Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi Stats: ಈ ಬಾರಿಯ ರಣಜಿ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 8 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಕಳೆದ 18 ಪಂದ್ಯಗಳಲ್ಲಿ ಆಖಿಬ್ ನಬಿ 13 ಬಾರಿ 5 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೆ 2 ಸೀಸನ್ಗಳ ಮೂಲಕ ರಣಜಿ ಟೂರ್ನಿಯಲ್ಲಿ 100 ಕ್ಕೂ ಅಧಿಕ ವಿಕೆಟ್ ಪಡೆದ ಆರನೇ ಬೌಲರ್ ಎನಿಸಿಕೊಂಡಿದ್ದಾರೆ.
ಬರೋಬ್ಬರಿ 67 ವರ್ಷಗಳ ಬಳಿಕ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ರೂವಾರಿ ಆಖಿಬ್ ನಬಿ. ಏಕೆಂದರೆ ಇಡೀ ಟೂರ್ನಿಯುದ್ದಕ್ಕೂ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದೇ ನಬಿ.
ಅದರಲ್ಲೂ ಫೈನಲ್ ಪಂದ್ಯದಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್ನಲ್ಲಿ 293 ರನ್ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ರಣಜಿ ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ವಿಶೇಷ ಎಂದರೆ ಈ ಬಾರಿಯ ಟೂರ್ನಿಯಲ್ಲಿ 10 ಪಂದ್ಯಗಳನ್ನಾಡಿರುವ ನಬಿ ಕಬಳಿಸಿದ್ದು ಬರೋಬ್ಬರಿ 60 ವಿಕೆಟ್ಗಳು. ಅಂದರೆ ರಣಜಿ ಟೂರ್ನಿ ಇತಿಹಾಸದಲ್ಲೇ 60 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿದ ಮೂವರು ವೇಗಿಗಳಲ್ಲಿ ಆಖಿಬ್ ನಬಿ ಕೂಡ ಒಬ್ಬರಾಗಿದ್ದಾರೆ.
ಇದಕ್ಕೂ ಮುನ್ನ ಅಂದರೆ, 2024-25 ರ ಸೀಸನ್ನಲ್ಲಿ ಆಖಿಬ್ ನಬಿ ಬರೋಬ್ಬರಿ 44 ವಿಕೆಟ್ ಕಬಳಿಸಿದ್ದರು. ಪರಿಣಾಮ ಜಮ್ಮು-ಕಾಶ್ಮೀರ ತಂಡವು ಕ್ವಾರ್ಟರ್ ಫೈನಲ್ವರೆಗೆ ತಲುಪಿತ್ತು. ಈ ಬಾರಿ ತನ್ನ ಕರಾರುವಾಕ್ಕಾದ ದಾಳಿಯನ್ನು ಮತ್ತಷ್ಟು ಮೊನಚುಗೊಳಿಸಿದ್ದ ನಬಿ ಜಮ್ಮು-ಕಾಶ್ಮೀರ ತಂಡಕ್ಕೆ ರಣಜಿ ಕಿರೀಟ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಈ ಬಾರಿಯ ರಣಜಿ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 8 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಕಳೆದ 18 ಪಂದ್ಯಗಳಲ್ಲಿ ಆಖಿಬ್ ನಬಿ 13 ಬಾರಿ 5 ವಿಕೆಟ್ ಪಡೆದಿದ್ದಾರೆ. ಅಷ್ಟೇ ಅಲ್ಲದೆ 2 ಸೀಸನ್ಗಳ ಮೂಲಕ ರಣಜಿ ಟೂರ್ನಿಯಲ್ಲಿ 100 ಕ್ಕೂ ಅಧಿಕ ವಿಕೆಟ್ ಪಡೆದ ಆರನೇ ಬೌಲರ್ ಎನಿಸಿಕೊಂಡಿದ್ದಾರೆ.
ಈ ಎಲ್ಲಾ ಸಾಧನೆಗಳೊಂದಿಗೆ ರಣಜಿ ಟೂರ್ನಿಯಲ್ಲಿ ಸಂಚಲನ ಸೃಷ್ಟಿಸಿರುವ ಆಖಿಬ್ ನಬಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.
Published on: Mar 01, 2026 11:18 AM
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

