ಕಣಕ್ಕಿಳಿಯದೇ ಸೆಮಿಫೈನಲ್​ಗೆ ಪ್ರವೇಶಿಸಿದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಟೂರ್ನಿಯ ಮೊದಲೆರಡು ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಗೆ ಆಹುತಿಯಾಗಿದೆ. ಮಳೆಯಿಂದಾಗಿ ಪಂದ್ಯ ಒಂದೂ ಎಸೆತ ಕಾಣದೆ ರದ್ದಾದ ಕಾರಣ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಮೇಲಿರುವ ಭಾರತ ಮತ್ತು ಪಾಕಿಸ್ತಾನ್ ತಂಡಗಳು ನೇರವಾಗಿ ಸೆಮಿಫೈನಲ್​ಗೇರಿದೆ. ಅತ್ತ ಹಾಂಗ್ ಕಾಂಗ್ ಹಾಗೂ ಅಫ್ಘಾನಿಸ್ತಾನ್ ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. 

ಕಣಕ್ಕಿಳಿಯದೇ ಸೆಮಿಫೈನಲ್​ಗೆ ಪ್ರವೇಶಿಸಿದ ಟೀಮ್ ಇಂಡಿಯಾ
Team India
Image Credit source: BCCI

Updated on: Sep 28, 2026 | 10:37 AM

ಜಪಾನ್‌ನ ನಿಶ್ಶಿನ್ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆಯಬೇಕಿದ್ದ ಏಷ್ಯನ್ ಗೇಮ್ಸ್ 2026ರ ಪುರುಷರ ಟಿ20 ಟೂರ್ನಿಯ ದ್ವಿತೀಯ ಕ್ವಾರ್ಟರ್ ಫೈನಲ್ ಪಂದ್ಯವು ಮಳೆಯಿಂದಾಗಿ ಸಂಪೂರ್ಣ ರದ್ದಾಗಿದೆ. ಈ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಮುಖಾಮುಖಿಯಾಗಬೇಕಿತ್ತು. ಪಂದ್ಯ ರದ್ದಾದ ಕಾರಣ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಮೇಲಿರುವ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ.

ಇದಕ್ಕೂ ಮುನ್ನ ಪಾಕಿಸ್ತಾನ್ ಮತ್ತು ಹಾಂಗ್ ಕಾಂಗ್ ನಡುವಣ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಕೂಡ ಮಳೆಯ ಕಾರಣ ರದ್ದಾಗಿತ್ತು. ಅದರಂತೆ ಐಸಿಸಿ ರ‍್ಯಾಂಕಿಂಗ್‌ ಆಧಾರದ ಮೇಲೆ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದೀಗ ಟೀಮ್ ಇಂಡಿಯಾ ಕೂಡ ಮುಂದಿನ ಸುತ್ತಿಗೆ ಪ್ರವೇಶಿಸಿದೆ. ಇನ್ನು ಮೂರನೇ ಮತ್ತು ನಾಲ್ಕನೇ ಕ್ವಾರ್ಟರ್ ಫೈನಲ್​ಗಳಲ್ಲಿ ಶ್ರೀಲಂಕಾ ಮತ್ತು ನೇಪಾಳ ಹಾಗೂ ಮಲೇಷ್ಯಾ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಭಾರತ ಮತ್ತು ಪಾಕಿಸ್ತಾನ್ ತಂಡಗಳನ್ನು ಎದುರಿಸಲಿದೆ.

ಭಾರತ vs ಪಾಕ್ ಮುಖಾಮುಖಿ ಹೇಗೆ?

ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯ ನಾಕೌಟ್ ಡ್ರಾ ವಿನ್ಯಾಸದ ಪ್ರಕಾರ, ಭಾರತ ಮತ್ತು ಪಾಕಿಸ್ತಾನ್ ತಂಡಗಳನ್ನು ಪರಸ್ಪರ ವಿರುದ್ಧ ಬದಿಯಲ್ಲಿ ಇರಿಸಲಾಗಿದೆ. ಅಂದರೆ ಉಭಯ ತಂಡಗಳು ಸೆಮಿಫೈನ್​ ಪಂದ್ಯದಲ್ಲಿ ಮುಖಾಮುಖಿಯಾಗುವುದಿಲ್ಲ.

ಒಂದು ವೇಳೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಮಿಫೈನಲ್ ಪಂದ್ಯಗಳಲ್ಲಿ ಜಯಭೇರಿ ಬಾರಿಸಿದರೆ, ಅಕ್ಟೋಬರ್ 3 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕಕ್ಕಾಗಿ ಮುಖಾಮುಖಿಯಾಗಲಿವೆ.

ಇನ್ನು ಉಭಯ ತಂಡಗಳು ಸೆಮಿಫೈನಲ್​ಗಳಲ್ಲಿ ಸೋತರೆ, ಮೂರನೇ ಸ್ಥಾನಕ್ಕಾಗಿ ಅಕ್ಟೋಬರ್ 3 ರಂದೇ ನಡೆಯಲಿರುವ ಕಂಚಿನ ಪದಕದ ಪಂದ್ಯದಲ್ಲಿ ಮುಖಾಮುಖಿಯಾಗಬಹುದು.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಯಶ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವಿಪ್ರಾಜ್ ನಿಗಮ್, ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ದಾಖಲೆಗಳ ಮೇಲೆ ದಾಖಲೆ: ಕಿಂಗ್ ಕೊಹ್ಲಿ ಹೆಸರಿಗೆ 10 ಭರ್ಜರಿ ದಾಖಲೆ!

ಅಫ್ಘಾನಿಸ್ತಾನ್ ಟಿ20 ತಂಡ: ದರ್ವಿಶ್ ರಸೂಲಿ (ನಾಯಕ) , ಮೊಹಮ್ಮದ್ ಇಶಾಕ್ , ಇಮ್ರಾನ್ ಮೀರ್ , ನಜೀಬುಲ್ಲಾ ಝದ್ರಾನ್ , ಇಸ್ಮತ್ ಅಲಂ , ಕರೀಮ್ ಜನತ್ , ನಂಗೆಯಾಲಿಯಾ ಖರೋಟಿ , ಅಬ್ದುಲ್ಲಾ ಅಹ್ಮದ್‌ಝೈ , ಖಾಲಿದ್ ತನಿವಾಲ್ , ಮೊಹಮ್ಮದ್ ಅಕ್ರಮ್ , ಫರಿದೂನ್ ದಾವೂದ್‌ಝೈ , ಫರ್ಮಾನುಲ್ಲಾ ಸಫಿ , ಹಸನ್ ಐಸಾಖಿಲ್ , ಫೈಸಲ್ ಶಿನೋಜಾಡಾ , ಅರಬ್ ಗುಲ್ ಮೊಮಂದ್.

 

Published On - 10:08 am, Mon, 28 September 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us