ಭಾರತ-ಪಾಕ್ ಹೈವೋಲ್ಟೇಜ್ ಕದನ: ಟಾಸ್ ಗೆದ್ದ ಪಾಕಿಸ್ತಾನ, ಟೀಂ ಇಂಡಿಯಾ ಬೌಲಿಂಗ್

ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳ ನಡುವಿನ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026ರ ಪಂದ್ಯದ ಪೂರ್ವವೀಕ್ಷಣೆ. ಭಾರತವು ನೇಪಾಳ ವಿರುದ್ಧ ಭರ್ಜರಿ ಗೆಲುವು ಸಾಧಿಸಿ, ಸಜ್ಜಾಗಿದೆ. ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಎರಡೂ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸುತ್ತದೆ ಎಂದು ಕಾದು ನೋಡಬೇಕು.

ಭಾರತ-ಪಾಕ್ ಹೈವೋಲ್ಟೇಜ್ ಕದನ: ಟಾಸ್ ಗೆದ್ದ ಪಾಕಿಸ್ತಾನ, ಟೀಂ ಇಂಡಿಯಾ ಬೌಲಿಂಗ್
ಭಾರತ Vs ಪಾಕಿಸ್ತಾನ

Updated on: Nov 22, 2026 | 3:20 PM

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026ರ ಮೊದಲ ಪಂದ್ಯದಲ್ಲೇ ನೇಪಾಳ ವಿರುದ್ಧ 306 ರನ್‌ಗಳ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಎ ತಂಡ ಇದೀಗ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎ ತಂಡವನ್ನು ಎದುರಿಸಲು ಸಜ್ಜಾಗಿದೆ. ದೋಹಾದ ವೆಸ್ಟ್ ಎಂಡ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗ್ರೂಪ್ ಬಿ ಹಂತದ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಭಾರತ ಮತ್ತು ಪಾಕಿಸ್ತಾನ ಗುಂಪು ಬಿಯಲ್ಲಿ ಸ್ಥಾನ ಪಡೆದಿವೆ. ಎರಡೂ ತಂಡಗಳು ಒಂದು ಗೆಲುವಿನೊಂದಿಗೆ ತಲಾ ಎರಡು ಅಂಕಗಳನ್ನು ಹೊಂದಿವೆ. ಆದರೆ ಅವರ ಅತ್ಯುತ್ತಮ ರನ್ ರೇಟ್ ಆಧಾರದ ಮೇಲೆ, ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನದಲ್ಲಿದೆ.

ಟಾಸ್ ಗೆದ್ದ ಪಾಕಿಸ್ತಾನ

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಹೀಗಾಗಿ ಟಾಸ್ ಸೋತ ಭಾರತ ಮೊದಲು ಬೌಲಿಂಗ್ ಮಾಡಲಿದೆ. ಟಾಸ್ ಬಳಿಕ ಮಾತನಾಡಿದ ತಿಲಕ್, ಟಾಸ್ ಗೆದ್ದಿದ್ದರೆ ನಾವು ಸಹ ಮೊದಲು ಬ್ಯಾಟಿಂಗ್ ಮಾಡುತ್ತಿದ್ದೇವು ಎಂದರು. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರರೇ ಈ ಪಂದ್ಯದಲ್ಲೂ ಆಡಲಿದ್ದಾರೆ.

Loading...

ಉಭಯ ತಂಡಗಳ ಪ್ಲೇಯಿಂಗ್

ಭಾರತ ಎ ತಂಡ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಆಯುಷ್ ಬದೋನಿ, ತಿಲಕ್ ವರ್ಮಾ (ನಾಯಕ), ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ರಿಂಕು ಸಿಂಗ್, ಸೂರ್ಯಾಂಶ್ ಶೆಡ್ಗೆ, ಶಹಬಾಜ್ ಅಹ್ಮದ್, ವಿಪ್ರಜ್ ನಿಗಮ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್.

ಪಾಕಿಸ್ತಾನ ಎ ತಂಡ: ಶಮೀಲ್ ಹುಸೇನ್, ಮಾಜ್ ಸದಾಕತ್, ರೋಹೈಲ್ ನಜೀರ್ (ವಿಕೆಟ್ ಕೀಪರ್), ಹಸನ್ ನವಾಜ್, ಅಬ್ದುಲ್ ಸಮದ್ (ನಾಯಕ), ಫರಹ್ಮಾನ್ ಯೂಸುಫ್, ಸಾದ್ ಮಸೂದ್, ಮೊಹಮ್ಮದ್ ಇಮ್ರಾನ್ ರಾಂಧವಾ, ಅಹ್ಮದ್ ದಾನಿಯಾಲ್, ಸುಫ್ಯಾನ್ ಮೋಕಿಮ್, ಅಲಿ ರಜಾ.

Published On - 3:18 pm, Sun, 22 November 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us