ಭಾರತದ ಬೌಲಿಂಗ್ ಬಿರುಗಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ 97 ರನ್ಸ್ ಟಾರ್ಗೆಟ್

Asian Games Mens T20I 2023: India vs Bangladesh Semi Final 1: ಏಷ್ಯನ್ ಗೇಮ್ಸ್ ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ 50 ರನ್​ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 96 ರನ್ಸ್ ಗಳಿಸಿದೆ.

ಭಾರತದ ಬೌಲಿಂಗ್ ಬಿರುಗಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ 97 ರನ್ಸ್ ಟಾರ್ಗೆಟ್
Team India (1)
Follow us
Vinay Bhat
|

Updated on: Oct 06, 2023 | 8:18 AM

ಚೀನಾದ ಹ್ಯಾಂಗ್‌ಝೌನ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games 2023) ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಮೊದಲು ಬ್ಯಾಟಿಂಗ್ ಮಾಡಿರುವ ಬಾಂಗ್ಲಾ ಪಡೆ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 96 ರನ್ಸ್ ಗಳಿಸಿದೆ.

ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ 50 ರನ್​ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಮೊಹಮ್ಮದುಲ್ ಹಸನ್ 5, ನಾಯಕ ಸೈಫ್ ಹಸನ್ 1 ರನ್ ಗಳಿಸಿದರೆ ಜಾಕಿರ್ ಹಸನ್ ಸೊನ್ನೆ ಸುತ್ತಿದರು. ಪರ್ವೇಜ್ ಹೊಸೈನ್ ಎಮನ್ 23 ರನ್​ಗಳ ಕೊಡುಗೆ ನೀಡಿದರು. ಜೇಕರ್ ಅಲಿ 14 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳೆಲ್ಲ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಬಾಂಗ್ಲಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್​ಗಳಿಸಿತಷ್ಟೆ. ಭಾರತ ಪರ ಸಾಯಿ ಕಿಶೋರ್ 3 ವಿಕೆಟ್ ಕಿತ್ತರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರು.

ಇದನ್ನೂ ಓದಿ
Image
ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್​ನಿಂದ ಬಯಲಾಯಿತು ದೊಡ್ಡ ಸುದ್ದಿ
Image
ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ನೆದರ್ಲೆಂಡ್ಸ್ ಮುಖಾಮುಖಿ
Image
ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
Image
ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕನ್ನಡಿಗ..!

ಒಂದೇ ಓವರ್​ನಲ್ಲಿ ಎರಡು ವಿಕೆಟ್ ಪಡೆದ ವಾಷಿಂಗ್ಟನ್ ಸುಂದರ್ ವಿಡಿಯೋ:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಶಹ್ಬಾಜ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಓಪನರ್​ಗಳಾಗಿ ರುತುರಾಜ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದರೆ ನಂತರದಲ್ಲಿ ತಿಲಕ್ ವರ್ಮಾ, ಜಿತೇಶ್ ಶರ್ಮಾ, ರಿಂಕು ಸಿಂಗ್ ಇದ್ದಾರೆ. ಆಲ್ರೌಂಡರ್​ಗಳಾಗಿ ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ. ಬಿಷ್ಟೋಯಿ, ಸಾಯಿ ಕಿಶೋರ್ ಹಾಗೂ ಅರ್ಶ್​ದೀಪ್ ಸಿಂಗ್ ಪ್ರಮುಖ ಬೌಲರ್​ಗಳಾಗಿದ್ದಾರೆ.

ಶಾಹೀನ್ ಅಫ್ರಿದಿ ಅನ್​ ಫಿಟ್​: ಪಾಕ್ ತಂಡಕ್ಕೆ ಹೊಸ ಚಿಂತೆ ಶುರು..!

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಪ್ರವೇಶ ಪಡೆಯಲಿದೆ. ಇದರ ಮೂಲಕ ಒಂದು ಪದಕ ಖಚಿತ ಪಡಿಸಿಕೊಳ್ಳುತ್ತದೆ. ಸೋತ ತಂಡ ಸೆಮಿ ಫೈನಲ್-2 ನಲ್ಲಿ ಸೋತ ತಂಡದ ವಿರುದ್ಧ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್ (ನಾಯಕ) , ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ , ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ರಿಂಕು ಸಿಂಗ್ , ಶಿವಂ ದುಬೆ , ವಾಷಿಂಗ್ಟನ್ ಸುಂದರ್ , ಶಜ್ಬಾಜ್ ಅಹ್ಮದ್, ರವಿಶ್ರೀನಿವಾಸನ್ ಸಾಯಿ ಕಿಶೋರ್ , ರವಿ ಬಿಷ್ಣೋಯ್ , ಅರ್ಷ್​ದೀಪ್ ಸಿಂಗ್.

ಬಾಂಗ್ಲಾದೇಶ ಪ್ಲೇಯಿಂಗ್ XI: ಪರ್ವೇಜ್ ಹೊಸೈನ್ ಎಮನ್, ಮೊಹಮ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಸೈಫ್ ಹಸನ್ (ನಾಯಕ), ಅಫೀಫ್ ಹೊಸೈನ್, ಶಹದತ್ ಹೊಸೈನ್, ಜೇಕರ್ ಅಲಿ (ವಿಕೆಟ್ ಕೀಪರ್), ರಾಕಿಬುಲ್ ಹಸನ್, ಹಸನ್ ಮುರಾದ್, ಮೃತುಂಜಯ್ ಚೌಧುರಿ, ರಿಪಾನ್ ಮೊಂಡೋಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ