AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಏಷ್ಯನ್ ಗೇಮ್ಸ್​ಗೆ 15 ಸದಸ್ಯರ ಶ್ರೀಲಂಕಾ ತಂಡ ಪ್ರಕಟ

Asian Games: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲ್ಲಿರುವ 2023 ರ ಏಷ್ಯನ್ ಗೇಮ್ಸ್​ಗೆ ಶ್ರೀಲಂಕಾ ಕ್ರಿಕೆಟ್​ ಮಂಡಳಿ ಶ್ರೀಲಂಕಾ ಎ ತಂಡವನ್ನು ಪ್ರಕಟಿಸಿದೆ. ಈ ಬಹು-ರಾಷ್ಟ್ರೀಯ ಈವೆಂಟ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಎರಡೂ ತಂಡಗಳು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಭಾಗವಹಿಸುತ್ತವೆ.

Asian Games: ಏಷ್ಯನ್ ಗೇಮ್ಸ್​ಗೆ 15 ಸದಸ್ಯರ ಶ್ರೀಲಂಕಾ ತಂಡ ಪ್ರಕಟ
ಶ್ರೀಲಂಕಾ ತಂಡ
ಪೃಥ್ವಿಶಂಕರ
|

Updated on:Sep 19, 2023 | 9:52 AM

Share

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲ್ಲಿರುವ 2023 ರ ಏಷ್ಯನ್ ಗೇಮ್ಸ್​ಗೆ (Asian Games) ಶ್ರೀಲಂಕಾ ಕ್ರಿಕೆಟ್​ ಮಂಡಳಿ ಶ್ರೀಲಂಕಾ (Sri Lanka) ಎ ತಂಡವನ್ನು ಪ್ರಕಟಿಸಿದೆ. ಈ ಬಹು-ರಾಷ್ಟ್ರೀಯ ಈವೆಂಟ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಎರಡೂ ತಂಡಗಳು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಭಾಗವಹಿಸುತ್ತವೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಪುರುಷರ ಮತ್ತು ಮಹಿಳೆಯರ ತಂಡಗಳಲ್ಲಿ ತಲಾ 15 ಆಟಗಾರರನ್ನು ಆಯ್ಕೆ ಮಾಡಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಪುರುಷರ ತಂಡದ ನಾಯಕತ್ವವನ್ನು ಸಹನ್ ಆರ್ಚಿಗೆ (Sahan Arachchige) ವಹಿಸಲಿದ್ದು, ಚಾಮರಿ ಅಟಾಪಟು ಮಹಿಳಾ ತಂಡದ ನಾಯತ್ವವಹಿಸಿಕೊಳ್ಳಲಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಏಕದಿನ ವಿಶ್ವಕಪ್ ಆರಂಭವಾಗುತ್ತಿರುವ ಕಾರಣ ಈ ಕ್ರೀಡಾಕೂಟಕ್ಕೆ ಪಾಕಿಸ್ತಾನ, ಭಾರತ ಮತ್ತು ಈಗ ಶ್ರೀಲಂಕಾದಂತಹ ತಂಡಗಳು ತಮ್ಮ ಎರಡನೇ ಶ್ರೇಣಿಯ ತಂಡಗಳನ್ನು ಕಳುಹಿಸಲು ನಿರ್ಧರಿಸಿವೆ. ಹೀಗಾಗಿ ಈ ಮೂರು ದೇಶಗಳ ಪುರುಷರ ತಂಡಗಳಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಳ್ಳುತ್ತಿಲ್ಲ.

Asian Games: 67 ವರ್ಷ, 32 ಕ್ರೀಡೆ; ಏಷ್ಯನ್ ಸಮರದಲ್ಲಿ ಭಾರತ ಎಷ್ಟು ಪದಕ ಗೆದ್ದಿದೆ ಗೊತ್ತಾ?

ಉಭಯ ತಂಡಗಳು

ಏಷ್ಯನ್ ಗೇಮ್ಸ್ ಪುರುಷರ ಶ್ರೀಲಂಕಾ ಕ್ರಿಕೆಟ್ ತಂಡ: ಸಹನ್ ಆರ್ಚಿಗೆ (ಕ್ಯಾಪ್ಟನ್), ಲಸಿತ್ ಕ್ರಾಸ್ಪುಲ್ಲೆ, ಶೆವೊನ್ ಡೇನಿಯಲ್, ಅಶೇನ್ ಬಂಡಾರ, ಅಹಾನ್ ವಿಕ್ರಮಸಿಂಘೆ, ಲಹಿರು ಉದಾರ (ವಿಕೆಟ್ ಕೀಪರ್), ರವಿಂದು ಫೆರ್ನಾಂಡೋ, ರನಿತಾ ಲಿಯಾನರಾಚ್ಚಿ, ನುವಾನಿಡು ಫೆರ್ನಾಂಡೋ, ಸಚಿತ ಜಯತಿಲಕ, ವಿಜಯಕಾಂತ್ ವ್ಯಾಸಕಾಂತ್, ನಿಮೇಶ್ ವಿಮುಕ್ತಿ, ಲಹಿರು ಸಮರಕೋನ್, ನುವಾನ್ ತುಷಾರ, ಇಸಿತಾ ವಿಜೆಸುಂದರ.

ಏಷ್ಯನ್ ಕ್ರೀಡಾಕೂಟಕ್ಕಾಗಿ ಮಹಿಳಾ ಶ್ರೀಲಂಕಾ ಕ್ರಿಕೆಟ್ ತಂಡ: ಚಾಮರಿ ಅಟಾಪಟು (ನಾಯಕ), ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ನೀಲಾಕ್ಷಿ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಅನುಷ್ಕಾ ಸಂಜೀವನಿ, ಓಷದಿ ರಣಸಿಂಘೆ, ಸುಗಂಧಿಕಾ ಕುಮಾರಿ, ಇನೋಕಾ ರಣವೀರ, ಉದೇಶಿಕಾ ಪ್ರಬೋಧನಿ, ಹಾಸಿನಿ ಕುಶಿನಿ ನುರಂಗಾನನ್, ಹಾಸಿನಿ ನುರಂಗಾನನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:49 am, Tue, 19 September 23

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!