AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಗೇಮ್ಸ್‌ ಕ್ರಿಕೆಟ್‌; ಭಾರತ- ಪಾಕ್ ನಡುವಿನ ಫೈನಲ್‌ ಪಂದ್ಯದ ಪೂರ್ಣ ವಿವರ

ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಐತಿಹಾಸಿಕ ಮುಖಾಮುಖಿಗೆ ಸಜ್ಜಾಗಿವೆ. ಪಾಕಿಸ್ತಾನ ಮೊದಲ ಬಾರಿಗೆ ಫೈನಲ್ ತಲುಪಿದ್ದರೆ, ಭಾರತ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿದೆ. ಅಕ್ಟೋಬರ್ 3 ರಂದು ಬೆಳಗ್ಗೆ 10 ಗಂಟೆಗೆ ಜಪಾನ್‌ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಈ ಪಂದ್ಯ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲೈವ್ ವೀಕ್ಷಿಸಬಹುದು. ಪಂದ್ಯದ ಸಂಪೂರ್ಣ ವಿವರಗಳು ಮತ್ತು ತಂಡಗಳ ಮಾಹಿತಿ ಇಲ್ಲಿದೆ.

ಏಷ್ಯನ್ ಗೇಮ್ಸ್‌ ಕ್ರಿಕೆಟ್‌; ಭಾರತ- ಪಾಕ್ ನಡುವಿನ ಫೈನಲ್‌ ಪಂದ್ಯದ ಪೂರ್ಣ ವಿವರ
ಭಾರತ Vs ಪಾಕಿಸ್ತಾನ
ಪೃಥ್ವಿಶಂಕರ
|

Updated on: Oct 02, 2026 | 5:45 PM

Share

ಜಪಾನ್‌ನ ಐಚಿ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಪುರುಷರ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ಗೆ ತಲುಪಿವೆ. ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಕ್ಕಾಗಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ಸ್ಪರ್ಧೆಯಲ್ಲಿ ಪಾಕಿಸ್ತಾನ ಇದುವರೆಗೆ ಫೈನಲ್ ತಲುಪಿರಲಿಲ್ಲ. ಆದರೀಗ ಫೈನಲ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಮತ್ತೊಂದೆಡೆ, ಹಾಲಿ ಚಾಂಪಿಯನ್‌ ಆಗಿರುವ ಭಾರತ ತಂಡ ತನ್ನ ಹಾಲಿ ಚಾಂಪಿಯನ್‌ ಪಟ್ಟವನ್ನು ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ. ಹಾಗಿದ್ದರೆ ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭವಾಗಲಿದೆ? ಈ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬಿತ್ಯಾದಿ ವಿವರಗಳು ಇಲ್ಲಿವೆ.

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯ ಅಕ್ಟೋಬರ್ 3 ರಂದು ನಡೆಯಲಿದೆ.

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯ ಜಪಾನ್​ನ ಕೊರೊಗಿ ಸ್ಪೋರ್ಟ್ಸ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 10 ಗಂಟೆಗೆ ಶುರುವಾಗಲಿದೆ.

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯವನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಭಾರತ-ಪಾಕ್ ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವಿಪ್ರಜ್ ಸಿಂಗ್ ನಿಗಮ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಯಶ್ ಠಾಕೂರ್, ಅರ್ಷದೀಪ್ ಸಿಂಗ್, ವೈಭವ್ ಸೂರ್ಯವಂಶಿ.

ಪಾಕಿಸ್ತಾನ ತಂಡ: ಸಾಹಿಬ್ಜಾದಾ ಫರ್ಹಾನ್ (ನಾಯಕ), ಅಬ್ದುಲ್ ಸಮದ್ (ಉಪನಾಯಕ), ಅಬ್ರಾರ್ ಅಹ್ಮದ್, ಅಹ್ಮದ್ ದಾನಿಯಾಲ್, ಅಕಿಫ್ ಜಾವೇದ್, ಅಲಿ ರಜಾ, ಅರಾಫತ್ ಮಿನ್ಹಾಸ್, ಹೈದರ್ ಅಲಿ, ಹಸನ್ ನವಾಜ್, ಮಾಜ್ ಸದಾಕತ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ಸಾದ್ ಮಸೂದ್, ಸೈಮ್ ಅಯೂಬ್, ಸುಫ್ಯಾನ್ ಮೊಕಿಮ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ