AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ಸೆಮಿಫೈನಲ್ ಎದುರಾಳಿ ಯಾರು?

2026ರ ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡ ಗುಂಪು ಎ ಯಿಂದ ಅಜೇಯವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಸೆಪ್ಟೆಂಬರ್ 10ರಿಂದ ಆರಂಭವಾಗುವ ಸೆಮಿಫೈನಲ್‌ನಲ್ಲಿ ಭಾರತ ಬಿ ಗುಂಪಿನ ಎರಡನೇ ಸ್ಥಾನಿ ತಂಡವನ್ನು ಎದುರಿಸಲಿದೆ. ಬಾಂಗ್ಲಾದೇಶ ಮತ್ತು ಯುಎಇ ನಡುವಿನ ಪಂದ್ಯವು ಭಾರತದ ಎದುರಾಳಿಯನ್ನು ನಿರ್ಧರಿಸುತ್ತದೆ. ಶ್ರೀಲಂಕಾ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದು, ಇನ್ನೊಂದು ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಎದುರಿಸುವ ನಿರೀಕ್ಷೆಯಿದೆ.

ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ಸೆಮಿಫೈನಲ್ ಎದುರಾಳಿ ಯಾರು?
Team India
ಪೃಥ್ವಿಶಂಕರ
|

Updated on:Sep 07, 2026 | 4:00 PM

Share

2026 ರ ಏಷ್ಯಾಕಪ್​ನಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ಮಹಿಳಾ ತಂಡ ಎ ಗುಂಪಿನಿಂದ ಮೊದಲ ಸ್ಥಾನ ಪಡೆದುಕೊಂಡು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಗುಂಪು ಹಂತದ ಮೊದಲ ಥೈಲ್ಯಾಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಹಾಂಕ್ ಕಾಂಗ್ ಚೀನಾ ತಂಡವನ್ನು ಸೋಲಿಸಿತ್ತು. ಆ ನಂತರ ನಡದಿದ್ದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿದ ಹರ್ಮನ್ಪ್ರೀತ್ ಪಡೆ ಅಜೇಯ ತಂಡದವಾಗಿ ಸೆಮಿಫೈನಲ್​ಗೇರಿದೆ. ಸೆಮಿಫೈನಲ್ ಸುತ್ತು ಸೆಪ್ಟೆಂಬರ್ 10 ರಿಂದ ಆರಂಭವಾಗಲಿದ್ದು, ಈ ಸುತ್ತಿನಲ್ಲಿ ಟೀಂ ಇಂಡಿಯಾದ ಎದುರಾಳಿ ಯಾರು ಎಂಬುದು ಈಗ ಪ್ರಶ್ನೆಯಾಗಿದೆ.

ಟೀಂ ಇಂಡಿಯಾದ ಎದುರಾಳಿ ಯಾರು?

ಮೇಲೆ ಹೇಳಿದಂತೆ ಗುಂಪು ಎ ಯಲ್ಲಿ ಥೈಲ್ಯಾಂಡ್, ಹಾಂಗ್ ಕಾಂಗ್ ಮತ್ತು ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ತಂಡ 6 ಅಂಕಗಳೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಈ ಗುಂಪಿನಲ್ಲಿ ಭಾರತ ಅಗ್ರ ಸ್ಥಾನವನ್ನು ಪಡೆದುಕೊಂಡಿರುವುದರಿಂದ ಸೆಮಿಫೈನಲ್‌ನಲ್ಲಿ, ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ತಂಡವನ್ನು ಎದುರಿಸಬೇಕಾಗುತ್ತದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ನಡೆಯಲಿದೆ. ಗ್ರೂಪ್ ಎ ನಿಂದ ಸೆಮಿಫೈನಲ್ ರೇಸ್‌ನಲ್ಲಿರುವ ಎರಡು ತಂಡಗಳು ಪಾಕಿಸ್ತಾನ ಮತ್ತು ಥೈಲ್ಯಾಂಡ್. ಆದರೆ, ಥೈಲ್ಯಾಂಡ್ ಮೂರು ಪಂದ್ಯಗಳನ್ನು ಆಡಿದೆ, ಆದರೆ ಪಾಕಿಸ್ತಾನ ತನ್ನ ಕೊನೆಯ ಪಂದ್ಯವನ್ನು ಹಾಂಗ್ ಕಾಂಗ್ ವಿರುದ್ಧ ಆಡಬೇಕಾಗಿದೆ.

2ನೇ ಸೆಮಿಫೈನಲ್ ಯಾರ ನಡುವೆ?

ಶ್ರೀಲಂಕಾ ಆಡಿರುವ ಮೂರು ಪಂದ್ಯಗಳನ್ನು ಗೆದ್ದು, ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಶ್ರೀಲಂಕಾ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ಅಂತವನ್ನು ಎದುರಿಸಲಿದೆ. ಅಂದರೆ ಸೆಮಿಫೈನಲ್​ನಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಇತ್ತ ಮೊದಲ ಸೆಮಿಫೈನಲ್​ನಲ್ಲಿ ಭಾರತದ ಎದುರಾಳಿ ಯಾರಾಗಬಹುದು ಎಂಬುದು ಇಂದು ಖಚಿತವಾಗಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾವನ್ನು ಹೊರತುಪಡಿಸಿ ಬಾಂಗ್ಲಾದೇಶ ಮತ್ತು ಯುಎಇ ತಲಾ 2 ಅಂಕಗಳೊಂದಿಗೆ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಟಿ20 ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ?

ಭಾರತಕ್ಕೆ ಬಾಂಗ್ಲಾ ಎದುರಾಳಿ?

ನಾಳೆ ನಡೆಯಲಿರುವ ಬಿ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಯುಎಇ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ಮೊದಲ ಸೆಮಿಫೈನಲ್​ನಲ್ಲಿ ಭಾರತವನ್ನು ಎದುರಿಸಲಿದೆ. ಉಭಯ ತಂಡಗಳ ಬಲಾಬಲವನ್ನು ನೋಡಿದರೆ, ಬಾಂಗ್ಲಾದೇಶ ಕೊಂಚ ಮೇಲುಗೈ ಸಾಧಿಸಿದೆ. ಹೀಗಾಗಿ ಟೀಂ ಇಂಡಿಯಾದೆದುರು ಬಾಂಗ್ಲಾದೇಶ ಸ್ಪರ್ಧೆಗಿಳಿಯುವ ಸಾಧ್ಯತೆ ಇದೆ. ಈ ಪಂದ್ಯದಲ್ಲಿ ಗೆದ್ದ ತಂಡ ಎರಡನೇ ಸೆಮಿಫೈನಲ್​ನಲ್ಲಿ ಗೆದ್ದ ತಂಡವನ್ನು ಫೈನಲ್​ನಲ್ಲಿ ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Mon, 7 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!