ಚೀನಾದ ಹ್ಯಾಂಗ್‌ಝೌನ ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games 2023) ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಮೊದಲು ಬ್ಯಾಟಿಂಗ್ ಮಾಡಿರುವ ಬಾಂಗ್ಲಾ ಪಡೆ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 96 ರನ್ಸ್ ಗಳಿಸಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್ಗೆ ಇಳಿದ ಬಾಂಗ್ಲಾ 50 ರನ್ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಮೊಹಮ್ಮದುಲ್ ಹಸನ್ 5, ನಾಯಕ ಸೈಫ್ ಹಸನ್ 1 ರನ್ ಗಳಿಸಿದರೆ ಜಾಕಿರ್ ಹಸನ್ ಸೊನ್ನೆ ಸುತ್ತಿದರು. ಪರ್ವೇಜ್ ಹೊಸೈನ್ ಎಮನ್ 23 ರನ್ಗಳ ಕೊಡುಗೆ ನೀಡಿದರು. ಜೇಕರ್ ಅಲಿ 14 ರನ್ ಗಳಿಸಿದರು. ಉಳಿದ ಬ್ಯಾಟರ್ಗಳೆಲ್ಲ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಬಾಂಗ್ಲಾ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್ಗಳಿಸಿತಷ್ಟೆ. ಭಾರತ ಪರ ಸಾಯಿ ಕಿಶೋರ್ 3 ವಿಕೆಟ್ ಕಿತ್ತರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರು.
Two wickets in a single over by Washington Sundar.
India on the top in Asian Games Semi Finals. pic.twitter.com/C9raNMhokk
— Mufaddal Vohra (@mufaddal_vohra) October 6, 2023
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಶಹ್ಬಾಜ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಓಪನರ್ಗಳಾಗಿ ರುತುರಾಜ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದರೆ ನಂತರದಲ್ಲಿ ತಿಲಕ್ ವರ್ಮಾ, ಜಿತೇಶ್ ಶರ್ಮಾ, ರಿಂಕು ಸಿಂಗ್ ಇದ್ದಾರೆ. ಆಲ್ರೌಂಡರ್ಗಳಾಗಿ ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ. ಬಿಷ್ಟೋಯಿ, ಸಾಯಿ ಕಿಶೋರ್ ಹಾಗೂ ಅರ್ಶ್ದೀಪ್ ಸಿಂಗ್ ಪ್ರಮುಖ ಬೌಲರ್ಗಳಾಗಿದ್ದಾರೆ.
ಶಾಹೀನ್ ಅಫ್ರಿದಿ ಅನ್ ಫಿಟ್: ಪಾಕ್ ತಂಡಕ್ಕೆ ಹೊಸ ಚಿಂತೆ ಶುರು..!
ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ಗೆ ಪ್ರವೇಶ ಪಡೆಯಲಿದೆ. ಇದರ ಮೂಲಕ ಒಂದು ಪದಕ ಖಚಿತ ಪಡಿಸಿಕೊಳ್ಳುತ್ತದೆ. ಸೋತ ತಂಡ ಸೆಮಿ ಫೈನಲ್-2 ನಲ್ಲಿ ಸೋತ ತಂಡದ ವಿರುದ್ಧ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ.
ಭಾರತ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್ (ನಾಯಕ) , ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ , ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ರಿಂಕು ಸಿಂಗ್ , ಶಿವಂ ದುಬೆ , ವಾಷಿಂಗ್ಟನ್ ಸುಂದರ್ , ಶಜ್ಬಾಜ್ ಅಹ್ಮದ್, ರವಿಶ್ರೀನಿವಾಸನ್ ಸಾಯಿ ಕಿಶೋರ್ , ರವಿ ಬಿಷ್ಣೋಯ್ , ಅರ್ಷ್ದೀಪ್ ಸಿಂಗ್.
ಬಾಂಗ್ಲಾದೇಶ ಪ್ಲೇಯಿಂಗ್ XI: ಪರ್ವೇಜ್ ಹೊಸೈನ್ ಎಮನ್, ಮೊಹಮ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಸೈಫ್ ಹಸನ್ (ನಾಯಕ), ಅಫೀಫ್ ಹೊಸೈನ್, ಶಹದತ್ ಹೊಸೈನ್, ಜೇಕರ್ ಅಲಿ (ವಿಕೆಟ್ ಕೀಪರ್), ರಾಕಿಬುಲ್ ಹಸನ್, ಹಸನ್ ಮುರಾದ್, ಮೃತುಂಜಯ್ ಚೌಧುರಿ, ರಿಪಾನ್ ಮೊಂಡೋಲ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ