IND vs PAK: ‘ಮೈದಾನದಲ್ಲೂ ಆಪರೇಷನ್ ಸಿಂಧೂರ್’; ಏಷ್ಯಾಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ
PM Modi Congratulates Team India: 2025 ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ದಾಖಲೆಯ 9ನೇ ಪ್ರಶಸ್ತಿ ಗೆದ್ದಿದೆ. ತಿಲಕ್ ವರ್ಮಾ ಅರ್ಧಶತಕ, ಕುಲ್ದೀಪ್ ಯಾದವ್ ನಾಲ್ಕು ವಿಕೆಟ್ ನೆರವಿನಿಂದ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಪ್ರಧಾನಿ ಮೋದಿ "ಆಪರೇಷನ್ ಸಿಂಧೂರ್" ಎಂದು ಅಭಿನಂದಿಸಿದ್ದಾರೆ. ದುಬೈನಲ್ಲಿ ಭಾರತದ ಪ್ರಾಬಲ್ಯ ದೇಶಾದ್ಯಂತ ಸಂಭ್ರಮಕ್ಕೆ ಕಾರಣವಾಗಿದೆ.

ಭಾರತದ ಮುಂದೆ ಮಂಡಿಯೂರುವ ಸಂಪ್ರದಾಯವನ್ನು ನೀಚ ಪಾಕಿಸ್ತಾನ ಕ್ರಿಕೆಟ್ ಮೈದಾನದಲ್ಲೂ ಮುಂದುವರೆಸಿದೆ. ಕೆಲವು ತಿಂಗಳುಗಳ ಹಿಂದೆ ಯುದ್ಧ ಭೂಮಿಯಲ್ಲಿ ಭಾರತದ ದಾಳಿಗೆ ತತ್ತರಿಸಿ ಹೋಗಿದ್ದ ಪಾಕಿಸ್ತಾನ ಇದೀಗ ಕ್ರಿಕೆಟ್ನಲ್ಲೂ ಮಣ್ಣು ಮುಕ್ಕಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ (Asia Cup 2025) ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿ ಭಾರತ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi), ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತಕ್ಕೆ ಹ್ಯಾಟ್ರಿಕ್ ಜಯ
ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ ಕರೆಗಳ ನಡುವೆ, ಟೀಂ ಇಂಡಿಯಾ, ಪಾಕಿಸ್ತಾನವನ್ನು ಒಮ್ಮೆ ಅಲ್ಲ, ಎರಡು ಬಾರಿ ಅಲ್ಲ, ಸತತ ಮೂರು ಬಾರಿ ಸೋಲಿಸಿತು. ಅದರಲ್ಲೂ ಮೊದಲೆರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿದ್ದ ಭಾರತ, ಮೂರನೇ ಗೆಲುವಿಗಾಗಿ ಸಾಕಷ್ಟು ಬೆವರು ಹರಿಸಬೇಕಾಯಿತು.
ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಟೀಂ ಇಂಡಿಯಾದ ಗೆಲುವಿನಿಂದ ದೇಶಾದ್ಯಂತ ಸಂಭ್ರಮಾಚರಣೆಗಳು ಮುಗಿಲು ಮುಟ್ಟಿವೆ. ಇತ್ತ ದೇಶದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮೂರು ಸಾಲುಗಳ ಪೋಸ್ಟ್‌ನೊಂದಿಗೆ ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಪೋಸ್ಟ್‌ನಲ್ಲಿ, ‘ಮೈದಾನದಲ್ಲಿ ಆಪರೇಷನ್ ಸಿಂಧೂರ್. ಫಲಿತಾಂಶ ಒಂದೇ: ಭಾರತಕ್ಕೆ ಜಯ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.
#OperationSindoor on the games field.
Outcome is the same – India wins!
Congrats to our cricketers.
— Narendra Modi (@narendramodi) September 28, 2025
ಪಂದ್ಯ ಹೀಗಿತ್ತು
ಈ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮೊದಲು ಬ್ಯಾಟ್ ಮಾಡಿ 146 ರನ್‌ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನದ ಪರವಾಗಿ ಆರಂಭಿಕಾರದ ಸಾಹಿಬ್‌ಜಾದಾ ಫರ್ಹಾನ್ 57 ರನ್‌ಗಳ ಗರಿಷ್ಠ ಇನ್ನಿಂಗ್ಸ್ ಆಡಿದರೆ, ಫಖರ್ ಜಮಾನ್ ಕೂಡ 46 ರನ್‌ಗಳ ಕಾಣಿಕೆ ನೀಡಿದರು. ಇವರಿಬ್ಬರನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲಿಲ್ಲ. ಭಾರತದ ಒರ ಬೌಲಿಂಗ್ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ ನಾಲ್ಕು ವಿಕೆಟ್ ಪಡೆದರು. ಇದಕ್ಕೆ ಪ್ರತಿಯಾಗಿ ಭಾರತ ಕೇವಲ 20 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದಾಗ್ಯೂ, ತಿಲಕ್ ವರ್ಮಾ ಅದ್ಭುತ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಶಿವಂ ದುಬೆ, ಸಂಜು ಸ್ಯಾಮ್ಸನ್ ಕೂಡ ಕ್ರಮವಾಗಿ 33 ಮತ್ತು 24 ರನ್ ಬಾರಿಸಿ ಗೆಲುವಿನ ಕೊಡುಗೆ ನೀಡಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:12 am, Mon, 29 September 25
