AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆಟಗಾರ್ತಿ ಕ್ರಾಂತಿ ಗೌಡ್ ಜೊತೆ ಅನುಚಿತವಾಗಿ ವರ್ತಿಸಿದ ಪಾಕ್ ಫ್ಯಾನ್ಸ್

2026ರ ಏಷ್ಯಾಕಪ್ ಭಾರತ-ಪಾಕ್ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು. ಈ ವೇಳೆ ಗ್ಯಾಲರಿಯಲ್ಲಿದ್ದ ಪಾಕಿಸ್ತಾನಿ ಅಭಿಮಾನಿಗಳು ಭಾರತದ ಆಟಗಾರ್ತಿ ಕ್ರಾಂತಿ ಗೌಡ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಅಸಭ್ಯ ಕಾಮೆಂಟ್ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು, ಕ್ರಾಂತಿ ಗೌಡಗೆ ಅವಮಾನ ಮಾಡಿದ ಪಾಕ್ ಅಭಿಮಾನಿಗಳ ವಿರುದ್ಧ ಭಾರತೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಆಟಗಾರ್ತಿ ಕ್ರಾಂತಿ ಗೌಡ್ ಜೊತೆ ಅನುಚಿತವಾಗಿ ವರ್ತಿಸಿದ ಪಾಕ್ ಫ್ಯಾನ್ಸ್
ಭಾರತ ಮಹಿಳಾ ತಂಡ
ಪೃಥ್ವಿಶಂಕರ
|

Updated on:Sep 06, 2026 | 3:36 PM

Share

2026 ರ ಏಷ್ಯಾಕಪ್ನ 9ನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟವಿರಲಿದೆ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ಅದಕ್ಕೆ ಅವಕಾಶ ಮಾಡಿಕೊಡದ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಪಾಕಿಸ್ತಾನವನ್ನು ಕೇವಲ 55 ರನ್​ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು. ಇನ್ನು ಇದೇ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಕುಳಿತಿದ್ದ ಪಾಕಿಸ್ತಾನದ ಅಭಿಮಾನಿಗಳು ಟೀಂ ಇಂಡಿಯಾ ಆಟಗಾರ್ತಿ ಕ್ರಾಂತಿ ಗೌಡ್ ಅವರ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಭಾರತೀಯರು ಪಾಕಿಗಳ ಮನಸ್ಥಿತಿಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.

ಪಾಕಿಸ್ತಾನಿ ಫ್ಯಾನ್ಸ್ ಅತಿರೇಕ

ಒಂದೆಡೆ ಪಾಕಿಸ್ತಾನ ತಂಡ ಭಾರತದ ಬೌಲಿಂಗ್ ಮುಂದೆ ಕ್ರೀಸ್​ನಲ್ಲಿ ನಿಲ್ಲಲು ಕಷ್ಟಪಡುತ್ತಿದ್ದರೆ, ಇನ್ನೊಂದೆಡೆ ಪಾಕಿಸ್ತಾನದ ಅಭಿಮಾನಿಗಳು ತಂಡದ ಕಳಪೆ ಪ್ರದರ್ಶನವನ್ನು ನೋಡಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡವರಂತೆ ವರ್ತಿಸಲಾರಂಭಿಸಿದ್ದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಲಾರಂಭಿಸಿದ ಪಾಕಿಸ್ತಾನ ತಂಡ ಒಂದರ ಹಿಂದೆ ಒಂದರಂತೆ ವಿಕೆಟ್ ಕಳೆದುಕೊಳ್ಳಲಾರಂಭಿಸಿತು. ಇದರಿಂದ ಗ್ಯಾಲರಿಯಲ್ಲಿ ಕುಳಿತಿದ್ದ ಪಾಕಿಸ್ತಾನದ ಅಭಿಮಾನಿಗಳು ತಂಡದ ಕಳಪೆ ಪ್ರದರ್ಶನವನ್ನು ನೋಡಲಾಗದೆ ಟೀಂ ಇಂಡಿಯಾ ಆಟಗಾರ್ತಿಯರ ಮೇಲೆ ಅಸಹ್ಯಕರ ರೀತಿಯಲ್ಲಿ ಕಾಮೆಂಟ್ ಮಾಡಲು ಪ್ರಾರಂಭಿಸಿದ್ದಾರೆ. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೇ ಹುಡುಗ ಇಲ್ಲಿ ಬಾ

ವೈರಲ್ ಆಗಿರುವ ವಿಡಿಯೋದಲ್ಲಿ, ‘ಟೀಂ ಇಂಡಿಯಾದ ಯುವ ಬೌಲರ್ ಕ್ರಾಂತಿ ಗೌಡ್ ಬೌಂಡರಿ ಲೈನ್ ಬಳಿ ಫಿಲ್ಡಿಂಗ್ ಮಾಡುತ್ತಿರುತ್ತಾರೆ. ಇದೇ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ಕೆಲವು ಪಾಕಿಸ್ತಾನಿ ಅಭಿಮಾನಿಗಳು, ಕ್ರಾಂತಿಯವರನ್ನು ಗುರಿಯಾಗಿಸಿಕೊಂಡು, ‘ಹೇ ಹುಡುಗ, ಹೇ ಹುಡುಗ, ಹುಡುಗ ಕ್ರಿಕೆಟ್ ಆಡುತ್ತಿದ್ದಾನೆ. ಹೇ ಹುಡುಗ ಇಲ್ಲಿ ಬಾ, ಭಾರತ ಹೇಗೆ ಗೆಲ್ಲುತ್ತಿದೆ ಎಂದು ಗೊತ್ತಾಯಿತು. ಹುಡುಗನನ್ನು ಆಡಿಸಿ ಭಾರತ ಪಂದ್ಯವನ್ನು ಗೆಲ್ಲುತ್ತಿದೆ ಎಂದಿದ್ದಾರೆ. ಇದೀಗ ಈ ವಿಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಆದಾಗ್ಯೂ ಈ ವೈರಲ್ ವಿಡಿಯೋದಲ್ಲಿ ಈ ರೀತಿಯ ಕಾಮೆಂಟ್​ಗಳನ್ನು ಮಾಡಿರುವ ವ್ಯಕ್ತಿ ಯಾರೆಂಬುದು ಖಚಿತವಾಗಿಲ್ಲ.

ಕೇವಲ 52 ಎಸೆತಗಳಲ್ಲಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ

ಸುಲಭವಾಗಿ ಗೆದ್ದ ಟೀಂ ಇಂಡಿಯಾ

ಪಂದ್ಯದ ವಿಚಾರಕ್ಕೆ ಬರುವುದಾದರೆ.. ದುಬೈನ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದಾಗ್ಯೂ ತಂಡಕ್ಕೆ ಮೂರಂಕಿ ಗಡಿ ದಾಟಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ತಂಡ 18.1 ಓವರ್‌ಗಳಲ್ಲಿ 55 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ, ಭಾರತ 8.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 57 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Sun, 6 September 26

Follow Us