ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್: ಭಾರತ ಎ ಮೊದಲ ಪಂದ್ಯ ಯಾವಾಗ? ಲೈವ್ ವೀಕ್ಷಣೆ ಎಲ್ಲಿ?

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯಲ್ಲಿ ಭಾರತ ಎ ತಂಡ ನವೆಂಬರ್ 20 ರಂದು ನೇಪಾಳವನ್ನು ಎದುರಿಸಲಿದೆ. ತಿಲಕ್ ವರ್ಮಾ ನಾಯಕತ್ವದ ಭಾರತ ಎ, ಪ್ರಬಲ ತಂಡವನ್ನು ಕಣಕ್ಕಿಳಿಸಿದೆ. ಈ 50 ಓವರ್‌ಗಳ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದ್ದು, ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲಿವ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್: ಭಾರತ ಎ ಮೊದಲ ಪಂದ್ಯ ಯಾವಾಗ? ಲೈವ್ ವೀಕ್ಷಣೆ ಎಲ್ಲಿ?
ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026

Updated on: Nov 19, 2026 | 6:48 PM

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಗೆ ಚಾಲನೆ ಸಿಕ್ಕಿದೆ. ಪಂದ್ಯಾವಳಿಯ ಎರಡನೇ ದಿನದಂದು ಅಂದರೆ ನವೆಂಬರ್ 20 ರಂದು ಭಾರತ ಎ ತಂಡ ತನ್ನ ಮೊದಲ ಪಂದ್ಯವನ್ನಾಡಲಿದೆ. ಈ ಟೂರ್ನಿಯಲ್ಲಿ ಭಾರತ ಎ ತಂಡವನ್ನು ತಿಲಕ್ ವರ್ಮಾ ಮುನ್ನಡೆಸುತ್ತಿದ್ದು, ಬಲಿಷ್ಠ ತಂಡವನ್ನು ಕಣಕ್ಕಿಳಿಸಿಲು ಬಿಸಿಸಿಐ ಸಿದ್ಧತೆ ಮಾಡಿಕೊಂಡಿದೆ. ಅದರಂತೆ ಭಾರತ ಎ ತಂಡ ತನ್ನ ಮೊದಲ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಇತ್ತೀಚಿನ ದಿನಗಳಲ್ಲಿ ನೇಪಾಳ ತಂಡ ಕೂಡ ಬಲಿಷ್ಠ ತಂಡಗಳನ್ನು ಮಣಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದೆ. ಹೀಗಾಗಿ ಟೀಂ ಇಂಡಿಯಾ, ನೇಪಾಳವನ್ನು ಕಡೆಗಣಿಸುವಂತಿಲ್ಲ. ಉಳಿದಂತೆ ಈ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಇಂತಿದೆ.

ಕಳೆದ ಆವೃತ್ತಿಯ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯನ್ನು ಟಿ20 ಮಾದರಿಯಲ್ಲಿ ನಡೆಸಲಾಗಿತ್ತು. ಆದರೆ, ಈ ಬಾರಿ ಪಂದ್ಯಾವಳಿ 50 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಒಟ್ಟು ಎಂಟು ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿದ್ದು, ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.

Loading...

ಯಾವ ತಂಡ ಯಾವ ಗುಂಪಿನಲ್ಲಿದೆ?

ಗುಂಪು ಎ

  • ಶ್ರೀಲಂಕಾ ಎ
  • ಬಾಂಗ್ಲಾದೇಶ ಎ
  • ಅಫ್ಘಾನಿಸ್ತಾನ ಎ
  • ಹಾಂಗ್ ಕಾಂಗ್

ಗುಂಪು ಬಿ

  • ಭಾರತ ಎ
  • ಪಾಕಿಸ್ತಾನ ಎ
  • ನೇಪಾಳ
  • ಯುಎಇ

ಲೀಗ್ ಹಂತದಲ್ಲಿ ಪ್ರತಿ ತಂಡವು ತನ್ನ ಗುಂಪಿನ ಉಳಿದ ಮೂರು ತಂಡಗಳ ವಿರುದ್ಧ ತಲಾ ಒಂದು ಪಂದ್ಯ ಆಡಲಿದೆ. ಈ ಹಂತದಲ್ಲಿ ಒಟ್ಟು 12 ಪಂದ್ಯಗಳು ನಡೆಯಲಿವೆ. ಎರಡೂ ಗುಂಪುಗಳಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿವೆ.

ಭಾರತ ಎ ಮತ್ತು ನೇಪಾಳ ತಂಡಗಳ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಭಾರತ ಎ ಮತ್ತು ನೇಪಾಳ ತಂಡಗಳು ನವೆಂಬರ್ 20ರ ಶುಕ್ರವಾರ ದೋಹಾದಲ್ಲಿ ಮುಖಾಮುಖಿಯಾಗಲಿವೆ.

ಭಾರತ ಎ ಮತ್ತು ನೇಪಾಳ ತಂಡಗಳ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಎ ಮತ್ತು ನೇಪಾಳ ತಂಡಗಳ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ.

ಭಾರತ ಎ ಮತ್ತು ನೇಪಾಳ ತಂಡಗಳ ನಡುವಿನ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026ರ ಪ್ರಸಾರ ಹಕ್ಕು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಬಳಿಯಿದೆ. ಹೀಗಾಗಿ ಟಿವಿಯಲ್ಲಿ ಪಂದ್ಯ ವೀಕ್ಷಿಸಲು ಬಯಸುವವರು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳನ್ನು ವೀಕ್ಷಿಸಬಹುದು. ಇನ್ನು ಮೊಬೈಲ್‌ನಲ್ಲಿ ಪಂದ್ಯವನ್ನು ಲೈವ್ ಆಗಿ ನೋಡಲು ಸೋನಿ ಲಿವ್ ಆ್ಯಪ್ ಬಳಸಬಹುದು. ಆದರೆ ಉಚಿತವಾಗಿ ಪಂದ್ಯ ವೀಕ್ಷಿಸಲು ಯಾವುದೇ ಆಯ್ಕೆ ಲಭ್ಯವಿಲ್ಲ. ಸೋನಿ ಲಿವ್‌ನ ಚಂದಾದಾರಿಕೆ ಪಡೆದುಕೊಳ್ಳಬೇಕಾಗುತ್ತದೆ.

ಭಾರತ ಎ ತಂಡ: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ನಾಯಕ), ರಿಂಕು ಸಿಂಗ್ (ಉಪನಾಯಕ), ಕುಮಾರ್ ಕುಶಾಗ್ರ, ಸೂರ್ಯಾಂಶ್ ಶೆಡ್ಗೆ, ಶಹಬಾಜ್ ಅಹ್ಮದ್, ವಿಪ್ರಜ್ ನಿಗಮ್, ಹರ್ಷ್ ದುಬೆ, ತನೂಷ್ ಕೋಟ್ಯಾನ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್, ಅರ್ಷದ್ ಖಾನ್. ಆಯುಷ್ ಬಡೋನಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us