
ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಜಯ ಸಾಧಿಸಿದೆ. ಮಕೈನ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡಕ್ಕೆ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಆರಂಭಿಕ ಆಘಾತ ನೀಡಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಸ್ಟಾರ್ಕ್ 5 ವಿಕೆಟ್ ಉರುಳಿಸಿದ್ದರು. ಅಂದರೆ ಕೇವಲ 22 ಎಸೆತಗಳಲ್ಲೇ ಮಿಚೆಲ್ ಬಾಂಗ್ಲಾದೇಶದ ಐವರು ಬ್ಯಾಟರ್ಗಳಿಗೆ ಪೆವಿಲಿಯನ್ ಹಾದಿ ತೋರಿಸಿದ್ದರು.
ಅತ್ತ ಸ್ಟಾರ್ಕ್ಗೆ ಉತ್ತಮ ಸಾಥ್ ನೀಡಿದ ನಾಯಕ ಪ್ಯಾಟ್ ಕಮಿನ್ಸ್ 3 ವಿಕೆಟ್ ಉರುಳಿಸಿದರು. ಪರಿಣಾಮ ಬಾಂಗ್ಲಾದೇಶ್ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 64 ರನ್ಗಳಿಗೆ ಆಲೌಟ್ ಆಯಿತು.
ಮೊದಲ ಇನಿಂಗ್ಸ್ನಲ್ಲಿ ಶಿಸ್ತುಬದ್ಧ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್ ದ್ವಿತೀಯ ಇನಿಂಗ್ಸ್ನಲ್ಲೂ ಪರಾಕ್ರಮ ಮೆರೆದರು. 10 ಓವರ್ಗಳನ್ನು ಎಸೆದ ಸ್ಟಾರ್ಕ್ ಕೇವಲ 39 ರನ್ ನೀಡಿ 4 ವಿಕೆಟ್ ಉರುಳಿಸಿದರು. ಮತ್ತೊಂದೆಡೆ ಪ್ಯಾಟ್ ಕಮಿನ್ಸ್ 3 ವಿಕೆಟ್ ಪಡೆದರೆ, ಸ್ಪಿನ್ನರ್ ನಾಥನ್ ಲಿಯಾನ್ 3 ವಿಕೆಟ್ ಕಬಳಿಸಿದರು. ಪರಿಣಾಮ ಬಾಂಗ್ಲಾದೇಶ್ ತಂಡ ಕೇವಲ 95 ರನ್ಗಳಿಗೆ ಆಲೌಟ್ ಆಯಿತು.
ಈ ಮೂಲಕ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಹಾಗೂ 51 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲದಲ್ಲಿ ಡ್ರಾಗೊಂಡಿದೆ.
ಬಾಂಗ್ಲಾದೇಶ್ ಪ್ಲೇಯಿಂಗ್ 11: ಶಾದ್ಮನ್ ಇಸ್ಲಾಂ , ತಂಝಿದ್ ಹಸನ್ ತಮೀಮ್ , ಮೋಮಿನುಲ್ ಹಕ್ , ನಜ್ಮುಲ್ ಹೊಸೇನ್ ಶಾಂತೊ (ನಾಯಕ) , ಮುಷ್ಫಿಕರ್ ರಹೀಮ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಝ್ , ಹಸನ್ ಮಹಮ್ಮದ್ , ತೈಜುಲ್ ಇಸ್ಲಾಂ , ತಸ್ಕಿನ್ ಅಹ್ಮದ್ , ಶೊರಿಫುಲ್ ಇಸ್ಲಾಂ.
ಇದನ್ನೂ ಓದಿ: WTC ಫೈನಲ್ಗೇರಲು ಪಾಕಿಸ್ತಾನ್ ತಂಡಕ್ಕೆ ಇದೆಯೇ ಅವಕಾಶ? ಇಲ್ಲಿದೆ ಲೆಕ್ಕಾಚಾರ!
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಮ್ಯಾಟ್ ರೆನ್ಶಾ , ಮಾರ್ನಸ್ ಲಾಬುಶೇನ್ , ಸ್ಟೀವ್ ಸ್ಮಿತ್ ,
ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಬ್ಯೂ ವೆಬ್‌ಸ್ಟರ್ , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ ,
ನಾಥನ್ ಲಿಯಾನ್ , ಜೋಶ್ ಹೇಝಲ್‌ವುಡ್.