ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ನಾಳೆಯಿಂದ (ನ.22) ಆರಂಭವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್ನ ಒಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.
ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಡಿ ಸ್ಪೋರ್ಟ್ ಚಾನೆಲ್ನಲ್ಲೂ ಲೈವ್ ಇರಲಿದೆ.
ಈ ಸರಣಿಯ ಪಂದ್ಯಗಳನ್ನು ಡಿಸ್ನಿ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ವೀಕ್ಷಿಸಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 7.50 ರಿಂದ ಶುರುವಾಗಲಿದೆ. ಈ ಪಂದ್ಯದ ಸೆಷನ್ ಟೈಮಿಂಗ್ಸ್ ಈ ಕೆಳಗಿನಂತಿದೆ.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
Published On - 11:06 am, Thu, 21 November 24