Boxing Day Test: 16 ವರ್ಷಗಳ ವನವಾಸ ಅಂತ್ಯ; ಸರಣಿಯೊಂದಿಗೆ ಬಾಕ್ಸಿಂಗ್ ಡೇ ಟೆಸ್ಟ್​ ಗೆದ್ದ ಆಸ್ಟ್ರೇಲಿಯಾ..!

AUS vs SA: ಮೆಲ್ಬೋರ್ನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ.

Boxing Day Test: 16 ವರ್ಷಗಳ ವನವಾಸ ಅಂತ್ಯ; ಸರಣಿಯೊಂದಿಗೆ ಬಾಕ್ಸಿಂಗ್ ಡೇ ಟೆಸ್ಟ್​ ಗೆದ್ದ ಆಸ್ಟ್ರೇಲಿಯಾ..!
aus vs sa
Follow us
TV9 Web
| Updated By: Digi Tech Desk

Updated on:Dec 29, 2022 | 12:02 PM

ಮೆಲ್ಬೋರ್ನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ (Boxing Day Test) ಆಸ್ಟ್ರೇಲಿಯಾ (Australia beat South Africa) ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಅಂದರೆ, ಸರಳವಾಗಿ ಹೇಳುವುದಾದರೆ, ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 16 ವರ್ಷಗಳ ಸೋಲಿನ ಸರಣಿಯನ್ನು ಕಾಂಗರೂಗಳು ಕೊನೆಗೊಳಿಸಿದ್ದಾರೆ. ವಾಸ್ತವವಾಗಿ, ಆಸ್ಟ್ರೇಲಿಯಾ 16 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಆ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಹಿಡಿತ ಸಾಧಿಸುವಲ್ಲಿ ಹರಿಣಗಳು ಯಶಸ್ವಿಯಾಗಿದ್ದರು.

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ 4 ದಿನವೂ ನಡೆಯಲಿಲ್ಲ. ನಾಲ್ಕನೇ ದಿನದ ಎರಡನೇ ಸೆಷನ್‌ನಲ್ಲಿಯೇ ಆಟ ಇತ್ಯರ್ಥವಾಯಿತು. ದಕ್ಷಿಣ ಆಫ್ರಿಕಾವನ್ನು ಇನ್ನಿಂಗ್ಸ್ ಮತ್ತು 182 ರನ್‌ಗಳಿಂದ ಸೋಲಿಸಿದ ಕಾಂಗರೂಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ನಾಲ್ಕನೇ ದಿನ ಆಟ ಆರಂಭವಾದಾಗ ದಕ್ಷಿಣ ಆಫ್ರಿಕಾ ಕೈಯಲ್ಲಿ 9 ವಿಕೆಟ್‌ಗಳಿದ್ದವು. ಆದರೆ, ಎರಡನೇ ಸೆಷನ್ ಮುಗಿಯುವ ಮುನ್ನವೇ ತಂಡದ 9 ವಿಕೆಟ್‌ಗಳು ಉರುಳಿದವು. ಹೀಗಾಗಿ ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 204 ರನ್‌ಗಳಿಗೆ ಕುಸಿಯಿತು. ಇದಕ್ಕೂ ಮುನ್ನ ಆಸ್ಟ್ರೇಲಿಯ ಮೊದಲ ಟೆಸ್ಟ್ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು.

ICC Test rankings: ಟೆಸ್ಟ್ ರ‍್ಯಾಂಕಿಂಗ್​ನಲ್ಲಿ ಅಶ್ವಿನ್​- ಅಯ್ಯರ್​ಗೆ ಭರ್ಜರಿ ಮುಂಬಡ್ತಿ; ಜಾರಿದ ಪೂಜಾರ- ಕೊಹ್ಲಿ!

ಮೊದಲ ಇನ್ನಿಂಗ್ಸ್​ನಲ್ಲೇ ಆಸ್ಟ್ರೇಲಿಯಾದ ಪಾರುಪತ್ಯ

ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 189 ರನ್‌ಗಳಿಗೆ ಆಲೌಟ್​ ಆಯಿತು. ಈ ಅಲ್ಪ ಸ್ಕೋರ್​ ಮೂಲಕ ಸತತ 7ನೇ ಬಾರಿಗೆ ದಕ್ಷಿಣ ಆಫ್ರಿಕಾ ತನ್ನ ಟೆಸ್ಟ್ ಇನ್ನಿಂಗ್ಸ್‌ನಲ್ಲಿ 200 ರನ್​​ಗಳಿಗಿಂತಲೂ ಕಡಿಮೆ ಸ್ಕೋರ್​ಗೆ ಆಲೌಟ್​ ಆದ ಬೇಡದ ದಾಖಲೆ ಬರೆಯಿತು. ದಕ್ಷಿಣ ಆಫ್ರಿಕಾವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 200 ರನ್‌ಗಳಿಗೆ ಆಲೌಟ್ ಮಾಡಿದ ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್ ಅನ್ನು 575 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತು.

ಆಸ್ಟ್ರೇಲಿಯಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ 100ನೇ ಟೆಸ್ಟ್ ಆಡಿದ ಡೇವಿಡ್ ವಾರ್ನರ್ ಅದ್ಭುತ ದ್ವಿಶತಕ ದಾಖಲಿಸಿದರು. ಅವರನ್ನು ಹೊರತುಪಡಿಸಿ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಲೆಕ್ಸ್ ಕ್ಯಾರಿ 103 ರನ್‌ಗಳ ಇನ್ನಿಂಗ್ಸ್ ಆಡಿದರು. MCG ಯಲ್ಲಿ ಆಡಿದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಶತಕ ಗಳಿಸಿದ ಮೊದಲ ಆಸ್ಟ್ರೇಲಿಯಾದ ವಿಕೆಟ್-ಕೀಪರ್ ಆಗುವುದರ ಜೊತೆಗೆ, ಕ್ಯಾರಿ 2013 ರ ಬಳಿಕ ಶತಕ ಗಳಿಸಿದ ಮೊದಲ ಆಸ್ಟ್ರೇಲಿಯಾದ ವಿಕೆಟ್-ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಸರಣಿ ಸೋತ ದಕ್ಷಿಣ ಆಫ್ರಿಕಾ

ಆಸ್ಟ್ರೇಲಿಯನ್ ಆಟಗಾರರು ಮಾಡಿದ ಈ ದಾಖಲೆಯಿಂದಾಗಿ ದಕ್ಷಿಣ ಆಫ್ರಿಕಾ ತಂಡ ಒತ್ತಡಕ್ಕೆ ಸಿಲುಕಿತು. ಹೀಗಾಗಿ ಇನ್ನಿಂಗ್ಸ್​ ಸೋಲನ್ನು ಆಫ್ರಿಕಾ ಎದುರಿಸಿದರೆ, ಇತ್ತ ಕಾಂಗರೂಗಳು 16 ವರ್ಷಗಳ ವನವಾಸವನ್ನು ಅಂತ್ಯಗೊಳಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಗಳಿಸಿದ 396 ರನ್‌ಗಳ ಮುನ್ನಡೆಯನ್ನು ಹಿಂದಿಕ್ಕದ ಹರಿಣಗಳು ತಮ್ಮ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 204 ರನ್‌ಗಳಿಗೆ ಆಲೌಟ್ ಆದರು.

ಮೆಲ್ಬೋರ್ನ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿರುವ ಆಸ್ಟ್ರೇಲಿಯಾದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಅವಕಾಶ ಹೊಂದಿದೆ. ಅಷ್ಟೇ ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ಗೆ ಟಿಕೆಟ್​ ಕೂಡ ಖಚಿತವಾದಂತ್ತಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Thu, 29 December 22

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ