ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ (Asian Games 2023) ಮಹಿಳಾ ಟಿ20 ಪಂದ್ಯದಲ್ಲಿ ಇಂದು ಸ್ಮೃತಿ ಮಂದಾನ ನಾಯಕತ್ವದ ಭಾರತ ಮಹಿಳಾ ತಂಡ ಹಾಗೂ ನಿಗರ್ ಸುಲ್ತಾನಾ ನೇತೃತ್ವದ ಬಾಂಗ್ಲಾದೇಶ ತಂಡ ಸೆಣೆಸಾಟ ನಡೆಸುತ್ತಿದೆ. ಹ್ಯಾಂಗ್‌ಝೌನ ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ನಲ್ಲಿ ಈ ಪಂದ್ಯ ನಡೆಯುತ್ತಿದೆ. ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಮಿನ್ನು ಮಣಿ ಬದಲು ಟಿಟಾಸ್ ಸಾಧು ಸ್ಥಾನ ಪಡೆದುಕೊಂಡಿದ್ದಾರೆ.
ಈಗಾಗಲೇ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಬಾಂಗ್ಲಾದೇಶ ಇನ್ನಿಂಗ್ಸ್ ಶುರು ಮಾಡಿದೆ. ಆದರೆ, ಮೊದಲ ಓವರ್ನಲ್ಲೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಪೂಜಾ ವಸ್ತ್ರಾಕರ್ ಅವರ ಮೊದಲ ಓವರ್ನ ಮೊದಲ ಎಸೆತದಲ್ಲೇ ಶಾಥಿ ರಾಣಿ ಅವರು ರಿಚಾ ಘೋಷ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರೆ 5ನೇ ಎಸೆತದಲ್ಲಿ ಶಮೀಮಾ ಸುಲ್ತಾನ ಎಲ್ಬಿ ಬಲೆಗೆ ಬಿದ್ದು ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು. ಬಳಿಕ ಸೋಭಾನಾ ಮೊಸ್ತರಿ 8 ರನ್ ಗಳಿಸಿ ಪೆವಿಲಿಯನ್ಗೆ ಸೇರಿಕೊಂಡರು.
ವಿಶ್ವಕಪ್ನಲ್ಲಿ ಬಾಬರ್ ಬೆಂಕಿ ಬ್ಯಾಟಿಂಗ್ ಪ್ರದರ್ಶಿಸುತ್ತಾರೆ: ಗೌತಮ್ ಗಂಭೀರ್ ಭವಿಷ್ಯ
ಬಾಂಗ್ಲಾದೇಶ ಮಹಿಳಾ ತಂಡದ ಪರ ಇಂದಿನ ಪಂದ್ಯದಲ್ಲಿ ಶಮೀಮಾ ಸುಲ್ತಾನ , ಶಾಥಿ ರಾಣಿ , ನಿಗರ್ ಸುಲ್ತಾನ , ಸೋಭಾನಾ ಮೊಸ್ತರಿ , ರಿತು ಮೋನಿ , ಮಾರುಫಾ ಅಕ್ಟರ್ , ನಹಿದಾ ಅಕ್ಟರ್ , ಶೋರ್ನಾ ಅಕ್ಟರ್ , ಫಾಹಿಮಾ ಖಾತುನ್ , ಸುಲ್ತಾನಾ ಖಾತುನ್ ಹಾಗೂ ರಬೇಯಾ ಖಾನ್ ಕಣಕ್ಕಿಳಿದಿದ್ದಾರೆ.
ಇತ್ತ ಭಾರತ ತಂಡದ ಪರ ಸ್ಮೃತಿ ಮಂಧಾನ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದು ಶಫಾಲಿ ವರ್ಮಾ , ಜೆಮಿಮಾ ರೊಡ್ರಿಗಸ್ , ಕನಿಕಾ ಅಹುಜಾ , ರಿಚಾ ಘೋಷ್ , ದೀಪ್ತಿ ಶರ್ಮಾ , ದೇವಿಕಾ ವೈದ್ಯ , ಅಮಂಜೋತ್ ಕೌರ್ , ಪೂಜಾ ವಸ್ತ್ರಾಕರ್ , ಟಿಟಾಸ್ ಸಾಧು ಹಾಗೂ ರಾಜೇಶ್ವರಿ ಗಾಯಕ್ವಾಡ್ ಸ್ಥಾನ ಪಡೆದುಕೊಂಡಿದ್ದಾರೆ.
ಹರ್ಮನ್‌ಪ್ರೀತ್ ಕೌರ್ ಅವರನ್ನು ಐಸಿಸಿ ಎರಡು ಪಂದ್ಯಗಳ ಅಮಾನತುಗೊಳಿಸಿದೆ. ಹೀಗಾಗಿ ಅವರ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿದಿದೆ. ಸ್ಮೃತಿ ಮಂಧಾನ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಇಂದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಗೆದ್ದರೆ ಫೈನಲ್ಗೆ ಪ್ರವೇಶಿಸಲಿದ್ದಾರೆ. ಫೈನಲ್ನಲ್ಲಿ ಹರ್ಮನ್ ಆಡಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ