AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ನೀಡಿದ ಆಘಾತ: ಎರಡಂಕಿ ಮೊತ್ತಕ್ಕೆ ಬಾಂಗ್ಲಾದೇಶ್ ಆಲೌಟ್!

Australia vs Bangladesh, 2nd Test: ಆಸ್ಟ್ರೇಲಿಯಾ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆದ್ದು ಬೀಗಿದ್ದ ಬಾಂಗ್ಲಾದೇಶ್ ತಂಡಕ್ಕೆ ದ್ವಿತೀಯ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲೇ ಆಸೀಸ್ ವೇಗಿಗಳು ಆಘಾತ ನೀಡಿದ್ದಾರೆ. ಅದು ಸಹ ಬಾಂಗ್ಲಾ ಪಡೆಯನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡುವ ಮೂಲಕ ಎಂಬುದು ವಿಶೇಷ.

ಆಸ್ಟ್ರೇಲಿಯಾ ನೀಡಿದ ಆಘಾತ: ಎರಡಂಕಿ ಮೊತ್ತಕ್ಕೆ ಬಾಂಗ್ಲಾದೇಶ್ ಆಲೌಟ್!
Aus Vs BanImage Credit source: GettyImages
ಝಾಹಿರ್ ಯೂಸುಫ್
|

Updated on: Aug 22, 2026 | 9:05 AM

Share

ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡ ಕೇವಲ 64 ರನ್​ಗಳಿಗೆ ಆಲೌಟ್ ಆಗಿದೆ. ಮಕೈನ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಮಿಚೆಲ್ ಸ್ಟಾರ್ಕ್​ ಮೊದಲ ಎಸೆತದಲ್ಲೇ ಆಘಾತ ನೀಡಿದ್ದರು. ಆರಂಭಿಕ ದಾಂಡಿಗ ಶಾದ್ಮನ್ ಇಸ್ಲಾಂ (0) ವಿಕೆಟ್ ಕಬಳಿಸಿ ಶುಭಾರಂಭ ಮಾಡಿದ ಸ್ಟಾರ್ಕ್​ , ಮೂರನೇ ಓವರ್​ನ ಮೊದಲ ಎಸೆತದಲ್ಲಿ ತಂಝಿದ್ ಹಸನ್ (0) ವಿಕೆಟ್ ಕಬಳಿಸಿದರು.

ಇದರ ಬೆನ್ನಲ್ಲೇ, ಅಂದರೆ 2ನೇ ಎಸೆತದಲ್ಲಿ ನಾಯಕ ನಜ್ಮುಲ್ ಹೊಸೇನ್ ಶಾಂತೊ (0) ಗೆ ಪೆವಿಲಿಯನ್ ಹಾದಿ ತೋರಿಸಿದರು. ಐದನೇ ಓವರ್​ನಲ್ಲಿ ಮೋಮಿನುಲ್ ಹಕ್ (0) ವಿಕೆಟ್ ಕಬಳಿಸಿದ ಸ್ಟಾರ್ಕ್ ಆ ಬಳಿಕ ಲಿಟ್ಟನ್ ದಾಸ್​ಗೆ (0) ಅವರನ್ನು ಎಲ್​ಬಿಡಬ್ಲ್ಯೂ ಮಾಡಿದರು. ಈ ಮೂಲಕ ಕೇವಲ 22 ಎಸೆತಗಳಲ್ಲಿ 5 ವಿಕೆಟ್ ಸಾಧನೆ ಮಾಡಿದರು.

ಇದರ ನಡುವೆ ಪ್ಯಾಟ್ ಕಮಿನ್ಸ್ ಮುಷ್ಫಿಕರ್ ರಹೀಮ್​ನ (5) ಕ್ಲೀನ್ ಬೌಲ್ಡ್ ಮಾಡಿದರು. ಮತ್ತೊಂದೆಡೆ ಜೋಶ್ ಹೇಝಲ್​ವುಡ್​ ಹಸನ್ ಮಹಮೂದ್ (10) ವಿಕೆಟ್ ಪಡೆದರು. ಇನ್ನು ಮೆಹದಿ ಹಸನ್ ಮಿರಾಝ್​ಗೆ (11) ಪೆವಿಲಿಯನ್ ಹಾದಿ ತೋರಿಸುವಲ್ಲಿ ಕಮಿನ್ಸ್ ಯಶಸ್ವಿಯಾದರು. ಅಂತಿಮವಾಗಿ ಬಾಂಗ್ಲಾದೇಶ್ ತಂಡ ಕೇವಲ 64  ರನ್​ಗಳಿಸಿ ಸರ್ವಪತನ ಕಂಡಿತು.

ಆಸ್ಟ್ರೇಲಿಯಾ ಪರ ಮಿಂಚಿನ ದಾಳಿ ಸಂಘಟಿಸಿದ ಮಿಚೆಲ್ ಸ್ಟಾರ್ಕ್​ ಕೇವಲ 12 ರನ್ ನೀಡಿ 6 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್ 3 ವಿಕೆಟ್ ಉರುಳಿಸಿ ಮಿಂಚಿದರು.

ಬಾಂಗ್ಲಾದೇಶ್ ಪ್ಲೇಯಿಂಗ್ 11:  ಶಾದ್ಮನ್ ಇಸ್ಲಾಂ , ತಂಝಿದ್ ಹಸನ್ ತಮೀಮ್ , ಮೋಮಿನುಲ್ ಹಕ್ , ನಜ್ಮುಲ್ ಹೊಸೇನ್ ಶಾಂತೊ (ನಾಯಕ) , ಮುಷ್ಫಿಕರ್ ರಹೀಮ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಝ್ , ಹಸನ್ ಮಹಮ್ಮದ್ , ತೈಜುಲ್ ಇಸ್ಲಾಂ , ತಸ್ಕಿನ್ ಅಹ್ಮದ್ , ಶೊರಿಫುಲ್ ಇಸ್ಲಾಂ.

ಇದನ್ನೂ ಓದಿ: WTC ಫೈನಲ್​ಗೇರಲು ಪಾಕಿಸ್ತಾನ್ ತಂಡಕ್ಕೆ ಇದೆಯೇ ಅವಕಾಶ? ಇಲ್ಲಿದೆ ಲೆಕ್ಕಾಚಾರ!

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಮ್ಯಾಟ್ ರೆನ್ಶಾ , ಮಾರ್ನಸ್ ಲಾಬುಶೇನ್ , ಸ್ಟೀವ್ ಸ್ಮಿತ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಬ್ಯೂ ವೆಬ್‌ಸ್ಟರ್ , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಜೋಶ್ ಹೇಝಲ್‌ವುಡ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್