AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮನ್ನ ಫೈನಲ್​ನಲ್ಲಿ ನೋಡ್ಕೋತೀವಿ: ಟೀಮ್ ಇಂಡಿಯಾಗೆ ಶಾಹೀನ್ ಅಫ್ರಿದಿ ಎಚ್ಚರಿಕೆ

Asia Cup 2025: ಏಷ್ಯಾಕಪ್​ನ 17ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಹೀಗೆ ಫೈನಲ್​ಗೆ ಪ್ರವೇಶಿಸಿದ ತಂಡವು ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲಿದೆ.

ನಿಮ್ಮನ್ನ ಫೈನಲ್​ನಲ್ಲಿ ನೋಡ್ಕೋತೀವಿ: ಟೀಮ್ ಇಂಡಿಯಾಗೆ ಶಾಹೀನ್ ಅಫ್ರಿದಿ ಎಚ್ಚರಿಕೆ
Shaheen Afridi
ಝಾಹಿರ್ ಯೂಸುಫ್
|

Updated on:Sep 25, 2025 | 12:24 PM

Share

ಈ ಬಾರಿಯ ಏಷ್ಯಾಕಪ್​ ಫೈನಲ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇಂದು (ಸೆ.25) ಉತ್ತರ ಸಿಗಲಿದೆ. ಏಕೆಂದರೆ ಭಾರತ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಅತ್ತ ಇಂದು ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆದ್ದರೆ ಫೈನಲ್​ಗೆ ಎಂಟ್ರಿ ಕೊಡಲಿದೆ. ಹೀಗಾದಲ್ಲಿ ಸೆಪ್ಟೆಂಬರ್ 28 ರಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನವೇ ಪಾಕ್ ವೇಗಿ ಶಾಹೀನ್ ಅಫ್ರಿದಿ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಪಾಕಿಸ್ತಾನ್ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಗೆದ್ದ ಬಳಿಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್  ಪಾಕ್ ತಂಡವನ್ನು ಇನ್ಮುಂದೆ ನಮ್ಮ ಪ್ರಬಲ ಪ್ರತಿಸ್ಪರ್ಧಿ ಎಂದು ಬಿಂಬಿಸಬೇಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿದ್ದರು.

ಭಾರತ ತಂಡವು ಪಾಕ್ ವಿರುದ್ಧ ಏಕಪಕ್ಷೀಯವಾಗಿ ಪಂದ್ಯ ಗೆಲ್ಲುತ್ತಿದೆ. ಇಲ್ಲಿ ಪ್ರತಿಸ್ಪರ್ಧೆ ಅಥವಾ ಪೈಪೋಟಿ ಎಂಬುದೇ ಇಲ್ಲ. ಪ್ರತಿ ಸಲ ಏಕಪಕ್ಷೀಯವಾಗಿ ನಾವೇ ಗೆಲ್ಲುತ್ತಿರುವಾಗ, ಪೈಪೋಟಿಯ ಮಾತೇ ಬರಲ್ಲ. ಹೀಗಾಗಿ ನೀವೆಲ್ಲರೂ ಈ ‘ಪೈಪೋಟಿ’ಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸಬೇಕು ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದರು.

ಒಂದು ತಂಡವು ಪರಸ್ಪರ 15 ಅಥವಾ 20 ಪಂದ್ಯಗಳನ್ನು ಆಡಿದರೆ, ಅದರಲ್ಲಿ ಉಭಯ ತಂಡಗಳು ಸ್ 7-7 ಅಥವಾ 8-7 ಪಂದ್ಯಗಳನ್ನು ಗೆದ್ದರೆ ಮಾತ್ರ ಅದನ್ನು ಪೈಪೋಟಿ ಎಂದು ಕರೆಯಲಾಗುತ್ತದೆ. ಆದರೆ ನನ್ನ ಊಹೆ ಪ್ರಕಾರ ನಾವು ಪಾಕಿಸ್ತಾನ್ ವಿರುದ್ಧ 13-0, 10-1 ಅಂತರದಿಂದ ಮೇಲುಗೈ ಹೊಂದಿದ್ದೇವೆ.

ಹೀಗಾಗಿ ಭಾರತಕ್ಕೆ ಪಾಕಿಸ್ತಾನ್ ಸಾಟಿಯೇ ಅಲ್ಲ. ಇದೇ ಕಾರಣದಿಂದ ಇನ್ಮುಂದೆ ಉಭಯ ತಂಡಗಳ ಪಂದ್ಯವನ್ನು ಪೈಪೋಟಿ ಎಂದು ಬಿಂಬಿಸದಿರಿ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮನವಿ ಮಾಡಿದ್ದರು.

ಸೂರ್ಯಕುಮಾರ್ ಯಾದವ್ ಅವರ ಈ ಹೇಳಿಕೆ ಕುರಿತು ಶಾಹೀನ್ ಅಫ್ರಿದಿ ಅವರನ್ನು ಕೇಳಿದಾಗ, ಅವರು ಏನು ಬೇಕಾದರೂ ಹೇಳಲಿ. ಅವರಿಗೆ ಅವರದೇ ಆದ ದೃಷ್ಟಿಕೋನವಿದೆನಾವು ಸಹ ಏಷ್ಯಾಕಪ್ ಗೆಲ್ಲಲು ಬಂದಿದ್ದೇವೆ. ಹೀಗಾಗಿ ನಮ್ಮ ಗುರಿ ಫೈನಲ್​ಗೇರುವುದು.

ನಾವು ಫೈನಲ್​ಗೇರಿದರೆ ಬಳಿಕ ನೋಡ್ಕೋತೀವಿ.  ಫೈನಲ್​ನಲ್ಲಿ ನಾವು ಏನು? ನಾವು ಏನಲ್ಲ ಎಂಬುದನ್ನು ತೋರಿಸುತ್ತೇವೆ. ಆವಾಗ ನೋಡೋಣ ಎಂದು ಶಾಹೀನ್ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

ಇದೀಗ ಶಾಹೀನ್ ಅಫ್ರಿದಿಯ ಹೇಳಿಕೆಯು ಭಾರೀ ವೈರಲ್ ಆಗಿದ್ದು, ಟೀಮ್ ಇಂಡಿಯಾ ಅಭಿಮಾನಿಗಳು ಪಾಕ್ ತಂಡವು ಫೈನಲ್​ಗೇರುವುದನ್ನು ಎದುರು ನೋಡುತ್ತಿದ್ದಾರೆ. ಈ ಮೂಲಕ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಬಯಸುತ್ತಿದ್ದಾರೆ.

Published On - 12:24 pm, Thu, 25 September 25

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು