AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್ 2026: ಸೆಮಿಫೈನಲ್ಸ್ ವೇಳಾಪಟ್ಟಿ ಪ್ರಕಟ

ಏಷ್ಯನ್ ಗೇಮ್ಸ್​​ನ ಕ್ವಾರ್ಟರ್ ಫೈನಲ್ ಪಂದ್ಯಗಳು ರದ್ದಾಗಿವೆ. ಹೀಗಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿ (ICC ಅತ್ಯುತ್ತಮ ಸ್ಥಾನದಲ್ಲಿದ್ದ ಕಾರಣ ಭಾರತ, ಪಾಕಿಸ್ತಾನ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು ಸೆಮಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇನ್ನು ಹಾಂಗ್ ಕಾಂಗ್, ಮಲೇಷ್ಯಾ, ನೇಪಾಳ ಹಾಗೂ ಅಫ್ಘಾನಿಸ್ತಾನ್ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಏಷ್ಯನ್ ಗೇಮ್ಸ್ 2026: ಸೆಮಿಫೈನಲ್ಸ್ ವೇಳಾಪಟ್ಟಿ ಪ್ರಕಟ
Asian Games Image Credit source: GettyImages
ಝಾಹಿರ್ ಯೂಸುಫ್
|

Updated on: Sep 29, 2026 | 10:09 AM

Share

ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಪುರುಷರ ಟಿ20 ಟೂರ್ನಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಮತ್ತೆ ನಾಲ್ಕು ತಂಡಗಳು ಸೆಮಿಫೈಮಲ್​ಗೆ ಲಗ್ಗೆಯಿಟ್ಟಿದೆ. ಅದು ಸಹ ಪಂದ್ಯವಾಡದೇ ಎಂಬುದು ವಿಶೇಷ. ಅಂದರೆ ಕ್ವಾರ್ಟರ್ ಫೈನಲ್​ನ ನಾಲ್ಕೂ ಮ್ಯಾಚ್​ಗಳೂ ಕೂಡ ಮಳೆಗೆ ಆಹುತಿಯಾಗಿದೆ. ಹೀಗಾಗಿ ಐಸಿಸಿ ರ್ಯಾಂಕಿಂಗ್​ನಲ್ಲಿ ಉನ್ನತ ಸ್ಥಾನ ಹೊಂದಿರುವ 4 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ.

ಸೆಮಿಫೈನಲ್​ಗೆ ಪ್ರವೇಶಿಸಿದ ತಂಡಗಳು:

  • ಭಾರತ
  • ಪಾಕಿಸ್ತಾನ್
  • ಬಾಂಗ್ಲಾದೇಶ್
  • ಶ್ರೀಲಂಕಾ

ಟೂರ್ನಿಯಿಂದ ಹೊರಬಿದ್ದ ತಂಡಗಳು:

  • ಹಾಂಗ್ ಕಾಂಗ್
  • ನೇಪಾಳ
  • ಅಫ್ಘಾನಿಸ್ತಾನ್
  • ಮಲೇಷ್ಯಾ

ಸೆಮಿಫೈನಲ್ ವೇಳಾಪಟ್ಟಿ:

ಎರಡೂ ಸೆಮಿಫೈನಲ್ ಪಂದ್ಯಗಳು ಅಕ್ಟೋಬರ್ 1, 2026ರ ಗುರುವಾರದಂದು ಐಚಿಯ ನಿಸ್ಸಿನ್‌ನಲ್ಲಿರುವ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿವೆ. ಈ ಪಂದ್ಯಗಳಲ್ಲಿ ಮುಖಾಮುಖಿಯಾಗಲಿರುವ ತಂಡಗಳ ವಿವರ ಈ ಕೆಳಗಿನಂತಿದೆ…

ಪಂದ್ಯ ಮುಖಾಮುಖಿ ತಂಡಗಳು ಸಮಯ (ಭಾರತೀಯ ಕಾಲಮಾನ – IST)
ಸೆಮಿಫೈನಲ್ 1 ಪಾಕಿಸ್ತಾನ್ vs ಬಾಂಗ್ಲಾದೇಶ್ ಬೆಳಗ್ಗೆ 5:30 ಕ್ಕೆ
ಸೆಮಿಫೈನಲ್ 2 ಭಾರತ vs ಶ್ರೀಲಂಕಾ ಬೆಳಗ್ಗೆ 10:30 ಕ್ಕೆ

ಪದಕದ ಪಂದ್ಯ ಯಾವಾಗ?

ಸೆಮಿಫೈನಲ್ ಪಂದ್ಯಗಳಲ್ಲಿ ಜಯಭೇರಿ ಬಾರಿಸುವ ಎರಡು ತಂಡಗಳು ಅಕ್ಟೋಬರ್ 3 ರಂದು ನಡೆಯಲಿರುವ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕಕ್ಕಾಗಿ ಕಾದಾಡಲಿದೆ. ಅದೇ ದಿನ ಸೆಮಿಫೈನಲ್‌ನಲ್ಲಿ ಸೋತ ಎರಡು ತಂಡಗಳ ನಡುವೆ ಕಂಚಿನ ಪದಕಕ್ಕಾಗಿ ಪಂದ್ಯ ನಡೆಯಲಿದೆ.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

ಶ್ರೀಲಂಕಾ ಟಿ20 ತಂಡ: ಆಶೆನ್ ಬಂಡಾರ , ನುವಾನಿಡು ಫೆರ್ನಾಂಡೊ , ಚಾಮಿಕಾ ಕರುಣರತ್ನೆ , ನುವಾನ್ ತುಷಾರ , ಲಸಿತ್ ಕ್ರೂಸ್ಪುಲ್ಲೆ , ದುಶಾನ್ ಹೇಮಂತ , ಸಿನೆತ್ ಜಯವರ್ಧನೆ , ನಿರೋಷನ್ ಡಿಕ್ವೆಲ್ಲಾ , ಸೋಹನ್ ಡಿ ಲಿವೇರಾ , ತರಿಂದು ರತ್ನಾಯಕೆ , ಬಿನುರ ಫೆರ್ನಾಂಡೊ , ಗರುಕ ಸಂಕೇತ್ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್.

ಪಾಕಿಸ್ತಾನ್ ಟಿ20 ತಂಡ: ಸಾಹಿಬ್‌ಝಾದ ಫರ್ಹಾನ್ (ನಾಯಕ), ಅಬ್ದುಲ್ ಸಮದ್ (ಉಪನಾಯಕ), ಸೈಮ್ ಅಯೂಬ್, ಹೈದರ್ ಅಲಿ, ಹಸನ್ ನವಾಝ್, ಸಾದ್ ಮಸೂದ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಅರಾಫತ್ ಮಿನ್ಹಾಸ್, ಮಾಝ್ ಸದಾಕತ್, ಅಬ್ರಾರ್ ಅಹ್ಮದ್, ಸುಫ್ಯಾನ್ ಮುಖೀಮ್, ಅಹ್ಮದ್ ದಾನಿಯಾಲ್, ಆಕಿಫ್ ಜಾವೇದ್, ಅಲಿ ರಾಝ, ಮೊಹಮ್ಮದ್ ಸಲ್ಮಾನ್ ಮಿರ್ಝ.

ಇದನ್ನೂ ಓದಿ: ಹರಾಜಿಗೂ ಮುನ್ನ RCB ಮಾಸ್ಟರ್ ಪ್ಲ್ಯಾನ್: ಪೆರ್ರಿ ಇನ್, ಗ್ರೇಸ್ ಔಟ್..!

ಬಾಂಗ್ಲಾದೇಶ್ ಟಿ20 ತಂಡ: ಲಿಟ್ಟನ್ ದಾಸ್ (ನಾಯಕ), ತಂಝಿದ್ ಹಸನ್ ತಮೀಮ್, ಪರ್ವೇಝ್ ಹೊಸೈನ್ ಎಮನ್ (ವಿಕೆಟ್ ಕೀಪರ್), ತೌಹಿದ್ ಹೃದಯ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ಮುಸ್ತಾಫಿಝುರ್ ರೆಹಮಾನ್, ನಸುಮ್ ಅಹ್ಮದ್, ಸೈಫ್ ಹಸನ್, ಮಹೇದಿ ಹಸನ್, ಹಸನ್ ಮಹ್ಮದ್, ಶೊರಿಫುಲ್ ಇಸ್ಲಾಂ, ರಿಷಾದ್ ಹೊಸೈನ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ