AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್​ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಬದಲಾವಣೆ?

Asian Games 2026: ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಯು ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಈ ಟೂರ್ನಿಗಾಗಿ ಈಗಾಗಲೇ ಬಲಿಷ್ಠ ಭಾರತ ತಂಡಗಳನ್ನು ಪ್ರಕಟಿಸಲಾಗಿದೆ. ಆದರೆ ಈ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

ಏಷ್ಯನ್ ಗೇಮ್ಸ್​ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಬದಲಾವಣೆ?
Team India
ಝಾಹಿರ್ ಯೂಸುಫ್
|

Updated on:Aug 29, 2026 | 1:03 PM

Share

ಮುಂಬರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಗೆ ಈಗಾಗಲೇ ಆಯ್ಕೆಯಾಗಿರುವ ಟೀಮ್ ಇಂಡಿಯಾದಲ್ಲಿ ಕೊನೆಯ ಕ್ಷಣದ ಬದಲಾವಣೆಗಳಾಗಲಿವೆಯೇ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಪಾನ್‌ನ ಐಚಿ-ನಗೋಯಾದಲ್ಲಿ ಆಟಗಾರರಿಗೆ ಆಯೋಜಿಸಲಾಗಿರುವ ಕಳಪೆ ವ್ಯವಸ್ಥೆಗಳು. ಅಲ್ಲಿನ ಮೂಲಸೌಕರ್ಯಗಳ ಕೊರತೆಯಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ದ್ವಿತೀಯ ದರ್ಜೆಯ (B Team) ತಂಡವನ್ನು ಜಪಾನ್‌ಗೆ ಕಳುಹಿಸಲು ಚಿಂತನೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಜಪಾನ್‌ನಲ್ಲಿ ಕ್ರಿಕೆಟಿಗರಿಗೆ ಕಲ್ಪಿಸಲಾಗಿರುವ ತಾತ್ಕಾಲಿಕ ವ್ಯವಸ್ಥೆಗಳ ಬಗ್ಗೆ ಬಿಸಿಸಿಐ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತ ತನ್ನ ಸ್ಟಾರ್ ಆಟಗಾರರನ್ನು ಅಲ್ಲಿಗೆ ಕಳುಹಿಸುವುದು ಅನುಮಾನ ಎಂಬ ದಟ್ಟ ವದಂತಿಗಳು ಹರಡಿವೆ.

ಅಸಮಾಧಾನಕ್ಕೆ ಕಾರಣವೇನು?

ಸುದ್ದಿ ಸಂಸ್ಥೆಗಳ ವರದಿ ಪ್ರಕಾರ, ಜಪಾನ್‌ನ ಐಚಿ-ನಗೋಯಾದಲ್ಲಿ ಕ್ರಿಕೆಟ್ ಆಟಗಾರರಿಗೆ ಆಯೋಜಿಸಲಾದ ವ್ಯವಸ್ಥೆಗಳು ತೀರಾ ಕಳಪೆಯಾಗಿವೆ. ಬಿಸಿಸಿಐ ಅಧಿಕಾರಿಗಳು ಜಪಾನ್ ಒಲಿಂಪಿಕ್ ಸಮಿತಿಯ ಸಭೆಯಲ್ಲಿ ಈ ಕೆಳಗಿನ ಪ್ರಮುಖ ಲೋಪದೋಷಗಳನ್ನು ಎತ್ತಿ ತೋರಿಸಿದ್ದಾರೆ:

ಟೆಂಟ್‌ಗಳಲ್ಲಿ ಡ್ರೆಸ್ಸಿಂಗ್ ರೂಮ್: ಅಂತರರಾಷ್ಟ್ರೀಯ ಮಟ್ಟದ ಆಟಗಾರರಿಗೆ ಖಾಯಂ ಕೊಠಡಿಗಳ ಬದಲಿಗೆ ತಾತ್ಕಾಲಿಕ ಟೆಂಟ್‌ಗಳಲ್ಲಿ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ ಮಾಡಲಾಗಿದೆ.

500 ಮೀಟರ್ ದೂರದಲ್ಲಿರುವ ಶೌಚಾಲಯ: ಈ ತಾತ್ಕಾಲಿಕ ಟೆಂಟ್‌ಗಳಿಂದ ಆಟಗಾರರ ಶೌಚಾಲಯಗಳು ಬರೋಬ್ಬರಿ 500 ಮೀಟರ್ ದೂರದಲ್ಲಿವೆ, ಇದು ಆಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ.

ಕಿರಿದಾದ ಹೋಟೆಲ್ ಕೊಠಡಿಗಳು: ಆಟಗಾರರಿಗೆ ಹಂಚಿಕೆ ಮಾಡಲಾದ ಹೋಟೆಲ್ ಕೊಠಡಿಗಳು ತುಂಬಾ ಚಿಕ್ಕದಾಗಿದ್ದು, ಕ್ರಿಕೆಟಿಗರ ದೊಡ್ಡ ಕಿಟ್‌ಬ್ಯಾಗ್‌ಗಳನ್ನು ಇಡಲೂ ಜಾಗ ಸಾಲದ ಸ್ಥಿತಿ ನಿರ್ಮಾಣವಾಗಿದೆ.

ಬಿಸಿಸಿಐ ಮುಂದಿನ ನಡೆ ಏನು?

ಈ ಹಿನ್ನೆಲೆಯಲ್ಲಿ ಬಿಸಿಸಿಐ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ವಿಶೇಷ ವೀಕ್ಷಕರೊಬ್ಬರನ್ನು (Observer) ತಕ್ಷಣವೇ ಜಪಾನ್‌ಗೆ ಕಳುಹಿಸಲು ನಿರ್ಧರಿಸಿದೆ. ಆದರೆ, ಏಷ್ಯನ್ ಗೇಮ್ಸ್‌ನ ಕಠಿಣ ನಿಯಮಗಳು ಮತ್ತು ಆಟಗಾರರ ನೋಂದಣಿ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಕೊನೆಯ ಕ್ಷಣದಲ್ಲಿ ತಂಡವನ್ನು ಬದಲಾಯಿಸುವುದು ಅಸಾಧ್ಯ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಹೀಗಾಗಿ ಈಗಾಗಲೇ ಪ್ರಕಟಿಸಲಾಗಿರುವ ಭಾರತ ತಂಡವೇ ಏಷ್ಯನ್ ಗೇಮ್ಸ್‌ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಆದಾಗ್ಯೂ, ಇದೇ ಅವಧಿಯಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯೂ ಆಯೋಜನೆಗೊಳ್ಳುವುದರಿಂದ, ಈ ದ್ವಿಪಕ್ಷೀಯ ಸರಣಿಯ ಕಾರಣ ಮುಂದಿಟ್ಟುಕೊಂಡು ಬಿಸಿಸಿಐ ಕೊನೆಯ ಕ್ಷಣದಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Forbes India 2026: ಭಾರತದ ಟಾಪ್ 5 ‘ಶ್ರೀಮಂತ’ ಕ್ರಿಕೆಟಿಗರು ಇವರೇ!

ಏಷ್ಯನ್ ಗೇಮ್ಸ್​ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Published On - 1:02 pm, Sat, 29 August 26

Follow Us
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ನೇಪಾಳ ಪ್ರವಾಹದಲ್ಲಿ ಸಿಲುಕಿರೋ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
ದಾವಣಗೆರೆಯಲ್ಲಿ ಅಡಿಕೆ ಬೆಳೆಗಾರರ ಬೃಹತ್ ಪ್ರತಿಭಟನೆ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
34 ಕಾಲೇಜು ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೇದಿಕೆಯಲ್ಲಿ ರಂಪಾಟ: ಗಂಭೀರ ಆರೋಪ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಶನಿ ಭಗವಾನರ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್