AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2026: ಜಮ್ಮು ವೇಗಿಗೆ ಜಾಕ್​ಪಾಟ್; 8.4 ಕೋಟಿಗೆ ಖರೀದಿಯಾದ ಆಕಿಬ್ ದಾರ್‌

Auqib Dar Auction Price: ಅಬುಧಾಬಿಯಲ್ಲಿ ನಡೆದ ಐಪಿಎಲ್ 2026 ಮಿನಿ ಹರಾಜಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಯುವ ವೇಗಿ ಆಕಿಬ್ ನಬಿ ದಾರ್ 8.4 ಕೋಟಿ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದರು. 30 ಲಕ್ಷ ಮೂಲ ಬೆಲೆಯೊಂದಿಗೆ ಬಂದಿದ್ದ ಆಕಿಬ್, ತಮ್ಮ ಅದ್ಭುತ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ದುಲೀಪ್ ಟ್ರೋಫಿಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಈ ಯುವ ತಾರೆಯಿಂದ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ.

IPL Auction 2026: ಜಮ್ಮು ವೇಗಿಗೆ ಜಾಕ್​ಪಾಟ್; 8.4 ಕೋಟಿಗೆ ಖರೀದಿಯಾದ ಆಕಿಬ್ ದಾರ್‌
Auqib Dar
ಪೃಥ್ವಿಶಂಕರ
|

Updated on:Dec 16, 2025 | 5:52 PM

Share

ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 2026 ಮಿನಿ ಹರಾಜಿನಲ್ಲಿ (IPL 2026 auction) ಭಾರತದ ಯುವ ಆಟಗಾರರಿಗೆ ಬಂಪರ್ ಬೆಲೆ ಸಿಕ್ಕಿದೆ. ಬೆರಳಿಕೆಯಷ್ಟು ವಿದೇಶಿ ಆಟಗಾರರು ಭಾರಿ ಮೊತ್ತಕ್ಕೆ ಖರೀದಿಯಾದರೆ, ಇತ್ತ ಭಾರತದ ಯುವ ಆಟಗಾರರಿಗೂ ಭಾಗ್ಯದ ಬಾಗಿಲು ತೆರೆದಿದೆ. ಅಂತಹವರಲ್ಲಿ ಜಮ್ಮು ಮತ್ತು ಕಾಶ್ಮೀರದ ಯುವ ವೇಗಿ ಆಕಿಬ್ ನಬಿ ದಾರ್ (Aaqib Nabi Dar) ಕೂಡ ಒಬ್ಬರು. ಆಕಿಬ್​ಗೆ ಸಾಕಷ್ಟು ತಂಡಗಳಿಗೆ ಪೈಪೋಟಿ ನಡೆಯಿತು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 8.40 ಕೋಟಿ ನೀಡಿ ಅವರನ್ನು ಖರೀದಿಸಿತು. ಮೂಲ ಬೆಲೆ ಕೇವಲ 30 ಲಕ್ಷ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಆಕಿಬ್ ಕೋಟಿ ಮೊತ್ತಕ್ಕೆ ಬಿಕರಿಯಾದರು.

ಆಕಿಬ್ ನಬಿ ದಾರ್ ಯಾರು?

ಆಕಿಬ್ ನಬಿ ದಾರ್ ನವೆಂಬರ್ 4, 1996 ರಂದು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಶೀರಿ ಗ್ರಾಮದಲ್ಲಿ ಜನಿಸಿದರು. ಸೆಪ್ಟೆಂಬರ್ 23, 2018 ರಂದು ವಿಜಯ್ ಹಜಾರೆ ಟ್ರೋಫಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪರ ಲಿಸ್ಟ್ ಎ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಕಿಬ್ ಅವರು ಅಂದಿನಿಂದ ಟಿ20 ಮತ್ತು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಪ್ರಸ್ತುತ ಅದ್ಭುತ ಫಾರ್ಮ್​ನಲ್ಲಿರುವ ಆಕಿಬ್, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪಂದ್ಯಾವಳಿಯಲ್ಲಿ ತಂಡದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ. ಇನ್ನು ತಮ್ಮ ಟಿ20 ವೃತ್ತಿಜೀವನದಲ್ಲಿ ಇದುವರೆಗೆ 34 ಪಂದ್ಯಗಳನ್ನಾಡಿರುವ ಆಕಿಬ್, 7.74 ರ ಎಕಾನಮಿಯಲ್ಲಿ 43 ವಿಕೆಟ್‌ಗಳನ್ನು ಪಡೆದಿದ್ದಾರೆ.

4 ಎಸೆತಗಳಲ್ಲಿ 4 ವಿಕೆಟ್

ಡೆತ್ ಓವರ್‌ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಆಕಿಬ್, 2025 ರ ದುಲೀಪ್ ಟ್ರೋಫಿಯಲ್ಲಿ ಉತ್ತರ ವಲಯ ಪರ ಕಣಕ್ಕಿಣಿದು, ಪಶ್ಚಿಮ ವಲಯ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ಸತತ ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಈ ಸಾಧನೆಯೊಂದಿಗೆ, ಅವರು ದುಲೀಪ್ ಟ್ರೋಫಿ ಇತಿಹಾಸದಲ್ಲಿ ಹ್ಯಾಟ್ರಿಕ್ ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ, ಅಭಿಮಾನಿಗಳು ಅವರ ಐಪಿಎಲ್ ಚೊಚ್ಚಲ ಪಂದ್ಯಕ್ಕಾಗಿ ಕಾಯುತ್ತಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Tue, 16 December 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ