AUS vs AFG: ಅಫ್ಘಾನ್ ಮಣಿಸಿದ ಆಸೀಸ್; ಹಾಲಿ ಚಾಂಪಿಯನ್​ಗಳ ಸೇಮಿಸ್ ಹಾದಿ ಇನ್ನೂ ಜೀವಂತ! ಆದರೆ?

T20 World Cup 2022: ಟಿ20 ವಿಶ್ವಕಪ್​ನಲ್ಲಿ ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

AUS vs AFG: ಅಫ್ಘಾನ್ ಮಣಿಸಿದ ಆಸೀಸ್; ಹಾಲಿ ಚಾಂಪಿಯನ್​ಗಳ ಸೇಮಿಸ್ ಹಾದಿ ಇನ್ನೂ ಜೀವಂತ! ಆದರೆ?
Aus Vs Afg
Follow us
| Updated By: ಪೃಥ್ವಿಶಂಕರ

Updated on:Nov 04, 2022 | 5:49 PM

ಟಿ20 ವಿಶ್ವಕಪ್​ನಲ್ಲಿ (T20 World Cup) ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ (Australia and Afghanistan) ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ವಿಶ್ವಕಪ್​ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು ಒಂದರಲ್ಲಿ ಸೋಲನುಭವಿಸಿರುವ ಆತಿಥೇಯ ತಂಡ 7 ಅಂಕಗಳೊಂದಿಗೆ ಪಾಯಿಂಟ್​ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇದರೊಂದಿಗೆ ಹಾಲಿ ಚಾಂಪಿಯನ್​ಗಳು ತಮ್ಮ ಸೆಮಿಫೈನಲ್​ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದ್ದಾರೆ. ಆದರೆ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೋತರಷ್ಟೇ ಕಾಂಗರೂಗಳು ಸುಗಮವಾಗಿ ಸೇಮಿಸ್​ಗೆ ಎಂಟ್ರಿಕೊಡಲಿದ್ದಾರೆ. ಒಂದು ವೇಳೆ ಇಂಗ್ಲೆಂಡ್ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಇಂಗ್ಲೆಂಡ್​ಗೆ ಸೆಮಿಫೈನಲ್ ಟಿಕೆಟ್ ಖಚಿತವಾಗಲಿದೆ.

ಈ ಪಂದ್ಯದಲ್ಲಿ ಗೆಲುವು ಸಾಧಿಸಿದರಾದರೂ ವಿಶ್ವ ಚಾಂಪಿಯನ್​ಗಳಿಗೆ ಟಿ20 ವಿಶ್ವಕಪ್ ಅವರ ಸ್ವಂತ ತವರಿನಲ್ಲಿಯೇ ಪಂದ್ಯದಿಂದ ಪಂದ್ಯದ ಸವಾಲಾಗಿದೆ ಎಂಬುದು ಸಾಬೀತಾಗಿದೆ. ಅಲ್ಪ ಅಂತರದಲ್ಲಿ ಗೆದ್ದಿರುವ ಆಸೀಸ್​, ಸೆಮಿಫೈನಲ್‌ಗೆ ತಲುಪುವ ಸಾಧ್ಯತೆಗಳು ಕೇವಲ ನಿರೀಕ್ಷೆಯ ಮೇಲಿವೆ. ಆಸ್ಟ್ರೇಲಿಯ ವಿರುದ್ಧ ಚೊಚ್ಚಲ ಟಿ20 ಪಂದ್ಯವನ್ನಾಡುತ್ತಿರುವ ಅಫ್ಘಾನಿಸ್ತಾನ ತಂಡ ಕೊನೆಯ ಎಸೆತದವರೆಗೂ ಕಠಿಣ ಹೋರಾಟ ನೀಡಿ ಕೇವಲ 4 ರನ್‌ಗಳಿಂದ ಸೋಲನುಭವಿಸಿತು.

ಮ್ಯಾಕ್ಸ್​ವೆಲ್ ಅರ್ಧಶತಕ

ಅಡಿಲೇಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ನಾಯಕ ಆ್ಯರೋನ್ ಫಿಂಚ್ ಇಲ್ಲದೆ ಕಣಕ್ಕಿಳಿದಿತ್ತು. ಅಂತಹ ಪರಿಸ್ಥಿತಿಯಲ್ಲಿ, ತಂಡವು ಕೆಲವು ಬದಲಾವಣೆಗಳನ್ನು ಮಾಡಿತ್ತಾದರೂ ಈ ತಂತ್ರ ಯಶಸ್ವಿಯಾಗಲಿಲ್ಲ. ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಅಫ್ಘಾನಿಸ್ತಾನ, ಆಸ್ಟ್ರೇಲಿಯಾವನ್ನು 168 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಆಸೀಸ್ ಪರ ಮ್ಯಾಕ್ಸ್​ವೆಲ್ ಅಜೇಯ ಅರ್ಧಶತಕ ಸಿಡಿಸಿದರೆ, ಮಾರ್ಷ್​ 45 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ವಾರ್ನರ್ 25 ರನ್ ಬಾರಿಸಿದರೆ, ಸ್ಟೋಯ್ನಿಸ್ ಕೂಡ 25 ರನ್​ಗಳ ಅವಶ್ಯಕ ಇನ್ನಿಂಗ್ಸ್ ಆಡಿದರು. ಇದಾದ ಬಳಿಕ ಬಲಿಷ್ಠ ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ, ಕೆಲ ಸಮಯ ಕಾಂಗರೂಗಳನ್ನು ಚಿಂತೆಗೀಡು ಮಾಡುವುದರಲ್ಲಿ ಯಶಸ್ವಿಯಾಗಿತ್ತು.

ಇದನ್ನೂ ಓದಿ: Virat Kohli: ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಬಾಂಗ್ಲಾ ಆಟಗಾರನಿ​ಗೆ ವಿಶೇಷ ಉಡುಗೊರೆ ನೀಡಿದ ಕೊಹ್ಲಿ

ಅಫ್ಘಾನ್ ಬ್ಯಾಟ್ಸ್‌ಮನ್‌ಗಳ ಅಬ್ಬರ

ರಹಮಾನುಲ್ಲಾ ಗುರ್ಬಾಜ್ ಅವರ ಅಬ್ಬರದ ಆರಂಭಿಕ ಬಲದಿಂದ ಅಫ್ಘಾನಿಸ್ತಾನ ಆರಂಭದಲ್ಲಿ 2 ವಿಕೆಟ್ ಕಳೆದುಕೊಂಡರೂ ಆಸ್ಟ್ರೇಲಿಯಾದ ಮೇಲೆ ಒತ್ತಡವನ್ನು ಕಾಯ್ದುಕೊಂಡಿತು. ನಂತರ ಗುಲ್ಬದಿನ್ ನೈಬ್ ಮತ್ತು ಇಬ್ರಾಹಿಂ ಜದ್ರಾನ್ ಅವರ 59 ರನ್‌ಗಳ ಅತ್ಯುತ್ತಮ ಜೊತೆಯಾಟವು ಅಫ್ಘಾನಿಸ್ತಾನಕ್ಕೆ ಅನಿರೀಕ್ಷಿತ ಗೆಲುವಿನ ಭರವಸೆಯನ್ನು ನೀಡಿತು.

ಆದರೆ ಇಲ್ಲಿ ಆಸ್ಟ್ರೇಲಿಯಾ ಒಂದು ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಬೀಳಿಸುವ ಮೂಲಕ ಪುನರಾಗಮನ ಮಾಡಿತು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ನೇರ ಎಸೆತದಲ್ಲಿ ಗುಲ್ಬದಿನ್ ನೈಬ್ ರನ್ ಔಟ್ ಆದರೆ, ಅದೇ ಓವರ್‌ನಲ್ಲಿ ಸ್ಪಿನ್ನರ್ ಆಡಮ್ ಝಂಪಾ ಮತ್ತೆರಡು ವಿಕೆಟ್ ಪಡೆದರು.

ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಕೊನೆಯ ಓವರ್‌ಗಳಲ್ಲಿ ಮಿಂಚಿನ ಬ್ಯಾಟಿಂಗ್ ಮಾಡಿ ಕೇವಲ 23 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ಕೊಂಡೊಯ್ದರು. ಆದರೆ ಕೊನೆಯ ಓವರ್‌ ಎಸೆದ ಮಾರ್ಕಸ್ ಸ್ಟೋನಿಸ್, ರಶೀದ್ ಅಬ್ಬರದ ನಡುವೆಯೂ ಆಸ್ಟ್ರೇಲಿಯಾದ ಮಾನ ಕಾಪಾಡುವಲ್ಲಿ ಯಶಸ್ವಿಯಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Fri, 4 November 22

ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ