ಏಷ್ಯನ್ ಗೇಮ್ಸ್‌ ತಂಡಕ್ಕೆ ಆರ್​ಸಿಬಿ ಆಟಗಾರನ ಎಂಟ್ರಿ! ಮಹಿಳಾ ತಂಡದಲ್ಲೂ ಬದಲಾವಣೆ

Asian Games 2023: 2023 ರ ಏಷ್ಯನ್ ಕ್ರೀಡಾಕೂಟವು ಚೀನಾದ ಹ್ಯಾಂಗ್‌ಝೌನಲ್ಲಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಮಹಿಳಾ ಮತ್ತು ಪುರುಷರ ಕ್ರಿಕೆಟ್ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗಿವೆ. ಗಾಯದ ಸಮಸ್ಯೆಯಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದ್ದು, ಇಂಜುರಿಗೆ ತುತ್ತಾಗಿರುವ ವೇಗಿ ಶಿವಂ ಮಾವಿ ಬದಲು ಆರ್​ಸಿಬಿ ತಂಡದ ವೇಗದ ಬೌಲರ್​ ಆಕಾಶ್ ದೀಪ್ ಪುರುಷರ ತಂಡವನ್ನು ಸೇರಿಕೊಂಡಿದ್ದಾರೆ.

ಏಷ್ಯನ್ ಗೇಮ್ಸ್‌ ತಂಡಕ್ಕೆ ಆರ್​ಸಿಬಿ ಆಟಗಾರನ ಎಂಟ್ರಿ! ಮಹಿಳಾ ತಂಡದಲ್ಲೂ ಬದಲಾವಣೆ
ಆಕಾಶ್ ದೀಪ್, ಶಿವಂ ಮಾವಿ
Follow us
ಪೃಥ್ವಿಶಂಕರ
|

Updated on:Sep 17, 2023 | 10:27 AM

ಚೀನಾದ ಹ್ಯಾಂಗ್‌ಝೌನಲ್ಲಿ ಇದೇ ತಿಂಗಳು ಆರಂಭವಾಗಲಿರುವ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಈ ಬಾರಿ ಕ್ರಿಕೆಟ್ ಅನ್ನು ಸೇರಿಸಲಾಗಿದೆ. ಇದರಲ್ಲಿ ಭಾರತದ ಮಹಿಳಾ ಮತ್ತು ಪುರುಷರ ತಂಡಗಳು ( men’s and women’s cricket teams) ಭಾಗವಹಿಸುತ್ತಿವೆ. ಈ ಬಾರಿ ಭಾರತ ಕೂಡ ತನ್ನ ತಂಡಗಳನ್ನು ಈ ಪಂದ್ಯಗಳಲ್ಲಿ ಕಣಕ್ಕಿಳಿಸಲು ನಿರ್ಧರಿಸಿದೆ. ಆದರೆ, ಕೆಲವೇ ದಿನಗಳಲ್ಲಿ ವಿಶ್ವಕಪ್ ಆರಂಭವಾಗುವುದರಿಂದ ಭಾರತ ತನ್ನ ಪುರುಷರ ತಂಡದಲ್ಲಿ ಯಾವುದೇ ಹಿರಿಯ ಆಟಗಾರನನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಯುವ ಆಟಗಾರರು ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ತಂಡದ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ನೀಡಲಾಗಿದೆ. ಮಹಿಳಾ ತಂಡ ಪೂರ್ಣ ಬಲದೊಂದಿಗೆ ಕಣಕ್ಕಿಳಿಯುತ್ತಿದ್ದು, ತಂಡದ ಕಮಾಂಡ್ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಕೈಯಲ್ಲಿದೆ. ಆದರೆ ಈ ನಡುವೆ ಎರಡೂ ತಂಡಗಳಲ್ಲೂ ಒಂದೊಂದು ಬದಲಾವಣೆ ಮಾಡಿ ಬಿಸಿಸಿಐ ಆದೇಶ ಹೊರಡಿಸಿದೆ.

ತಂಡದಲ್ಲಿ ಬದಲಾವಣೆ ಏಕೆ?

2023 ರ ಏಷ್ಯನ್ ಕ್ರೀಡಾಕೂಟವು ಚೀನಾದ ಹ್ಯಾಂಗ್‌ಝೌನಲ್ಲಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಮಹಿಳಾ ಮತ್ತು ಪುರುಷರ ಕ್ರಿಕೆಟ್ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗಿವೆ. ಗಾಯದ ಸಮಸ್ಯೆಯಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದ್ದು, ಇಂಜುರಿಗೆ ತುತ್ತಾಗಿರುವ ವೇಗಿ ಶಿವಂ ಮಾವಿ ಬದಲು ಆರ್​ಸಿಬಿ ತಂಡದ ವೇಗದ ಬೌಲರ್​ ಆಕಾಶ್ ದೀಪ್ ಪುರುಷರ ತಂಡವನ್ನು ಸೇರಿಕೊಂಡಿದ್ದಾರೆ. ಹಾಗೆಯೇ ಈ ಹಿಂದೆ ಮಹಿಳಾ ತಂಡದಲ್ಲಿ ಮೀಸಲು ಆಟಗಾರ್ತಿಯಾಗಿ ಆಯ್ಕೆಯಾಗಿದ್ದ ಪೂಜಾ ವಸ್ತ್ರಾಕರ್ ಅವರನ್ನು ಎಡಗೈ ವೇಗಿ ಅಂಜಲಿ ಸರ್ವಾನಿ ಬದಲಿಗೆ ಮುಖ್ಯ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

Tilak Varma: ತಿಲಕ್ ವರ್ಮಾ ಏಷ್ಯನ್ ಗೇಮ್ಸ್​ನಲ್ಲಿ ಆಡುವುದು ಅನುಮಾನ..! ಕಾರಣವೇನು ಗೊತ್ತಾ?

ವಾಸ್ತವವಾಗಿ ಬೆನ್ನುನೋವಿನಿಂದ ಬಳಲುತ್ತಿರುವ ಟೀಂ ಇಂಡಿಯಾದ ವೇಗದ ಬೌಲರ್ ಶಿವಂ ಮಾವಿ ಏಷ್ಯನ್ ಗೇಮ್ಸ್‌ನಿಂದ ಹೊರಗುಳಿದಿದ್ದಾರೆ. ಮಾವಿ ಬದಲಿಗೆ ಆಕಾಶ್ ದೀಪ್​ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ಪಂದ್ಯಾವಳಿಯನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 8 ರವರೆಗೆ ಆಯೋಜಿಸಲಾಗಿದೆ.

ಏಷ್ಯನ್ ಗೇಮ್ಸ್​ಗೆ ಭಾರತ ಪುರುಷರ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್ , ಶಿವಂ ದುಬೆ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಆಕಾಶ್ ದೀಪ್.

ಸ್ಟ್ಯಾಂಡ್‌ಬೈ ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

ಏಷ್ಯನ್ ಗೇಮ್ಸ್​ಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ದೇವಿಕಾ ವೈದ್ಯ, ಟಿಟಾಸ್ ಸಾಧು, ರಾಜೇಶ್ವರಿ ಗಯಾಕ್ವಾಡ್ , ಕನಿಕಾ ಅಹುಜಾ, ಉಮಾ ಚೆಟ್ರಿ (ವಾಕ್), ಅನುಷಾ ಬಾರೆಡ್ಡಿ, ಪೂಜಾ ವಸ್ತ್ರಕರ್.

ಸ್ಟ್ಯಾಂಡ್‌ಬೈ ಆಟಗಾರ್ತಿಯರು: ಹರ್ಲೀನ್ ಡಿಯೋಲ್, ಕಾಶ್ವೀ ಗೌತಮ್, ಸ್ನೇಹ ರಾಣಾ, ಸೈಕಾ ಇಶಾಕ್.

Published On - 10:22 am, Sun, 17 September 23

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ