David Warner: ಶತಕದ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಡೇವಿಡ್ ವಾರ್ನರ್
Australia vs South Africa: 2ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯಾ ತಂಡವು 386 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಟ್ರಾವಿಡ್ ಹೆಡ್ (48) ಹಾಗೂ ಅಲೆಕ್ಸ್ ಕ್ಯಾರಿ (9) ಬ್ಯಾಟ್ ಬೀಸುತ್ತಿದ್ದಾರೆ.
Australia vs South Africa, 2nd Test: ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಅಬ್ಬರಿಸಿದ್ದಾರೆ. ಈ ಮೂಲಕ 100ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ 10ನೇ ಆಟಗಾರ ಹಾಗೂ ಶತಕದ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ವಿಶ್ವದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ಇಂಗ್ಲೆಂಡ್ನ ಜೋ ರೂಟ್ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಡಬಲ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆ ಡೇವಿಡ್ ವಾರ್ನರ್ ಪಾಲಾಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ ಕ್ಯಾಮರೋನ್ ಗ್ರೀನ್ ಅವರ ಮಾರಕ ದಾಳಿಗೆ ತತ್ತರಿಸಿತು. ಪರಿಣಾಮ ದಕ್ಷಿಣ ಆಫ್ರಿಕಾ ತಂಡವು ಕೇವಲ 189 ರನ್ಗಳಿಗೆ ಮೊದಲ ಇನಿಂಗ್ಸ್ ಅಂತ್ಯಗೊಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸೀಸ್ ಪರ ಡೇವಿಡ್ ವಾರ್ನರ್ ಅತ್ಯುತ್ತಮವಾಗಿ ಇನಿಂಗ್ಸ್ ಆರಂಭಿಸಿದರು.
ಆರಂಭದಿಂದಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ್ದ ವಾರ್ನರ್ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ಮೂರು ವರ್ಷದ ಶತಕದ ಬರವನ್ನು ನೀಗಿಸಿದರು. ಆದರೆ ಮತ್ತೊಂದೆಡೆ ಉಸ್ಮಾನ್ ಖ್ವಾಜಾ (1) ಹಾಗೂ ಮಾರ್ನಸ್ ಲಾಬುಶೇನ್ (14) ಬೇಗನೆ ನಿರ್ಗಮಿಸಿ ನಿರಾಸೆ ಮೂಡಿಸಿದರು. ಇದಾಗ್ಯೂ ಸ್ಟೀವ್ ಸ್ಮಿತ್ (84) ಜೊತೆಗೂಡಿ ಇನಿಂಗ್ಸ್ ಕಟ್ಟಿದ ವಾರ್ನರ್ ತಂಡದ ಮೊತ್ತವನ್ನು 300ರ ಗಡಿದಾಟಿಸಿದರು.
ಅಷ್ಟೇ ಅಲ್ಲದೆ 77ನೇ ಓವರ್ನ ಕೊನೆಯ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸುವ ಮೂಲಕ 254 ಎಸೆತಗಳಲ್ಲಿ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್ನಲ್ಲಿ ಮೂರನೇ ದ್ವಿಶತಕ ಪೂರೈಸಿದರು. ಆದರೆ ಡಬಲ್ ಸೆಂಚುರಿಯ ಬೆನ್ನಲ್ಲೇ ಸ್ನಾಯು ಸೆಳೆತಕ್ಕೆ ಒಳಗಾದ ಡೇವಿಡ್ ವಾರ್ನರ್ ರಿಟೈರ್ಡ್ ಆಗಿ ಮೈದಾನ ತೊರೆಯಬೇಕಾಯಿತು. ಇದಾಗ್ಯೂ ಮೊದಲ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡವು 197 ರನ್ಗಳ ಮುನ್ನಡೆ ಪಡೆದುಕೊಂಡಿದೆ.
A double century for David Warner!
But his #OhWhatAFeeling jump comes at a cost! ?#AUSvSA | @Toyota_Aus pic.twitter.com/RqJLcQpWHa
— cricket.com.au (@cricketcomau) December 27, 2022
2ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯಾ ತಂಡವು 386 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಟ್ರಾವಿಡ್ ಹೆಡ್ (48) ಹಾಗೂ ಅಲೆಕ್ಸ್ ಕ್ಯಾರಿ (9) ಬ್ಯಾಟ್ ಬೀಸುತ್ತಿದ್ದಾರೆ. ಒಂದು ವೇಳೆ ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ದಿಢೀರ್ ಕುಸಿತಕ್ಕೊಳಗಾದರೆ ಡೇವಿಡ್ ವಾರ್ನರ್ ಮತ್ತೆ ಬ್ಯಾಟಿಂಗ್ಗೆ ಮೈದಾನಕ್ಕಿಳಿಯಬಹುದು.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಕ್ಯಾಮರೋನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.
ಇದನ್ನೂ ಓದಿ: IPL 2023: RCB ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಕಂಡು ಬರುವುದು ಡೌಟ್, ಏಕೆಂದರೆ…
ಸೌತ್ ಆಫ್ರಿಕಾ ಪ್ಲೇಯಿಂಗ್ 11: ಡೀನ್ ಎಲ್ಗರ್ (ನಾಯಕ) , ಸರೆಲ್ ಎರ್ವೀ , ಥೀನಿಸ್ ಡಿ ಬ್ರುಯಿನ್ , ಟೆಂಬಾ ಬವುಮಾ , ಖಯಾ ಝೊಂಡೋ , ಕೈಲ್ ವೆರ್ರೆನ್ನೆ ( ವಿಕೆಟ್ ಕೀಪರ್ ) , ಮಾರ್ಕೊ ಯಾನ್ಸೆನ್ , ಕೇಶವ್ ಮಹಾರಾಜ್ , ಕಗಿಸೊ ರಬಾಡಾ , ಅನ್ರಿಕ್ ನೋಕಿಯಾ , ಲುಂಗಿ ಎನ್ಗಿಡಿ.
Published On - 2:36 pm, Tue, 27 December 22