AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

64, 95: ಬಾಂಗ್ಲಾ ಪಡೆಯ ಹೆಡೆಮುರಿ ಕಟ್ಟಿದ ಆಸ್ಟ್ರೇಲಿಯಾ

Australia vs Bangladesh Test: ಆಸ್ಟ್ರೇಲಿಯಾ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆದ್ದು ಬೀಗಿದ್ದ ಬಾಂಗ್ಲಾದೇಶ್ ತಂಡಕ್ಕೆ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಆಸೀಸ್ ವೇಗಿಗಳು ಆಘಾತ ನೀಡಿದ್ದಾರೆ. ಈ ಆಘಾತದ ಮೂಲಕವೇ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಹಾಗೂ 51 ರನ್​ಗಳ ಭರ್ಜರಿ ಜಯ ಸಾಧಿಸಿದೆ.

64, 95: ಬಾಂಗ್ಲಾ ಪಡೆಯ ಹೆಡೆಮುರಿ ಕಟ್ಟಿದ ಆಸ್ಟ್ರೇಲಿಯಾ
AustraliaImage Credit source: GettyImages
ಝಾಹಿರ್ ಯೂಸುಫ್
|

Updated on: Aug 23, 2026 | 11:03 AM

Share

ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಜಯ ಸಾಧಿಸಿದೆ. ಮಕೈನ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡಕ್ಕೆ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಆರಂಭಿಕ ಆಘಾತ ನೀಡಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಸ್ಟಾರ್ಕ್ 5 ವಿಕೆಟ್ ಉರುಳಿಸಿದ್ದರು. ಅಂದರೆ ಕೇವಲ 22 ಎಸೆತಗಳಲ್ಲೇ ಮಿಚೆಲ್ ಬಾಂಗ್ಲಾದೇಶದ ಐವರು ಬ್ಯಾಟರ್​ಗಳಿಗೆ ಪೆವಿಲಿಯನ್ ಹಾದಿ ತೋರಿಸಿದ್ದರು.

ಅತ್ತ ಸ್ಟಾರ್ಕ್​ಗೆ ಉತ್ತಮ ಸಾಥ್ ನೀಡಿದ ನಾಯಕ ಪ್ಯಾಟ್ ಕಮಿನ್ಸ್ 3 ವಿಕೆಟ್ ಉರುಳಿಸಿದರು. ಪರಿಣಾಮ ಬಾಂಗ್ಲಾದೇಶ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 64 ರನ್​ಗಳಿಗೆ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ವಿರುದ್ಧ ಶೊರಿಫುಲ್ ಇಸ್ಲಾಂ ಪ್ರಚಂಡ ಬೌಲಿಂಗ್ ಪ್ರದರ್ಶಿಸಿದ್ದರು. ಕರಾರುವಾಕ್ ದಾಳಿ ಸಂಘಟಿಸಿದ ಶೊರಿಫುಲ್ 15 ಓವರ್​ಗಳಲ್ಲಿ ಕೇವಲ 48 ರನ್ ನೀಡಿ 7 ವಿಕೆಟ್ ಉರುಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡ 210 ರನ್​ಗಳಿಗೆ ಆಲೌಟ್ ಆಯಿತು.

ಸ್ಟಾರ್ಕ್​ ಸ್ಪಾರ್ಕ್​:

ಮೊದಲ ಇನಿಂಗ್ಸ್​ನಲ್ಲಿ ಶಿಸ್ತುಬದ್ಧ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್ ದ್ವಿತೀಯ ಇನಿಂಗ್ಸ್​ನಲ್ಲೂ ಪರಾಕ್ರಮ ಮೆರೆದರು.  10 ಓವರ್​ಗಳನ್ನು ಎಸೆದ ಸ್ಟಾರ್ಕ್​ ಕೇವಲ 39 ರನ್ ನೀಡಿ 4 ವಿಕೆಟ್ ಉರುಳಿಸಿದರು. ಮತ್ತೊಂದೆಡೆ ಪ್ಯಾಟ್ ಕಮಿನ್ಸ್ 3 ವಿಕೆಟ್ ಪಡೆದರೆ, ಸ್ಪಿನ್ನರ್ ನಾಥನ್ ಲಿಯಾನ್ 3 ವಿಕೆಟ್ ಕಬಳಿಸಿದರು. ಪರಿಣಾಮ ಬಾಂಗ್ಲಾದೇಶ್ ತಂಡ ಕೇವಲ 95 ರನ್​ಗಳಿಗೆ ಆಲೌಟ್ ಆಯಿತು.

ಈ ಮೂಲಕ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಹಾಗೂ 51 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲದಲ್ಲಿ ಡ್ರಾಗೊಂಡಿದೆ.

ಬಾಂಗ್ಲಾದೇಶ್ ಪ್ಲೇಯಿಂಗ್ 11:  ಶಾದ್ಮನ್ ಇಸ್ಲಾಂ , ತಂಝಿದ್ ಹಸನ್ ತಮೀಮ್ , ಮೋಮಿನುಲ್ ಹಕ್ , ನಜ್ಮುಲ್ ಹೊಸೇನ್ ಶಾಂತೊ (ನಾಯಕ) , ಮುಷ್ಫಿಕರ್ ರಹೀಮ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಝ್ , ಹಸನ್ ಮಹಮ್ಮದ್ , ತೈಜುಲ್ ಇಸ್ಲಾಂ , ತಸ್ಕಿನ್ ಅಹ್ಮದ್ , ಶೊರಿಫುಲ್ ಇಸ್ಲಾಂ.

ಇದನ್ನೂ ಓದಿ: WTC ಫೈನಲ್​ಗೇರಲು ಪಾಕಿಸ್ತಾನ್ ತಂಡಕ್ಕೆ ಇದೆಯೇ ಅವಕಾಶ? ಇಲ್ಲಿದೆ ಲೆಕ್ಕಾಚಾರ!

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಮ್ಯಾಟ್ ರೆನ್ಶಾ , ಮಾರ್ನಸ್ ಲಾಬುಶೇನ್ , ಸ್ಟೀವ್ ಸ್ಮಿತ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಬ್ಯೂ ವೆಬ್‌ಸ್ಟರ್ , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹೇಝಲ್‌ವುಡ್.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ