AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಬಾಂಗ್ಲಾದೇಶ ಸೆಮಿಫೈನಲ್ ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್?

2026ರ ಏಷ್ಯನ್ ಗೇಮ್ಸ್ ಕ್ರಿಕೆಟ್ ಸೆಮಿಫೈನಲ್‌ನಲ್ಲಿ ಭಾರತ ಮಹಿಳಾ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ. ಸೆಪ್ಟೆಂಬರ್ 20ರಂದು ನಡೆಯುವ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ, ಐಸಿಸಿ ರ್ಯಾಂಕಿಂಗ್‌ನಲ್ಲಿ ಮುಂದಿರುವ ಭಾರತ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಬಾಂಗ್ಲಾದೇಶ ಕೂಡ ಇದೇ ನಿಯಮ ಬಳಸಿ ಸೆಮಿಫೈನಲ್ ತಲುಪಿದೆ. ಭಾರತ ಜಪಾನ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದೆ.

ಭಾರತ- ಬಾಂಗ್ಲಾದೇಶ ಸೆಮಿಫೈನಲ್ ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್?
ಭಾರತ Vs ಬಾಂಗ್ಲಾದೇಶ
ಪೃಥ್ವಿಶಂಕರ
|

Updated on: Sep 18, 2026 | 10:18 PM

Share

2026 ರ ಏಷ್ಯನ್ ಗೇಮ್ಸ್‌ನಲ್ಲಿ ಕ್ರಿಕೆಟ್ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್ ಸುತ್ತು ಅಂತ್ಯವಾಗಿದ್ದು, ಸೆಮಿಫೈನಲ್ ಸುತ್ತು ನಡೆಯಬೇಕಿದೆ. ಈ ಸುತ್ತಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಮಹಿಳಾ ತಂಡ, ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ಶುಕ್ರವಾರ ನಗೋಯಾದ ಕೊರೊಬೊಗೆ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ನಾಲ್ಕನೇ ಕ್ವಾರ್ಟರ್ ಫೈನಲ್‌ನಲ್ಲಿ ಭಾರತ, ಆತಿಥೇಯ ಜಪಾನ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್​ಗೇರಿತ್ತು. ಇದೀಗ ಸೆಪ್ಟೆಂಬರ್ 20 ರಂದು ಸೆಮಿಫೈನಲ್‌ ಸುತ್ತು ನಡೆಯಲಿದೆ. ಆದಾಗ್ಯೂ, ಜಪಾನ್‌ನ ಹವಾಮಾನವನ್ನು ಗಮನಿಸಿದರೆ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು ಎನ್ನಲಾಗುತ್ತಿದೆ. ಹೀಗಾಗಿ ಒಂದು ವೇಳೆ ಮಳೆಯಿಂದಾಗಿ ಸೆಮಿಫೈನಲ್ ಪಂದ್ಯ ರದ್ದಾದರೆ, ಯಾವ ತಂಡ ಫೈನಲ್‌ಗೆ ಮುನ್ನಡೆಯುತ್ತದೆ? ಎಂಬುದು ಪ್ರಶ್ನೆಯಾಗಿದೆ.

ಪಂದ್ಯ ರದ್ದಾದರೆ ಯಾರಿಗೆ ಫೈನಲ್‌ ಟಿಕೆಟ್?

ಪಂದ್ಯಾವಳಿಯ ನಿಯಮಗಳ ಪ್ರಕಾರ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ಈ ನಾಕೌಟ್ ಪಂದ್ಯವು ಭಾರೀ ಮಳೆಯಿಂದಾಗಿ ರದ್ದಾದರೆ, ಭಾರತ ತಂಡವು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಏಕೆಂದರೆ ಸೆಮಿಫೈನಲ್ ಪಂದ್ಯಕ್ಕೆ ಯಾವುದೇ ಮೀಸಲು ದಿನವಿಲ್ಲ. ಪಂದ್ಯವು ಸಂಪೂರ್ಣವಾಗಿ ಮಳೆಯಿಂದ ರದ್ದಾಗಿ ಕನಿಷ್ಠ ಓವರ್‌ಗಳ ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೆ ಐಸಿಸಿ ರ್ಯಾಂಕಿಂಗ್​ನಲ್ಲಿ ಮೇಲಿರುವ ತಂಡವನ್ನು ವಿಜೇತರೆಂದು ಘೋಷಿಸಲಾಗುತ್ತದೆ. ಹೀಗಾಗಿ ಆ ತಂಡ ಫೈನಲ್​ಗೆ ಮುನ್ನಡೆಯುತ್ತದೆ. ಅಂತರರಾಷ್ಟ್ರೀಯ ಟಿ20 ಶ್ರೇಯಾಂಕ ಮತ್ತು ಟೂರ್ನಮೆಂಟ್ ಶ್ರೇಯಾಂಕದಲ್ಲಿ ಭಾರತೀಯ ಮಹಿಳಾ ತಂಡವು ಬಾಂಗ್ಲಾದೇಶಕ್ಕಿಂತ ಗಮನಾರ್ಹವಾಗಿ ಮುಂದಿದೆ. ಆದ್ದರಿಂದ ಪಂದ್ಯವು ರದ್ದಾದರೆ ಟೀಂ ಇಂಡಿಯಾ ನೇರವಾಗಿ ಫೈನಲ್​ಗೇರಲಿದೆ.

ಸೆಮೀಸ್​ಗೇರಿದ ಬಾಂಗ್ಲಾದೇಶ

ಗಮನಿಸಬೇಕಾದ ಸಂಗತಿಯೆಂದರೆ ಬಾಂಗ್ಲಾದೇಶ ಕೂಡ ಇದೇ ನಿಯಮವನ್ನು ಬಳಸಿಕೊಂಡು ಸೆಮಿಫೈನಲ್ ತಲುಪಿತ್ತು. ಗುರುವಾರ ನಡೆದ ಪಂದ್ಯಾವಳಿಯ ಮೊದಲ ಕ್ವಾರ್ಟರ್ ಫೈನಲ್‌ನಲ್ಲಿ ಬಾಂಗ್ಲಾದೇಶ, ಚೀನಾವನ್ನು ಎದುರಿಸಬೇಕಿತ್ತು. ಆದರೆ ನಿರಂತರ ಮಳೆಯಿಂದಾಗಿ ಪಂದ್ಯವು ಒಂದೇ ಒಂದು ಚೆಂಡು ಎಸೆಯದೆ ರದ್ದಾಗಿತ್ತು. ಪರಿಣಾಮವಾಗಿ, ಬಾಂಗ್ಲಾದೇಶವು ತನ್ನ ಶ್ರೇಯಾಂಕದ ಆಧಾರದ ಮೇಲೆ ಸೆಮಿಫೈನಲ್‌ಗೇರಿತ್ತು.

ಏಷ್ಯನ್ ಗೇಮ್ಸ್ ಕ್ರಿಕೆಟ್ ಸೆಮೀಸ್ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

ಜಪಾನ್ ವಿರುದ್ಧ ಏಕಪಕ್ಷೀಯ ಗೆಲುವು

ಇನ್ನು ಜಪಾನ್ ವಿರುದ್ಧ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಭಾರತ ತಂಡ ಏಕಪಕ್ಷೀಯ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಪಾನ್ ತಂಡವು ಪೂರ್ಣ 20 ಓವರ್‌ಗಳನ್ನು ಆಡಲು ಸಾಧ್ಯವಾಗದೆ 19.5 ಓವರ್‌ಗಳಲ್ಲಿ ಕೇವಲ 57 ರನ್‌ಗಳಿಗೆ ಆಲೌಟಾಯಿತು. 58 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಐದು ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆಬೀರಿತು. ಈಗ, ಸೆಪ್ಟೆಂಬರ್ 20 ರಂದು ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ, ಭಾರತ ತಂಡ ಯಾವ ರೀತಿಯ ಪ್ರದರ್ಶನವನ್ನು ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!