AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಆಸ್ಟ್ರೇಲಿಯಾ ಟೆಸ್ಟ್: ಯಾವಾಗ ಶುರು, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

Australia vs India: ಆಸ್ಟ್ರೇಲಿಯಾ vs ಭಾರತ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಭಾರತ vs ಆಸ್ಟ್ರೇಲಿಯಾ ಟೆಸ್ಟ್: ಯಾವಾಗ ಶುರು, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
AUS vs IND
TV9 Web
| Edited By: |

Updated on:Nov 21, 2024 | 11:07 AM

Share

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ನಾಳೆಯಿಂದ (ನ.22) ಆರಂಭವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್​ನ ಒಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಡಿ ಸ್ಪೋರ್ಟ್​ ಚಾನೆಲ್​ನಲ್ಲೂ ಲೈವ್ ಇರಲಿದೆ.

ಯಾವ ಆ್ಯಪ್​ನಲ್ಲಿ ವೀಕ್ಷಿಸಬಹುದು?

ಈ ಸರಣಿಯ ಪಂದ್ಯಗಳನ್ನು ಡಿಸ್ನಿ ಹಾಟ್​​ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ನಲ್ಲೂ ವೀಕ್ಷಿಸಬಹುದು.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 7.50 ರಿಂದ ಶುರುವಾಗಲಿದೆ. ಈ ಪಂದ್ಯದ ಸೆಷನ್ ಟೈಮಿಂಗ್ಸ್​ ಈ ಕೆಳಗಿನಂತಿದೆ.

  • 7.50 AM ರಿಂದ 9.50 AM ರವರೆಗೆ ಮೊದಲ ಸೆಷನ್
  • 10.30 AM ರಿಂದ 12.30 PM ರವರೆಗೆ ದ್ವಿತೀಯ ಸೆಷನ್
  • 12.50 PM ರಿಂದ 2.50 PM ರವರೆಗೆ ತೃತೀಯ ಸೆಷನ್

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಭಾರತ vs ಆಸ್ಟ್ರೇಲಿಯಾ, 1ನೇ ಟೆಸ್ಟ್: ನವೆಂಬರ್ 22-26, ಪರ್ತ್ (7:50 AM IST)
  2. ಭಾರತ vs ಆಸ್ಟ್ರೇಲಿಯಾ, 2ನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (9:30 AM IST)
  3. ಭಾರತ vs ಆಸ್ಟ್ರೇಲಿಯಾ, 3ನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್ (5:50 AM IST)
  4. ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್ (5:00 AM IST)
  5. ಭಾರತ vs ಆಸ್ಟ್ರೇಲಿಯಾ, 5ನೇ ಟೆಸ್ಟ್: ಜನವರಿ 2-7, ಸಿಡ್ನಿ (5:00 AM IST)

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವ್​ದತ್ ಪಡಿಕ್ಕಲ್.

ಇದನ್ನೂ ಓದಿ: IPL 2025: ರಿಷಭ್ ಪಂತ್​ಗೆ 30 ಕೋಟಿ ರೂ: ಸುರೇಶ್ ರೈನಾ

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

Published On - 11:06 am, Thu, 21 November 24

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ