AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul- Athiya Shetty Wedding: ಕೆಎಲ್ ರಾಹುಲ್ -ಅಥಿಯಾ ಶೆಟ್ಟಿ ಮದುವೆ ಡೇಟ್ ಫಿಕ್ಸ್!

KL Rahul- Athiya Shetty Wedding: ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಈ ಜೋಡಿ ಹಕ್ಕಿಗಳ ವಿವಾಹ ಕಾರ್ಯಕ್ರಮ ಜನವರಿ 21 ರಿಂದ ಪ್ರಾರಂಭವಾಗಲಿದ್ದು, ಜನವರಿ 23 ರವರೆಗೆ ನಡೆಯಲಿದೆ.

KL Rahul- Athiya Shetty Wedding: ಕೆಎಲ್ ರಾಹುಲ್ -ಅಥಿಯಾ ಶೆಟ್ಟಿ ಮದುವೆ ಡೇಟ್ ಫಿಕ್ಸ್!
ಕೆಎಲ್ ರಾಹುಲ್- ಅಥಿಯಾ ಶೆಟ್ಟಿ
TV9 Web
| Edited By: |

Updated on:Dec 14, 2022 | 11:32 AM

Share

ಪ್ರಸ್ತುತ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾವನ್ನು (India vs Bangladesh) ಮುನ್ನಡೆಸುತ್ತಿರುವ ಕನ್ನಡಿಗ ಕೆಎಲ್ ರಾಹುಲ್ (KL Rahul) ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ (Athiya Shetty) ಪ್ರೇಮ ಪಾಶದಲ್ಲಿ ಸಿಲುಕಿರುವ ವಿಚಾರ ನಿಮಗೆಲ್ಲ ಗೊತ್ತೇ ಇದೆ. ಅಲ್ಲದೆ ಜನವರಿಯಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿರಿಸಲಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಇದಕ್ಕೆ ಪೂರಕವೆಂಬಂತೆ ರಾಹುಲ್ ಜನವರಿಯಲ್ಲಿ ಟೀಂ ಇಂಡಿಯಾದಿಂದ (Team India) ರಜೆ ಕೇಳಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸುವ ದಿನ ನಿಗದಿಯಾಗಿದ್ದು, ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಈ ಜೋಡಿ ಹಕ್ಕಿಗಳ ವಿವಾಹ ಕಾರ್ಯಕ್ರಮ ಜನವರಿ 21 ರಿಂದ ಪ್ರಾರಂಭವಾಗಲಿದ್ದು, ಜನವರಿ 23 ರವರೆಗೆ ನಡೆಯಲಿದೆ.

ಪಿಂಕ್ವಿಲ್ಲಾ ಸುದ್ದಿ ಪ್ರಕಾರ, ಇಬ್ಬರೂ ಜನವರಿಯಲ್ಲಿ ಮದುವೆಯಾಗಲಿದ್ದು, ಈಗಾಗಲೇ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಜೋಡಿಗಳು ಡಿಸೆಂಬರ್ ಅಂತ್ಯದಿಂದ ಅತಿಥಿಗಳಿಗೆ ಆಹ್ವಾನ ನೀಡುವ ಪ್ರಕ್ರಿಯೆ ಆರಂಭಿಸಲ್ಲಿದ್ದಾರೆ. ವರದಿಯಂತೆ ಜನವರಿ 21 ರಿಂದ 23 ಜನವರಿವರೆಗೆ 3 ದಿನಗಳವರೆಗೆ ಈ ಮದುವೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಈಗಿನಿಂದಲೇ ತಮ್ಮ ಆಪ್ತ ಕುಟುಂಬ ಸದಸ್ಯರಿಗೆ ಸಂದೇಶ ಕಳುಹಿಸಲು ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

IND vs BAN: ಇಂದು ಭಾರತ- ಬಾಂಗ್ಲಾದೇಶ ತೃತೀಯ ಏಕದಿನ: ರಾಹುಲ್ ನಾಯಕತ್ವಕ್ಕೆ ದೊಡ್ಡ ಸವಾಲು

ದಕ್ಷಿಣ ಭಾರತದ ಪದ್ಧತಿಯಂತೆ ಮದುವೆ

ಹೀಗಾಗಿ ಇಬ್ಬರ ಮನೆಯಲ್ಲಿ ಮದುವೆ ತಯಾರಿ ಶುರುವಾಗಿದೆ. ಆದರೆ ಆಥಿಯಾ ಶೆಟ್ಟಿ ಕುಟುಂಬ ಈ ದಿನಾಂಕಗಳನ್ನು ಅಧಿಕೃತವಾಗಿ ಖಚಿತಪಡಿಸಿಲ್ಲ. ಅರಿಶಿನ, ಮೆಹಂದಿ, ಸಂಗೀತ ಸೇರಿದಂತೆ ದಕ್ಷಿಣ ಭಾರತದ ಪದ್ಧತಿಯಂತೆ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ. ಸುನೀಲ್ ಶೆಟ್ಟಿ ಅವರ ಐಷಾರಾಮಿ ಮನೆ ಜಹಾನ್‌ನಲ್ಲಿ ಈ ವಿವಾಹ ಸಮಾರಂಭ ನಡೆಯಲಿದೆ.

ರಾಹುಲ್ ಮತ್ತು ಅಥಿಯಾ ಇಬ್ಬರೂ ಡಿಸೈನರ್ ಬಟ್ಟೆಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅಥಿಯಾ ಅವರ ನೆಚ್ಚಿನ ಡಿಸೈನರ್ ಮನೀಶ್ ಮಲ್ಹೋತ್ರಾ ಅಥಿಯಾಗೆ ಮದುವೆಯ ಲೆಹೆಂಗಾವನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ ರಾಹುಲ್​ಗೆ ಯಾರು ವಸ್ತ್ರ ವಿನ್ಯಾಸ ಮಾಡಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಮುಂಬೈನಲ್ಲಿ ಇಬ್ಬರ ವಾಸ

ಕೆಲವು ವರ್ಷಗಳ ಹಿಂದೆ ಈ ಇಬ್ಬರೂ ಮುಂಬೈನಲ್ಲಿ ಸಮುದ್ರದ ಮುಂಭಾಗದಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದರು. ಹೀಗಾಗಿ ಮದುವೆಯ ನಂತರ ಈ ದಂಪತಿಗಳು ಅಲ್ಲಿಯೇ ಹೊಸಜೀವನ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಮದುವೆಯ ತಯಾರಿಯಿಂದಾಗಿ, ಜನವರಿ 18 ರಿಂದ 24 ರವರೆಗೆ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಾಹುಲ್ ವಿಶ್ರಾಂತಿ ಪಡೆಯುವ ಸಾಧ್ಯತೆಗಳಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Wed, 14 December 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್