ಇಂದು ಭಾರತ- ಜಪಾನ್ ನಡುವೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮೀಸ್ ಫೈಟ್; ಪಂದ್ಯ ಆರಂಭ ಎಷ್ಟು ಗಂಟೆಗೆ?
Asian Champions Trophy 2023: ಚೆನ್ನೈನಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಭಾರತ ಹಾಕಿ ತಂಡ ಒಂದೇ ಒಂದು ಪಂದ್ಯವನ್ನು ಸೋಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು, ಸೆಮಿಫೈನಲ್ಗೆ ಎಂಟ್ರಿಕೊಟ್ಟಿದೆ.
ಚೆನ್ನೈನಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ (Asian Champions Trophy 2023) ಗುಂಪು ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಭಾರತ ಹಾಕಿ ತಂಡ (Hockey India) ಒಂದೇ ಒಂದು ಪಂದ್ಯವನ್ನು ಸೋಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು, ಸೆಮಿಫೈನಲ್ಗೆ ಎಂಟ್ರಿಕೊಟ್ಟಿದೆ. ರೌಂಡ್ ರಾಬಿನ್ ಮಾದರಿಯಲ್ಲಿ ನಡೆದ ಲೀಗ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದ ಭಾರತ ಒಂದು ಪಂದ್ಯದವನ್ನು ಡ್ರಾ ಮಾಡಿಕೊಂಡಿತ್ತು. ಇದೀಗ ಹರ್ಮನ್‌ಪ್ರೀತ್ ಸಿಂಗ್ ನಾಯಕತ್ವದ ಭಾರತ ಪುರುಷರ ಹಾಕಿ ತಂಡ ಇಂದು ನಡೆಯಲ್ಲಿರುವ (ಆಗಸ್ಟ್ 11) ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ India vs Japan ತಂಡವನ್ನು ಎದುರಿಸಲಿದೆ.
ಗುಂಪು ಹಂತದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಆ ಪಂದ್ಯ 1-1 ರಿಂದ ಡ್ರಾಗೊಂಡಿತ್ತು. ಇದೀಗ ಈ ಎರಡು ತಂಡಗಳು ಸೆಮಿಫೈನಲ್ನಲ್ಲಿ ಕಣಕ್ಕಿಳಿಯುತ್ತಿರುವುದರಿಂದ ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು ವಿಶ್ವ ರ್ಯಾಂಕಿಂಗ್ನಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದ್ದರೆ, ಮತ್ತೊಂದೆಡೆ, ಜಪಾನ್ 19 ನೇ ಸ್ಥಾನದಲ್ಲಿದೆ. ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಜಪಾನ್ ಎದುರು ಭಾರತ ಬಲಿಷ್ಠವಾಗಿ ಕಾಣುತ್ತಿದ್ದರೂ, ಎದುರಾಳಿ ತಂಡವನ್ನು ಕಡೆಗಣಿಸುವಂತಿಲ್ಲ. ಹೀಗಾಗಿ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ 2-7 ಅಂತರದ ಜಯ ಸಾಧಿಸಿದ ಭಾರತ ಹಾಕಿ ತಂಡ
ಸೆಮಿಫೈನಲ್ ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಆಗಸ್ಟ್ 11, ಶುಕ್ರವಾರ ನಡೆಯಲಿದೆ.
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ರಾತ್ರಿ 8.30 ರಿಂದ ಆರಂಭವಾಗಲಿದೆ.
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಈ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ಜಪಾನ್ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯವನ್ನು ಯಾವ OTT ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಿಸಬಹುದು?
ವೀಕ್ಷಕರು ಭಾರತ ಮತ್ತು ಜಪಾನ್ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯವನ್ನು ಫ್ಯಾನ್‌ಕೋಡ್ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ