Asian Games 2023: ಸೆಮಿಫೈನಲ್‌ನಲ್ಲಿ ಸೋತ ಪಾಕ್! ಚಿನ್ನದ ಪದಕ್ಕಾಗಿ ಭಾರತ- ಅಫ್ಘಾನ್ ನಡುವೆ ಫೈಟ್

Asian Games 2023: ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಪಾಕಿಸ್ತಾನದ ಕನಸು ಭಗ್ನಗೊಂಡಿದೆ. ಹ್ಯಾಂಗ್‌ಝೌನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ಗೆ ಲಗ್ಗೆ ಇಟ್ಟಿದೆ.

Asian Games 2023: ಸೆಮಿಫೈನಲ್‌ನಲ್ಲಿ ಸೋತ ಪಾಕ್! ಚಿನ್ನದ ಪದಕ್ಕಾಗಿ ಭಾರತ- ಅಫ್ಘಾನ್ ನಡುವೆ ಫೈಟ್
ಅಫ್ಘಾನಿಸ್ತಾನ ತಂಡ
Follow us
ಪೃಥ್ವಿಶಂಕರ
|

Updated on:Oct 06, 2023 | 4:14 PM

ಏಷ್ಯನ್ ಗೇಮ್ಸ್ (Asian Games 2023) ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಪಾಕಿಸ್ತಾನದ ಕನಸು ಭಗ್ನಗೊಂಡಿದೆ. ಹ್ಯಾಂಗ್‌ಝೌನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಪಾಕಿಸ್ತಾನವನ್ನು (Afghanistan vs Pakistan) ಸೋಲಿಸಿ ಫೈನಲ್​ಗೆ ಲಗ್ಗೆ ಇಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 18 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 115 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಅಫ್ಘಾನ್ ತಂಡ 17.5 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು. ಇದೀಗ ಪಾಕ್ ತಂಡವನ್ನು ಮಣಿಸಿರುವ ಅಫ್ಘಾನಿಸ್ತಾನ ತಂಡ ಫೈನಲ್ ಪಂದ್ಯದಲ್ಲಿ ಭಾರತವನ್ನು (Team India) ಎದುರಿಸಲಿದೆ. ಈ ಪಂದ್ಯ ಶನಿವಾರ ನಡೆಯಲಿದೆ.

115 ರನ್ ಗಳಿಸಲಷ್ಟೇ ಶಕ್ತವಾಯಿತು

ಈ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಕಳಪೆ ಪ್ರದರ್ಶನ ನೀಡಿತು. ನಾಕ್‌ಔಟ್ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನ್ ನಾಯಕ ಗುಲ್ಬದಿನ್ ನೈಬ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಪಾಕಿಸ್ತಾನದ ಆರಂಭಿಕ ಆಟಗಾರ ಮಿರ್ಜಾ ಬೇಗ್ 4 ರನ್ ಗಳಿಸಿ ರನೌಟ್ ಆದರೆ, ವಿಕೆಟ್ ಕೀಪರ್ ರೋಹೈಲ್ ನಜೀರ್ ಕೂಡ 10 ರನ್ ಗಳಿಸಲಷ್ಟೇ ಶಕ್ತರಾದರು. ಇದಾದ ಬಳಿಕ ಪಾಕಿಸ್ತಾನದ ಮಧ್ಯಮ ಕ್ರಮಾಂಕ ಇಸ್ಪೀಟ್‌ ಎಲೆಗಳಂತೆ ಉದುರಿತು . ಹೈದರ್ ಅಲಿ 2 ರನ್, ನಾಯಕ ಖಾಸಿಮ್ ಅಕ್ರಮ್-9, ಖುಶ್ದಿಲ್ ಶಾ-8 ರನ್, ಆಸಿಫ್ ಅಲಿ ಕೇವಲ 8 ರನ್ ಗಳಿಸಿದರು. ಈ ಮೂಲಕ ಪಾಕಿಸ್ತಾನ ತಂಡ ಕೇವಲ 115 ರನ್ ಗಳಿಸಲಷ್ಟೇ ಶಕ್ತವಾಯಿತು.

IND vs BAN: ಏಷ್ಯನ್ ಗೇಮ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ: ಒಂದು ಪದಕ ಖಚಿತ

ಅಫ್ಘಾನ್ ಆರಂಭವೂ ಉತ್ತಮವಾಗಿರಲಿಲ್ಲ

ಕೇವಲ 116 ರನ್​ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾದ ಸೇಡಿಕಲ್ಲಾ ಅಟಲ್ ಮತ್ತು ಮೊಹಮ್ಮದ್ ಶಹಜಾದ್ 9 ರನ್ ಗಳಿಸಿ ಔಟಾದರು. ಶಾಹಿದಿವುಲ್ಲಾ ಕಮಾಲ್ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಆದರೆ ಆ ಬಳಿಕ ನೂರ್ ಅಲಿ ಜದ್ರಾನ್ 33 ಎಸೆತಗಳಲ್ಲಿ 39 ರನ್ ಮತ್ತು ನಾಯಕ ಗುಲ್ಬದಿನ್ ನಾಯ್ 19 ಎಸೆತಗಳಲ್ಲಿ ಅಜೇಯ 26 ರನ್ ಗಳಿಸಿ ಅಫ್ಘಾನಿಸ್ತಾನವನ್ನು ಗೆಲುವಿನ ದಡ ಸೇರಿಸಿದರು.

ಭಾರತಕ್ಕೆ ಸುಲಭ ಜಯ

ಇದಕ್ಕೂ ಮುನ್ನ ಭಾರತ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿ ಫೈನಲ್​ಗೆ ಲಗ್ಗೆ ಇಟ್ಟಿದೆ. ಭಾರತೀಯ ಬೌಲರ್‌ಗಳ ದಾಳಿಗೆ ಬಾಂಗ್ಲಾದೇಶ ಕೇವಲ 96 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತ ಕೇವಲ 9.2 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ತಂಡದ ಪರ ತಿಲಕ್ ವರ್ಮಾ ಅಜೇಯ 55 ರನ್ ಮತ್ತು ನಾಯಕ ರುತುರಾಜ್ ಗಾಯಕ್ವಾಡ್ 40 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು. ಬೌಲಿಂಗ್​ನಲ್ಲಿ ಸಾಯಿ ಕಿಶೋರ್ ಅದ್ಭುತ ಪ್ರದರ್ಶನ ನೀಡಿ 4 ಓವರ್‌ಗಳಲ್ಲಿ ಕೇವಲ 12 ರನ್ ನೀಡಿ 3 ವಿಕೆಟ್ ಪಡೆದರು.

Published On - 3:34 pm, Fri, 6 October 23

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು