2023ರ ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ಇಂದು ಅಂದರೆ, ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ (Australia vs Netherlands) ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲ್ಲುವ ಫೆವರೇಟ್ ಎನಿಸಿದರೂ, ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ನೆದರ್ಲೆಂಡ್ಸ್ ಕೂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಆದ್ದರಿಂದ ಈ ಪಂದ್ಯದಲ್ಲಿ ಯಾವುದೇ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ ಸೆಮಿಫೈನಲ್ ಹಾದಿ ಸುಲಭವಾಗಲಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸೋತ ನಂತರ, ಆಸ್ಟ್ರೇಲಿಯಾ ಅದ್ಭುತ ಪುನರಾಗಮನವನ್ನು ಮಾಡಿದೆ.
ಆಸ್ಟ್ರೇಲಿಯಾ ತಂಡ ಪ್ರಸ್ತುತ ನಾಲ್ಕು ಪಾಯಿಂಟ್‌ಗಳೊಂದಿಗೆ ಪಾಯಿಂಟ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಅದರ ನಿವ್ವಳ ರನ್ ರೇಟ್ (NRR) -0.193 ಆಗಿದೆ. ಸದ್ಯ ಇಂಜುರಿಯಿಂದ ಚೇತರಿಸಿಕೊಂಡಿರುವ ಟ್ರಾವಿಸ್ ಹೆಡ್ ತಂಡಕ್ಕೆ ಮರಳುವುದು ಸನ್ನಿಹಿತವಾಗಿದೆ. ಹೀಗಾಗಿ ಹೆಡ್ ಅವರ ಸೇರ್ಪಡೆಯು ಮಿಚೆಲ್ ಮಾರ್ಷ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಗೆ ಕಾರಣವಾಗಬಹುದು. ಹೆಡ್ ಅನುಪಸ್ಥಿತಿಯಲ್ಲಿ ಪ್ರಸ್ತುತ ಡೇವಿಡ್ ವಾರ್ನರ್ ಅವರೊಂದಿಗೆ ಮಾರ್ಷ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ.
AUS vs SA: ವಿಶ್ವಕಪ್ ಇತಿಹಾಸದಲ್ಲಿ ಅತಿದೊಡ್ಡ ಸೋಲುಂಡ ಆಸ್ಟ್ರೇಲಿಯಾ!
ಮತ್ತೊಂದೆಡೆ, ಶ್ರೀಲಂಕಾದ ವಿರುದ್ಧ ಐದು ವಿಕೆಟ್‌ಗಳ ಸೋಲನುಭವಿಸಿರುವ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ತಂಡವು ಈಗಾಗಲೇ ಧರ್ಮಶಾಲಾದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಪಂದ್ಯಾವಳಿಯ ರೋಮಾಂಚಕತೆ ಹೆಚ್ಚಿಸಿದೆ. ಹೀಗಾಗಿ ಬುಧವಾರದಂದು ಹೊಸದಿಲ್ಲಿಯಲ್ಲಿ ಇದೇ ರೀತಿಯ ಪ್ರದರ್ಶನವನ್ನು ನೀಡಲು ಡಚ್ಚರು ಪ್ರಯತ್ನಿಸಲಿದ್ದಾರೆ.
ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಈ ಮೈದಾನ ಬ್ಯಾಟಿಂಗ್‌ಗೆ ಸೂಕ್ತವಾಗಿದೆ. ಆದಾಗ್ಯೂ, ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಸಹಾಯ ಪಡೆಯಬಹುದು. ಆದರೆ ಇಬ್ಬನಿಯ ನಂತರ ಬೌಲಿಂಗ್ ಕಷ್ಟವಾಗುತ್ತದೆ. ರನ್ ಚೇಸ್ ಮಾಡುವ ತಂಡ ಆರಾಮವಾಗಿ ಗೆಲುವಿನ ಗುರಿ ತಲುಪಬಹುದು. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ಹೆಚ್ಚಿನ ಆದ್ಯತೆ ನೀಡಲಿದ್ದಾರೆ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಒ’ಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ ಮತ್ತು ವಿಕೆಟ್ ಕೀಪರ್), ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ