸಲು ಪ್ರಯತ್ನಿಸಲಿದೆ. ಇನ್ನು ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 9 ವಿಕೆಟ್‌ಗೆ 127 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡವು 15.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಈ ಗುರಿಯನ್ನು ತಲುಪಿತು. ಈಗ, ಪಾಕಿಸ್ತಾನ ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಇರಾದೆಯಲ್ಲಿದೆ.
ಆದಾಗ್ಯೂ, ಭಾರತ ತಂಡವು ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದೆ. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ನಂತರ, ಟೀಂ ಇಂಡಿಯಾ ಯಾವುದೇ ಟಿ 20 ಸರಣಿಯನ್ನು ಕಳೆದುಕೊಂಡಿಲ್ಲ. ಈ ಅವಧಿಯಲ್ಲಿ ಭಾರತ ಒಟ್ಟು 23 ಪಂದ್ಯಗಳನ್ನು ಆಡಿದ್ದು, ಕೇವಲ 3 ಪಂದ್ಯಗಳಲ್ಲಿ ಮಾತ್ರ ಸೋತಿದೆ. ಇದನ್ನು ಗಮನಿಸಿದರೆ, ಪಾಕಿಸ್ತಾನ ಗೆಲ್ಲಲು ಅಸಾಧಾರಣ ಪ್ರದರ್ಶನ ನೀಡಬೇಕಾಗುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
