ಚೋಕರ್ಸ್​ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡ ಆಪ್ರಿಕಾ; ಭಾರತ- ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್..!

AUS vs SA, ICC World Cup 2023: ಟೀಮ್ ಇಂಡಿಯಾ ಐಸಿಸಿ ವಿಶ್ವಕಪ್ 2023 ರ ಸೆಮಿಫೈನಲ್ ತಲುಪಿದ ನಂತರ, ಫೈನಲ್‌ನಲ್ಲಿ ಭಾರತ ಯಾರನ್ನು ಎದುರಿಸಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಫೈನಲ್​ನಲ್ಲಿ ಭಾರತವನ್ನು ಎದುರಿಸಲು ನಡೆದ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಆಸ್ಟ್ರೇಲಿಯಾ ತಂಡ ಮಣಿಸಿದೆ.

ಚೋಕರ್ಸ್​ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡ ಆಪ್ರಿಕಾ; ಭಾರತ- ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್..!
ಆಫ್ರಿಕಾ ತಂಡ
Follow us
ಪೃಥ್ವಿಶಂಕರ
|

Updated on:Nov 16, 2023 | 10:33 PM

ಟೀಮ್ ಇಂಡಿಯಾ ಐಸಿಸಿ ವಿಶ್ವಕಪ್ 2023 ರ (ICC World Cup 2023) ಸೆಮಿಫೈನಲ್ ತಲುಪಿದ ನಂತರ, ಫೈನಲ್‌ನಲ್ಲಿ ಭಾರತ ಯಾರನ್ನು ಎದುರಿಸಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಫೈನಲ್​ನಲ್ಲಿ ಭಾರತವನ್ನು ಎದುರಿಸಲು ನಡೆದ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಆಸ್ಟ್ರೇಲಿಯಾ ತಂಡ (South Africa vs Australia) 3 ವಿಕೆಟ್​ಗಳಿಂದ ಮಣಿಸಿದೆ. ಈ ಸೋಲಿನೊಂದಿಗೆ ಸೌತ್ ಆಫ್ರಿಕಾ ತಂಡ ನಾಕೌಟ್ ಪಂದ್ಯದಲ್ಲಿ ಮತ್ತೊಮ್ಮೆ ಮುಗ್ಗರಿಸಿದ್ದು, ಚೋಕರ್ಸ್​ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಆಸೀಸ್ ದಾಳಿಗೆ ತತ್ತರಿಸಿ ಕೇವಲ 212 ರನ್​ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಡೇವಿಡ್ ಮಿಲ್ಲರ್ (David Miller) ಶತಕ ಸಿಡಿಸಿ ಮಿಂಚಿದರು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 7 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಭಾರತ- ಆಸೀಸ್ ನಡುವೆ ಫೈನಲ್ ಫೈಟ್

ಈ ಗೆಲುವಿನೊಂದಿಗೆ ಆಸ್ಟ್ರೇಲಿಯ 8ನೇ ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಇದೀಗ 2023ರ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಎದುರಿಸಲಿದೆ. ಇದರೊಂದಿಗೆ 20 ವರ್ಷಗಳ ಬಳಿಕ ಮತ್ತೊಮ್ಮೆ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. 2003ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆದಿತ್ತು. ಆಗ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 125 ರನ್​ಗಳ ಜಯ ಸಾಧಿಸಿತ್ತು.ಹೀಗಾಗಿ ಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ 20 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಅವಕಾಶ ಟೀಂ ಇಂಡಿಯಾಕ್ಕಿದೆ.

ವಿಶ್ವಕಪ್ ಫೈನಲ್​ಗೇರಿದ ಭಾರತ; ಲಕ್ಷ ದಾಟಿದ ಹೋಟೆಲ್ ದರ! ವಿಮಾನ ಪ್ರಯಾಣವೂ ದುಬಾರಿ

ಪಂದ್ಯ ಹೀಗಿತ್ತು…

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾದ ಅಗ್ರ ನಾಲ್ವರು ಬ್ಯಾಟ್ಸ್‌ಮನ್‌ಗಳಾದ ಕ್ವಿಂಟನ್ ಡಿ ಕಾಕ್ (03), ಟೆಂಬಾ ಬಾವುಮಾ (0), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ (06) ಮತ್ತು ಏಡೆನ್ ಮಾರ್ಕ್ರಾಮ್ (10) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಮಿಚೆಲ್ ಸ್ಟಾರ್ಕ್ (10-1-34-3) ಮತ್ತು ಜೋಶ್ ಹ್ಯಾಜಲ್‌ವುಡ್ (8-3-12-2) ಪರಿಸ್ಥಿತಿಯ ಸಂಪೂರ್ಣ ಲಾಭವನ್ನು ಪಡೆದು ಆರಂಭಿಕ ವಿಕೆಟ್‌ಗಳನ್ನು ಪಡೆದರು. ಈ ವೇಳೆ ದಕ್ಷಿಣ ಆಫ್ರಿಕಾ ಸ್ಕೋರ್ 14 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗೆ 44 ರನ್‌ಗಳಾಗಿದ್ದಾಗ ಮಳೆ ಅಡ್ಡಿಪಡಿಸಿದ್ದರಿಂದ 40 ನಿಮಿಷಗಳ ಪಂದ್ಯವನ್ನು ನಿಲ್ಲಿಸಲಾಯಿತು.

ಮಿಲ್ಲರ್ ಏಕಾಂಗಿ ಹೋರಾಟ

ಆದರೆ ಇದಾದ ಬಳಿಕ ಡೇವಿಡ್ ಮಿಲ್ಲರ್ 116 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಐದು ಸಿಕ್ಸರ್‌ಗಳೊಂದಿಗೆ ಆರನೇ ಏಕದಿನ ಶತಕ ದಾಖಲಿಸಿದರು. ಇದು ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮೊದಲ ಶತಕವಾಗಿದೆ. ಮಿಲ್ಲರ್ ಟರ್ನಿಂಗ್ ಪಿಚ್‌ನಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸದೆ ಸರಾಗವಾಗಿ ರನ್ ಕಲೆಹಾಕಿದರು. ಇದರಿಂದಾಗಿ ಆಸ್ಟ್ರೇಲಿಯಾದ ಬೌಲರ್ ತಮ್ಮ ಏಳು ಓವರ್‌ಗಳಲ್ಲಿ 55 ರನ್‌ಗಳನ್ನು ನೀಡಿದರು. ಈ ವೇಳೆ ಮಿಲ್ಲರ್ ಸ್ಕ್ವೇರ್ ಲೆಗ್​ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು.

ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದ ಹೆಡ್

ಐದನೇ ವಿಕೆಟ್‌ಗೆ ಹೆನ್ರಿಚ್ ಕ್ಲಾಸೆನ್ (47 ರನ್) ಜೊತೆ ಮಿಲ್ಲರ್ 95 ರನ್ ಜೊತೆಯಾಟ ಹಂಚಿಕೊಳ್ಳುವ ಮೂಲಕ ದಕ್ಷಿಣ ಆಫ್ರಿಕಾ ಇನ್ನಿಂಗ್ಸ್​ಗೆ ಜೀವ ತುಂಬಿದರು. ಆದರೆ ನಂತರ ತಾತ್ಕಾಲಿಕ ಆಫ್ ಸ್ಪಿನ್ನರ್ ಟ್ರಾವಿಸ್ ಹೇಡ್ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ದಕ್ಷಿಣ ಆಫ್ರಿಕಾದ ಭರವಸೆಗೆ ಹೊಡೆತ ನೀಡಿದರು. ಕ್ಲಾಸೆನ್ ನಂತರ, ಜೆರಾಲ್ಡ್ ಕೊಯೆಟ್ಜಿ (19) ಮಿಲ್ಲರ್‌ಗೆ ಬೆಂಬಲ ನೀಡಿದರು ಮತ್ತು ಇಬ್ಬರೂ ಏಳನೇ ವಿಕೆಟ್‌ಗೆ 53 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಕಮ್ಮಿನ್ಸ್ ಎಸೆತದಲ್ಲಿ ಕೋಟ್ಜಿ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ ಗೆ ಕ್ಯಾಚಿತ್ತು ನಿರ್ಗಮಿಸಿದರು. ರೀಪ್ಲೇಗಳಲ್ಲಿ ಚೆಂಡು ಅವರ ಮೊಣಕೈಗೆ ಬಡಿದಿದೆ ಎಂದು ತೋರಿಸಿದರೂ ಅವರು ವಿಮರ್ಶೆಯನ್ನು ತೆಗೆದುಕೊಳ್ಳಲಿಲ್ಲ. ಬಳಿಕ 48ನೇ ಓವರ್​ನಲ್ಲಿ ಮಿಲ್ಲರ್ ಕೂಡ ಔಟಾದರು.

ಹೆಡ್ ಆಲ್​ರೌಂಡರ್ ಆಟ

213 ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆಯಿತು. ವಾರ್ನರ್ ಮತ್ತು ಟ್ರಾವಿಸ್ ಹೆಡ್ ಮೊದಲ ವಿಕೆಟ್‌ಗೆ 60 ರನ್ ಸೇರಿಸಿದರು. ಬಳಿಕ  ವಾರ್ನರ್ 29 ರನ್ ಮತ್ತು ಹೆಡ್ 62 ರನ್ ಗಳಿಸಿ ಔಟಾದರು. ಹೆಡ್ ಆಸ್ಟ್ರೇಲಿಯಾ ಪರ ಅತಿ ಹೆಚ್ಚು ರನ್ ಗಳಿಸಿದರೆ, ನಾಯಕ ಕಮಿನ್ಸ್ ಅಜೇಯ 14 ರನ್ ಮತ್ತು ಸ್ಟಾರ್ಕ್ 16 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Thu, 16 November 23

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್