
ಕ್ರಿಕೆಟ್ ಜಗತ್ತಿನ ಅತೀ ದೊಡ್ಡ ಹೈವೋಲ್ಟೇಜ್ ಪಂದ್ಯ ಎಂದರೆ ಅದು ಭಾರತ ಮತ್ತು ಪಾಕಿಸ್ತಾನ್ ನಡುವಿನ ಹಣಾಹಣಿ. ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ದೇಶಗಳು ಕೇವಲ ಐಸಿಸಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟೂರ್ನಿಗಳಲ್ಲಿ ಮಾತ್ರ ಪರಸ್ಪರ ಸೆಣಸಾಡುತ್ತವೆ. ಸದ್ಯ ಜಪಾನ್‌ನ ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಪುರುಷರ ಟಿ20 ಕ್ರಿಕೆಟ್ ಟೂರ್ನಿಯಲ್ಲೂ ಇವರಿಬ್ಬರ ಮುಖಾಮುಖಿಯನ್ನು ಕಣ್ತುಂಬಿಕೊಳ್ಳಲು ಜಗತ್ತಿನಾದ್ಯಂತ ಅಭಿಮಾನಿಗಳು ಕಾತರರಾಗಿದ್ದಾರೆ.
ಆದರೆ, ಟೂರ್ನಿಯ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ತಂಡಗಳು ನೇರವಾಗಿ ಆರಂಭಿಕ ಹಂತದಲ್ಲಾಗಲಿ ಅಥವಾ ಸೆಮಿಫೈನಲ್‌ನಲ್ಲಾಗಲಿ ಮುಖಾಮುಖಿಯಾಗಲು ಸಾಧ್ಯವಿಲ್ಲ. ಹಾಗಾದರೆ ಈ ಎರಡು ಬಲಿಷ್ಠ ತಂಡಗಳು ಮೈದಾನದಲ್ಲಿ ಮುಖಾಮುಖಿಯಾಗಲು ಇರುವ ಆ ಏಕೈಕ ದಾರಿ ಮತ್ತು ಲೆಕ್ಕಾಚಾರ ಏನು ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ಟೂರ್ನಿಯ ನಾಕೌಟ್ ಡ್ರಾ ವಿನ್ಯಾಸದ ಪ್ರಕಾರ, ಭಾರತ ಮತ್ತು ಪಾಕಿಸ್ತಾನ್ ತಂಡಗಳನ್ನು ಪರಸ್ಪರ ವಿರುದ್ಧ ಬದಿಯಲ್ಲಿ ಇರಿಸಲಾಗಿದೆ. ಅಂದರೆ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುವುದಿಲ್ಲ.
ಪಾಕಿಸ್ತಾನದ ಹಾದಿ: ಸೆಪ್ಟೆಂಬರ್ 28 ರಂದು ನಡೆಯಲಿರುವ ಮೊದಲ ಕ್ವಾರ್ಟರ್ ಫೈನಲ್‌ನಲ್ಲಿ ಪಾಕಿಸ್ತಾನ್ ತಂಡವು ಹಾಂಗ್ ಕಾಂಗ್ ವಿರುದ್ಧ ಸೆಣಸಲಿದೆ. ಇದರಲ್ಲಿ ಗೆದ್ದರೆ, ಅಕ್ಟೋಬರ್ 1 ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ್ ಅಥವಾ ಮಲೇಷ್ಯಾ ತಂಡವನ್ನು ಎದುರಿಸಲಿದೆ.
ಭಾರತದ ಹಾದಿ: ಹಾಲಿ ಚಾಂಪಿಯನ್ ಭಾರತ ತಂಡವು ತನ್ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಸವಾಲನ್ನು ಎದುರಿಸಲಿದ್ದು, ಇದರಲ್ಲಿ ಜಯ ಸಾಧಿಸಿದರೆ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಅಥವಾ ನೇಪಾಳ ತಂಡದ ವಿರುದ್ಧ ಹೋರಾಡಬೇಕಾಗುತ್ತದೆ.
ಅಂದರೆ ಸೆಮಿಫೈನಲ್ನಲ್ಲೂ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ. ಇನ್ನು ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಲು ಕೇವಲ ಎರಡು ಸನ್ನಿವೇಶಗಳು ಮಾತ್ರ ಬಾಕಿ ಉಳಿದಿವೆ…
ಇದನ್ನೂ ಓದಿ: ನವೆಂಬರ್ 19: ಕೊಹ್ಲಿ-ರೋಹಿತ್ ಜೋಡಿಯ ಎಂದೂ ಮಾಸದ ನೋವು!
ವಿಶೇಷವೆಂದರೆ, ಏಷ್ಯನ್ ಗೇಮ್ಸ್‌ನ ಪುರುಷರ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಇದುವರೆಗೆ ಒಮ್ಮೆಯೂ ಪರಸ್ಪರ ಮುಖಾಮುಖಿಯಾಗಿಲ್ಲ. ಕಳೆದ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನ ಗೆದ್ದಿದ್ದರೆ, ಪಾಕಿಸ್ತಾನ್ ಪದಕದ ರೇಸ್‌ನಿಂದ ಹೊರಬಿದ್ದಿತ್ತು. ಹೀಗಾಗಿ, ಉಭಯ ತಂಡಗಳು ತಮ್ಮ ಮುಂದಿನ ಎರಡು ನಾಕೌಟ್ ಪಂದ್ಯಗಳನ್ನು ಯಶಸ್ವಿಯಾಗಿ ಗೆದ್ದು ಮುನ್ನಡೆದರೆ, ಇತಿಹಾಸದಲ್ಲೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್ ನಡುವಣ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಬಹುದು.
Published On - 1:01 pm, Sun, 27 September 26