AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​: ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾದ ಎದುರಾಳಿ ಯಾರು ಗೊತ್ತಾ?

ಏಷ್ಯನ್ ಗೇಮ್ಸ್ 2026ರ ಪುರುಷರ ಟಿ20 ಕ್ರಿಕೆಟ್ ಟೂರ್ನಿ ಇದೀಗ ಅತ್ಯಂತ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಮಳೆಯ ಅಡ್ಡಿಯ ನಡುವೆಯೂ ಕಣದಲ್ಲಿದ್ದ ಬಲಿಷ್ಠ ತಂಡಗಳು ತಮ್ಮ ಶ್ರೇಯಾಂಕದ ಬಲದೊಂದಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿವೆ. ಕ್ವಾರ್ಟರ್ ಫೈನಲ್ಸ್ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಆ ಕ್ಷಣ ಈಗ ಬಂದೊದಗಿದ್ದು, ಸೆಮಿಫೈನಲ್‌ನಲ್ಲಿ ಭಾರತದ ಎದುರಾಳಿ ಯಾರೆಂಬುದು ಅಧಿಕೃತವಾಗಿ ಕನ್ಫರ್ಮ್ ಆಗಿದೆ.

ಏಷ್ಯನ್ ಗೇಮ್ಸ್​: ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾದ ಎದುರಾಳಿ ಯಾರು ಗೊತ್ತಾ?
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Sep 29, 2026 | 8:36 AM

Share

ಏಷ್ಯನ್ ಗೇಮ್ಸ್ 2026ರ ಪುರುಷರ ಟಿ20 ಟೂರ್ನಿ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಕ್ವಾರ್ಟರ್ ಫೈನಲ್ ಹಂತದಿಂದ ಈಗಾಗಲೇ ಮೂರು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟ ತಂಡಗಳೆಂದರೆ ಭಾರತ, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಇತ್ತ ಶ್ರೀಲಂಕಾ ಎಂಟ್ರಿಯೊಂದಿಗೆ ಸೆಮಿಫೈನಲ್​ನಲ್ಲಿ ಭಾರತ ತಂಡದ ಎದುರಾಳಿ ಯಾರೆಂಬುದು ಕನ್ಫರ್ಮ್ ಆಗಿದೆ.

ಜಪಾನ್‌ನ ನಿಶ್ಶಿನ್‌ನಲ್ಲಿರುವ ಐಚಿ ಪ್ರಿಫೆಕ್ಚರಲ್ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ಅಕ್ಟೋಬರ್ 1, 2026ರ ಗುರುವಾರ ನಡೆಯಲಿರುವ ಎರಡನೇ ಸೆಮಿ-ಫೈನಲ್ ಪಂದ್ಯದಲ್ಲಿ  ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದೆ.

ಮೂರು ಪಂದ್ಯಗಳು ರದ್ದು!

ನಿಶ್ಶಿನ್‌ನಲ್ಲಿ ನಡೆಯಬೇಕಿದ್ದ ಮೂರು ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಗೆ ಆಹುತಿಯಾಗಿದೆ. ಹಾಂಗ್ ಕಾಂಗ್ ವಿರುದ್ಧದ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಮಳೆಯಿಂದ ರದ್ದಾದ ಕಾರಣ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಿತ್ತು.

ಇನ್ನು ಅಫ್ಘಾನಿಸ್ತಾನ್ ವಿರುದ್ಧದ ಮ್ಯಾಚ್ ರದ್ದಾದ ಕಾರಣ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದೀಗ ನೇಪಾಳ ಮತ್ತು ಶ್ರೀಲಂಕಾ ನಡುವಣ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯ ಕೂಡ ಮಳೆಗೆ ಆಹುತಿಯಾಗಿದೆ. ಹೀಗಾಗಿ ಐಸಿಸಿ ಶ್ರೇಯಾಂಕದಲ್ಲಿ ಉನ್ನತ ಸ್ಥಾನದಲ್ಲಿರುವ ಲಂಕಾ ಪಡೆ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಅದರಂತೆ ಅಕ್ಟೋಬರ್ 1 ರಂದು ನಡೆಯಲಿರುವ 2ನೇ ಸೆಮಿಫೈನಲ್​ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಿದರೆ, ಸೋಲುವ ತಂಡ ಕಂಚಿನ ಪದಕಕ್ಕಾಗಿ ಪಂದ್ಯವಾಡಲಿದೆ.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ಹರಾಜಿಗೂ ಮುನ್ನ RCB ಮಾಸ್ಟರ್ ಪ್ಲ್ಯಾನ್: ಪೆರ್ರಿ ಇನ್, ಗ್ರೇಸ್ ಔಟ್..!

ಶ್ರೀಲಂಕಾ ಟಿ20 ತಂಡ: ಆಶೆನ್ ಬಂಡಾರ , ನುವಾನಿಡು ಫೆರ್ನಾಂಡೊ , ಚಾಮಿಕಾ ಕರುಣರತ್ನೆ , ನುವಾನ್ ತುಷಾರ , ಲಸಿತ್ ಕ್ರೂಸ್ಪುಲ್ಲೆ , ದುಶಾನ್ ಹೇಮಂತ , ಸಿನೆತ್ ಜಯವರ್ಧನೆ , ನಿರೋಷನ್ ಡಿಕ್ವೆಲ್ಲಾ , ಸೋಹನ್ ಡಿ ಲಿವೇರಾ , ತರಿಂದು ರತ್ನಾಯಕೆ , ಬಿನುರ ಫೆರ್ನಾಂಡೊ , ಗರುಕ ಸಂಕೇತ್ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!