ಭಾರತ-ಪಾಕ್ ಏಷ್ಯನ್ ಗೇಮ್ಸ್‌ ಫೈನಲ್ ಪಂದ್ಯ ರದ್ದಾದರೆ ಯಾರಿಗೆ ಚಿನ್ನದ ಪದಕ?

ಜಪಾನ್‌ನ ಐಚಿ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಚಿನ್ನದ ಪದಕಕ್ಕಾಗಿ ಮುಖಾಮುಖಿಯಾಗಲಿವೆ. ಇತಿಹಾಸದಲ್ಲಿ ಇದೇ ಮೊದಲು ಭಾರತ-ಪಾಕ್ ತಂಡಗಳು ಫೈನಲ್‌ಗೆ ತಲುಪಿವೆ. ಮಳೆಯ ಭೀತಿಯಿದ್ದು, ಹೊಸ ನಿಯಮದ ಪ್ರಕಾರ ಫೈನಲ್ ರದ್ದಾದರೆ ಎರಡೂ ತಂಡಗಳಿಗೆ ಚಿನ್ನದ ಪದಕ ನೀಡಲಾಗುತ್ತದೆ. ಹಾಲಿ ಚಾಂಪಿಯನ್ ಭಾರತ ಪಾಕಿಸ್ತಾನವನ್ನು ಮಣಿಸಿ ಪ್ರಶಸ್ತಿ ಉಳಿಸಿಕೊಳ್ಳಲು ಯತ್ನಿಸಲಿದೆ.

ಭಾರತ-ಪಾಕ್ ಏಷ್ಯನ್ ಗೇಮ್ಸ್‌ ಫೈನಲ್ ಪಂದ್ಯ ರದ್ದಾದರೆ ಯಾರಿಗೆ ಚಿನ್ನದ ಪದಕ?
ಭಾರತ Vs ಪಾಕಿಸ್ತಾನ
Image Credit source: ACC X

Updated on: Oct 01, 2026 | 3:06 PM

ಜಪಾನ್‌ನ ಐಚಿ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ಕ್ರಿಕೆಟ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ಪುರುಷರ ತಂಡಗಳು ಫೈನಲ್‌ಗೆ ತಲುಪಿವೆ. ಇಂದು ನಡೆದ ಸೆಮಿಫೈನಲ್‌ ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಪಾಕಿಸ್ತಾನ ಫೈನಲ್‌ಗೆ ಸ್ಥಾನ ಪಡೆದುಕೊಂಡರೆ, ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಭಾರತ ಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕೇವಲ 45 ರನ್​​ಗಳಿಗೆ ಆಲೌಟ್ ಆಗುವ ಮೂಲಕ 124 ರನ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

ಭಾರತ- ಪಾಕ್ ಮುಖಾಮುಖಿ

ಇದೀಗ ಚಿನ್ನದ ಪದಕದ ಪಂದ್ಯದಲ್ಲಿ ಅಂದರೆ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಚಿನ್ನದ ಪದಕ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಏಷ್ಯನ್ ಕ್ರೀಡಾಕೂಟದ ಪುರುಷರ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಇದುವರೆಗೆ ಒಮ್ಮೆಯೂ ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಮೊದಲ ಬಾರಿಗೆ ಚಿನ್ನದ ಪದಕದ ಪಂದ್ಯವನ್ನು ಆಡಲಿದೆ. ಇತ್ತ ಹಾಲಿ ಚಾಂಪಿಯನ್ ಆಗಿರುವ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ.

ಕ್ರಿಕೆಟ್ ಪಂದ್ಯಗಳಿಗೆ ಮಳೆ ಅಡ್ಡಿ

ವಾಸ್ತವವಾಗಿ ಜಪಾನ್​ನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿಲ್ಲ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ತಮ್ಮ ಕ್ವಾರ್ಟರ್-ಫೈನಲ್ ಪಂದ್ಯಗಳನ್ನು ಆಡದೆ ಸೆಮಿಫೈನಲ್ ತಲುಪಿದ್ದವು. ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ಈ ಎರಡೂ ತಂಡಗಳಿಗೆ ಸೆಮೀಸ್ ಟಿಕೆಟ್ ಸಿಕ್ಕಿತ್ತು. ಸೆಮಿಫೈನಲ್‌ ಸುತ್ತಿನಲ್ಲಿ ಪಾಕ್ ಹಾಗೂ ಬಾಂಗ್ಲಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ತಲಾ 13 ಓವರ್​ಗಳಿಗೆ ನಿಗದಿಪಡಿಸಲಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿತು. ಇನ್ನು ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯ ಯಾವುದೇ ಅಡೆತಡೆಗಳಿಲ್ಲದೆ ಮುಕ್ತಾಯವಾಗಿತ್ತು.

ಏಷ್ಯನ್ ಗೇಮ್ಸ್: ನೀರಜ್ ಇಲ್ಲದೆಯೇ ಜಾವೆಲಿನ್​ನಲ್ಲಿ ಬೆಳ್ಳಿ, ಕಂಚು ಗೆದ್ದ ಭಾರತ

ಫೈನಲ್ ರದ್ದಾದರೆ ಚಿನ್ನದ ಪದಕ ಯಾರಿಗೆ?

ಇದೀಗ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ ಚಿನ್ನದ ಪದಕ ಯಾರಿಗೆ ಸಿಗಲಿದೆ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ. ಏಕೆಂದರೆ ಕಳೆದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪ್ರಶಸ್ತಿ ಪಂದ್ಯ ಮಳೆಯಿಂದಾಗಿ ನಡೆಯಲಿಲ್ಲ. ಹೀಗಾಗಿ ರ್ಯಾಂಕಿಂಗ್​ನಲ್ಲಿ ಮೇಲಿದ್ದ ಟೀಂ ಇಂಡಿಯಾವನ್ನು ಚಾಂಪಿಯನ್ ಎಂದು ಘೋಷಿಸಿ ಚಿನ್ನದ ಪದಕ ನೀಡಲಾಗಿತ್ತು. ಆದಾಗ್ಯೂ ಈ ನಿರ್ಧಾರದ ವಿರುದ್ಧ ಟೀಕೆಗಳು ಕೇಳಿಬಂದಿದ್ದವು. ಆದ್ದರಿಂದ ಈ ಬಾರಿ ಆ ನಿಯಮವನ್ನು ಬದಲಾಯಿಸಲಾಗಿದೆ. ಐಸಿಸಿ ನಿಯಮಗಳಿಗೆ ಅನುಗುಣವಾಗಿ ಹೊಸ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ. ಅದರಂತೆ ಮಳೆಯಿಂದಾಗಿ ಫೈನಲ್ ಪಂದ್ಯ ರದ್ದಾದರೆ, ಈ ಬಾರಿ ಎರಡೂ ತಂಡಗಳಿಗೆ ಚಿನ್ನದ ಪದಕ ನೀಡಲಾಗುತ್ತದೆ. ಅಂದರೆ ಮಳೆಯಿಂದ ಫೈನಲ್ ಪಂದ್ಯ ನಡೆಯದೆ ರದ್ದಾದರೆ ಎರಡೂ ತಂಡಗಳನ್ನು ವಿಜಯಿ ಎಂದು ಘೋಷಿಸಿ ಚಿನ್ನದ ಪದಕ ವಿತರಣೆ ಮಾಡಲಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:05 pm, Thu, 1 October 26

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us