
ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 2026 ಮಿನಿ ಹರಾಜಿನಲ್ಲಿ (IPL 2026 auction) ಭಾರತದ ಯುವ ಆಟಗಾರರಿಗೆ ಬಂಪರ್ ಬೆಲೆ ಸಿಕ್ಕಿದೆ. ಬೆರಳಿಕೆಯಷ್ಟು ವಿದೇಶಿ ಆಟಗಾರರು ಭಾರಿ ಮೊತ್ತಕ್ಕೆ ಖರೀದಿಯಾದರೆ, ಇತ್ತ ಭಾರತದ ಯುವ ಆಟಗಾರರಿಗೂ ಭಾಗ್ಯದ ಬಾಗಿಲು ತೆರೆದಿದೆ. ಅಂತಹವರಲ್ಲಿ ಜಮ್ಮು ಮತ್ತು ಕಾಶ್ಮೀರದ ಯುವ ವೇಗಿ ಆಕಿಬ್ ನಬಿ ದಾರ್ (Aaqib Nabi Dar) ಕೂಡ ಒಬ್ಬರು. ಆಕಿಬ್ಗೆ ಸಾಕಷ್ಟು ತಂಡಗಳಿಗೆ ಪೈಪೋಟಿ ನಡೆಯಿತು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 8.40 ಕೋಟಿ ನೀಡಿ ಅವರನ್ನು ಖರೀದಿಸಿತು. ಮೂಲ ಬೆಲೆ ಕೇವಲ 30 ಲಕ್ಷ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಆಕಿಬ್ ಕೋಟಿ ಮೊತ್ತಕ್ಕೆ ಬಿಕರಿಯಾದರು.
ಆಕಿಬ್ ನಬಿ ದಾರ್ ನವೆಂಬರ್ 4, 1996 ರಂದು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಶೀರಿ ಗ್ರಾಮದಲ್ಲಿ ಜನಿಸಿದರು. ಸೆಪ್ಟೆಂಬರ್ 23, 2018 ರಂದು ವಿಜಯ್ ಹಜಾರೆ ಟ್ರೋಫಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪರ ಲಿಸ್ಟ್ ಎ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಆಕಿಬ್ ಅವರು ಅಂದಿನಿಂದ ಟಿ20 ಮತ್ತು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಪ್ರಸ್ತುತ ಅದ್ಭುತ ಫಾರ್ಮ್ನಲ್ಲಿರುವ ಆಕಿಬ್, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪಂದ್ಯಾವಳಿಯಲ್ಲಿ ತಂಡದ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ. ಇನ್ನು ತಮ್ಮ ಟಿ20 ವೃತ್ತಿಜೀವನದಲ್ಲಿ ಇದುವರೆಗೆ 34 ಪಂದ್ಯಗಳನ್ನಾಡಿರುವ ಆಕಿಬ್, 7.74 ರ ಎಕಾನಮಿಯಲ್ಲಿ 43 ವಿಕೆಟ್‌ಗಳನ್ನು ಪಡೆದಿದ್ದಾರೆ.
J&K's finest, now ready to wear DC’s pride in 💙❤️
Welcome, Auqib Dar🔥 pic.twitter.com/Y1u6LUYEer
— Delhi Capitals (@DelhiCapitals) December 16, 2025
ಡೆತ್ ಓವರ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಆಕಿಬ್, 2025 ರ ದುಲೀಪ್ ಟ್ರೋಫಿಯಲ್ಲಿ ಉತ್ತರ ವಲಯ ಪರ ಕಣಕ್ಕಿಣಿದು, ಪಶ್ಚಿಮ ವಲಯ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ಸತತ ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಈ ಸಾಧನೆಯೊಂದಿಗೆ, ಅವರು ದುಲೀಪ್ ಟ್ರೋಫಿ ಇತಿಹಾಸದಲ್ಲಿ ಹ್ಯಾಟ್ರಿಕ್ ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ, ಅಭಿಮಾನಿಗಳು ಅವರ ಐಪಿಎಲ್ ಚೊಚ್ಚಲ ಪಂದ್ಯಕ್ಕಾಗಿ ಕಾಯುತ್ತಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:49 pm, Tue, 16 December 25