AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಶ್ರೀಲಂಕಾ ಸೆಮಿಫೈನಲ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

ಏಷ್ಯನ್ ಗೇಮ್ಸ್​​ ಟಿ20 ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಹಾಂಗ್ ಕಾಂಗ್, ಅಫ್ಘಾನಿಸ್ತಾನ್, ನೇಪಾಳ ಮತ್ತು ಮಲೇಷ್ಯಾ ತಂಡಗಳು ಟೂರ್ನಿಯಿಂದ ಹೊರಬಿದ್ದರೆ, ಭಾರತ, ಶ್ರೀಲಂಕಾ, ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿವೆ. ಅದರಂತೆ ಈ ನಾಲ್ಕು ತಂಡಗಳ ನಡುವೆ ಪದಕಕ್ಕಾಗಿ ಪೈಪೋಟಿ ನಡೆಯಲಿದೆ.

ಭಾರತ vs ಶ್ರೀಲಂಕಾ ಸೆಮಿಫೈನಲ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
IND vs SLImage Credit source: x.com
ಝಾಹಿರ್ ಯೂಸುಫ್
|

Updated on:Sep 30, 2026 | 2:15 PM

Share

2026ರ ಏಷ್ಯನ್ ಗೇಮ್ಸ್‌ನ ಪುರುಷರ ಟಿ20 ಟೂರ್ನಿಯ ಸೆಮಿಫೈನಲ್ ಪಂದ್ಯಗಳು ನಾಳೆ (ಅಕ್ಟೋಬರ್ 1) ನಡೆಯಲಿವೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್​ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಿದರೆ, ಸೋಲುವ ತಂಡಗಳು ಕಂಚಿನ ಪದಕಕ್ಕಾಗಿ ಅಕ್ಟೋಬರ್ 3 ರಂದು ಮುಖಾಮುಖಿಯಾಗಲಿವೆ.

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

  • ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಸೆಮಿಫೈನಲ್ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ 5.30 ಕ್ಕೆ ಆರಂಭವಾಗಲಿದೆ.
  • ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಸೆಮಿಫೈನಲ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ ಬೆಳಗ್ಗೆ 10:30 ಕ್ಕೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಶ್ರೀಲಂಕಾ ನಡುವಣ ಸೆಮಿಫೈನಲ್ ಪಂದ್ಯವನ್ನು ಏಷ್ಯನ್ ಗೇಮ್ಸ್ 2026ರ ಅಧಿಕೃತ ಪ್ರಸಾರಕರಾಗಿರುವ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

  • ಕನ್ನಡ, ತಮಿಳು ಮತ್ತು ತೆಲುಗು: ಸೋನಿ ಸ್ಪೋರ್ಟ್ಸ್ 4
  • ಇಂಗ್ಲಿಷ್: ಸೋನಿ ಸ್ಪೋರ್ಟ್ಸ್ 1 ಮತ್ತು ಸೋನಿ ಸ್ಪೋರ್ಟ್ಸ್ 5
  • ಹಿಂದಿ: ಸೋನಿ ಸ್ಪೋರ್ಟ್ಸ್ 3

ಇನ್ನು ಮೊಬೈಲ್, ಲ್ಯಾಪ್‌ಟಾಪ್ ಅಥವಾ ಸ್ಮಾರ್ಟ್ ಟಿವಿಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಲು ಬಯಸುವವರು, ಸೋನಿ ಲಿವ್ (Sony LIV) ಆ್ಯಪ್ ಅಥವಾ ವೆಬ್‌ಸೈಟ್‌ ಮೂಲಕ ಲೈವ್ ಸ್ಟ್ರೀಮಿಂಗ್ ಆನಂದಿಸಬಹುದು.

ಉಭಯ ತಂಡಗಳು:

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ಏನಿದು ಇರಾನಿ ಕಪ್? ಇದರ ಹಿನ್ನಲೆಯೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಶ್ರೀಲಂಕಾ ಟಿ20 ತಂಡ: ಆಶೆನ್ ಬಂಡಾರ , ನುವಾನಿಡು ಫೆರ್ನಾಂಡೊ , ಚಾಮಿಕಾ ಕರುಣರತ್ನೆ , ನುವಾನ್ ತುಷಾರ , ಲಸಿತ್ ಕ್ರೂಸ್ಪುಲ್ಲೆ , ದುಶಾನ್ ಹೇಮಂತ , ಸಿನೆತ್ ಜಯವರ್ಧನೆ , ನಿರೋಷನ್ ಡಿಕ್ವೆಲ್ಲಾ , ಸೋಹನ್ ಡಿ ಲಿವೇರಾ , ತರಿಂದು ರತ್ನಾಯಕೆ , ಬಿನುರ ಫೆರ್ನಾಂಡೊ , ಗರುಕ ಸಂಕೇತ್ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್.

Published On - 2:14 pm, Wed, 30 September 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?