AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ಪತ್ರಕ್ಕೆ ಟ್ರೋಫಿ ಕಳ್ಳ ಮೊಹ್ಸಿನ್ ನಖ್ವಿಯಿಂದ ದುರಹಂಕಾರದ ಉತ್ತರ

Asia Cup Trophy Dispute: 2025ರ ಏಷ್ಯಾಕಪ್ ಗೆದ್ದ ಭಾರತಕ್ಕೆ ಇಂದಿಗೂ ಟ್ರೋಫಿ ಸಿಕ್ಕಿಲ್ಲ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಬಿಸಿಸಿಐಗೆ ಟ್ರೋಫಿ ಹಸ್ತಾಂತರಿಸಲು ನಿರಾಕರಿಸಿದ್ದಾರೆ. ದುಬೈನಿಂದ ಬಂದು ಟ್ರೋಫಿ ತೆಗೆದುಕೊಳ್ಳುವಂತೆ ನಖ್ವಿ ಹೇಳಿದರೆ, ಬಿಸಿಸಿಐ ಅದನ್ನು ತಿರಸ್ಕರಿಸಿದೆ. ಈಗ ಬಿಸಿಸಿಐ ಈ ವಿವಾದವನ್ನು ಐಸಿಸಿಗೆ ಕೊಂಡೊಯ್ಯಲು ನಿರ್ಧರಿಸಿದೆ. ಜಯ್ ಶಾ ಐಸಿಸಿ ಮುಖ್ಯಸ್ಥರಾಗಿರುವುದರಿಂದ ನಖ್ವಿಗೆ ಮುಜುಗರ ಎದುರಾಗಬಹುದು.

ಬಿಸಿಸಿಐ ಪತ್ರಕ್ಕೆ ಟ್ರೋಫಿ ಕಳ್ಳ ಮೊಹ್ಸಿನ್ ನಖ್ವಿಯಿಂದ ದುರಹಂಕಾರದ ಉತ್ತರ
Asia Cup
ಪೃಥ್ವಿಶಂಕರ
|

Updated on:Oct 22, 2025 | 5:52 PM

Share

2025 ರ ಏಷ್ಯಾಕಪ್ (Asia Cup) ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ (India vs Pakistan) ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಈ ಟೂರ್ನಿ ನಡೆದು ತಿಂಗಳಾಗುತ್ತ ಬಂದರೂ ಚಾಂಪಿಯನ್ ಟೀಂ ಇಂಡಿಯಾಕ್ಕೆ ಮಾತ್ರ ಟ್ರೋಫಿಯನ್ನು ಎತ್ತಿಹಿಡಿಯುವ ಅವಕಾಶ ಸಿಕ್ಕಿಲ್ಲ. ಪಿಸಿಬಿ ಹಾಗೂ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ (Mohsin Naqvi) ಭಾರತ ತಂಡ ಟ್ರೋಫಿ ಸ್ವೀಕರಿಸಲು ನಿರಾಕರಿಸಿತ್ತು. ಇದರಿಂದ ಮುಜುಗರಕ್ಕೊಳಗಾಗಿರುವ ನಖ್ವಿ, ಏಷ್ಯಾಕಪ್ ಟ್ರೋಫಿಯನ್ನು ಭಾರತಕ್ಕೆ ನೀಡಲು ನಿರಾಕರಿಸಿದ್ದರು. ಹೀಗಾಗಿ ಟ್ರೋಫಿಯನ್ನು ಪ್ರಸ್ತುತ ಎಸಿಸಿ ಕಚೇರಿಯಲ್ಲಿ ಇರಿಸಲಾಗಿದೆ. ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಬಿಸಿಸಿಐ (BCCI) ಮೊಹ್ಸಿನ್ ನಖ್ವಿಗೆ ಇಮೇಲ್ ಕಳುಹಿಸಿದ್ದು, ಟ್ರೋಫಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದೆ. ಆದರೆ ನಖ್ವಿ ಮಾತ್ರ ಟ್ರೋಫಿ ಹಸ್ತಾಂತರಕ್ಕೆ ನಾನಾ ಷರತ್ತುಗಳನ್ನು ಹಾಕುತ್ತಿದ್ದಾರೆ. ನಖ್ವಿ ಷರತ್ತುಗಳಿಗೆ ಒಪ್ಪದ ಬಿಸಿಸಿಐ ಈಗ ಈ ವಿಷಯವನ್ನು ಐಸಿಸಿಗೆ ಕೊಂಡೊಯ್ಯಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಬಿಸಿಸಿಐ ವಿರುದ್ಧ ನಖ್ವಿ ಮೊಂಡುತನ

ಬಿಸಿಸಿಐ ಕಳುಹಿಸಿರುವ ಇಮೇಲ್​ಗೆ ಉತ್ತರಿಸಿರುವ ಮೊಹ್ಸಿನ್ ನಖ್ವಿ, ದುಬೈನಲ್ಲಿರುವ ಎಸಿಸಿ ಪ್ರಧಾನ ಕಚೇರಿಯಿಂದ ಬಿಸಿಸಿಐ ಅಧಿಕಾರಿಗಳು ಹಾಗೂ ಲಭ್ಯವಿರುವ ಆಟಗಾರರು ಟ್ರೋಫಿಯನ್ನು ತನ್ನ ಕೈನಿಂದ ಪಡೆಯಬೇಕು ಎಂದಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮಗಳಿಗೆ ಈ ಬಗ್ಗೆ ಹೇಳಿಕೆ ನೀಡಿರುವ ನಖ್ವಿ, ‘ಬಿಸಿಸಿಐ ಜೊತೆ ಹಲವಾರು ಪತ್ರಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ನವೆಂಬರ್ 10 ರಂದು ದುಬೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಟ್ರೋಫಿಯನ್ನು ಸ್ವೀಕರಿಸಲು ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಅವರ ಆಟಗಾರರನ್ನು ಬಿಸಿಸಿಐ ಅಧಿಕಾರಿ ರಾಜೀವ್ ಶುಕ್ಲಾ ಅವರೊಂದಿಗೆ ಆಹ್ವಾನಿಸಲು ನಾವು ಸಿದ್ಧರಿದ್ದೇವೆ ಎಂದಿದ್ದಾರೆ.

ನಖ್ವಿ ಆಫರ್ ಒಪ್ಪದ ಬಿಸಿಸಿಐ

ಆದರೆ ನಖ್ವಿ ಅವರ ಈ ಆಹ್ವಾನವನ್ನು ಬಿಸಿಸಿಐ ನಿರಾಕರಿಸಿದ್ದು, ಈ ವಿಷಯವನ್ನು ಈಗ ಐಸಿಸಿ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ‘ಬಿಸಿಸಿಐ ಕಾರ್ಯದರ್ಶಿ, ಬಿಸಿಸಿಐನ ಎಸಿಸಿ ಪ್ರತಿನಿಧಿ ರಾಜೀವ್ ಶುಕ್ಲಾ ಮತ್ತು ಶ್ರೀಲಂಕಾ ಕ್ರಿಕೆಟ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಇತರ ಸದಸ್ಯ ಮಂಡಳಿಗಳ ಪ್ರತಿನಿಧಿಗಳು ಕಳೆದ ವಾರ ಎಸಿಸಿ ಅಧ್ಯಕ್ಷರಿಗೆ ಭಾರತಕ್ಕೆ ಟ್ರೋಫಿಯನ್ನು ಹಸ್ತಾಂತರಿಸುವ ಬಗ್ಗೆ ಇಮೇಲ್ ಮಾಡಿದ್ದಾರೆ’ ಎಂದು ಎಸಿಸಿ ಮೂಲವೊಂದು ಪಿಟಿಐಗೆ ತಿಳಿಸಿದೆ.

ಏಷ್ಯಾಕಪ್‌ ಟ್ರೋಫಿ ವಿಚಾರದಲ್ಲಿ ಮೊಂಡುತನ ಮುಂದುವರೆಸಿದ ಮೊಹ್ಸಿನ್ ನಖ್ವಿ

ಜಯ್ ಶಾ ಮುಂದೆ ಟ್ರೋಫಿ ವಿವಾದ

ಈಗ ಏಷ್ಯಾಕಪ್ ಟ್ರೋಫಿ ವಿವಾದವನ್ನು ಐಸಿಸಿ ಮುಂದೆ ಎತ್ತಿದರೆ, ಪಿಸಿಬಿ ಮತ್ತು ಎಸಿಸಿ ಮುಖ್ಯಸ್ಥ ನಖ್ವಿ ತೀವ್ರ ಮುಜುಗರವನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಐಸಿಸಿ ಮುಖ್ಯಸ್ಥರಾಗಿರುವ ಜಯ್ ಶಾ, ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ನಖ್ವಿ ಎದುರು, ಬಿಸಿಸಿಐ ಮೇಲುಗೈ ಸಾಧಿಸುವ ಸಾಧ್ಯತೆಗಳಿವೆ ಎನ್ನಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Wed, 22 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ