AUS vs SCO: 25 ಎಸೆತಗಳಲ್ಲಿ 80 ರನ್ ಚಚ್ಚಿದ ಹೆಡ್; 9.4 ಓವರ್​ಗಳಲ್ಲಿ ಪಂದ್ಯ ಗೆದ್ದ ಆಸ್ಟ್ರೇಲಿಯಾ

AUS vs SCO: ಮೂರು ಪಂದ್ಯಗಳ ಟಿ20 ಸರಣಿಗಾಗಿ ಸ್ಕಾಟ್ಲೆಂಡ್ ಪ್ರವಾಸ ಮಾಡಿರುವ ಬಲಿಷ್ಠ ಆಸ್ಟ್ರೇಲಿಯಾ ತಂಡ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇಂದು ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಸ್ಕಾಟ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

AUS vs SCO: 25 ಎಸೆತಗಳಲ್ಲಿ 80 ರನ್ ಚಚ್ಚಿದ ಹೆಡ್; 9.4 ಓವರ್​ಗಳಲ್ಲಿ ಪಂದ್ಯ ಗೆದ್ದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ- ಸ್ಕಾಟ್ಲೆಂಡ್
Follow us
|

Updated on:Sep 04, 2024 | 9:54 PM

ಮೂರು ಪಂದ್ಯಗಳ ಟಿ20 ಸರಣಿಗಾಗಿ ಸ್ಕಾಟ್ಲೆಂಡ್ ಪ್ರವಾಸ ಮಾಡಿರುವ ಬಲಿಷ್ಠ ಆಸ್ಟ್ರೇಲಿಯಾ ತಂಡ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇಂದು ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಸ್ಕಾಟ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಆರಂಭಿಕ ಟ್ರಾವಿಡ್ ಹೆಡ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದಾಗಿ 3 ವಿಕೆಟ್ ಕಳೆದುಕೊಂಡು 9.4 ಓವರ್​ಗಳಲ್ಲಿ ಅಂದರೆ ಇನ್ನು 62 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

ಹೆಡ್- ಮಾರ್ಷ್ ದಾಖಲೆಯ ಆಟ

ಎಡಿನ್ ಬರ್ಗ್ ಮೈದಾನದಲ್ಲಿ ನಡೆದ ಈ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಸ್ಕಾಟ್ಲೆಂಡ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ತವಾಯಿತು. ಇದಾದ ಬಳಿಕ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ತಂಡ ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್ ಅವರ ಮೊದಲ ವಿಕೆಟ್ ಅನ್ನು ಶೂನ್ಯಕ್ಕೆ ಕಳೆದುಕೊಂಡಿತು. ಇದಾದ ಬಳಿಕ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಮೊದಲ 6 ಓವರ್​ಗಳ ಅಂತ್ಯಕ್ಕೆ ತಂಡದ ಮೊತ್ತವನ್ನು ಒಂದು ವಿಕೆಟ್ ನಷ್ಟಕ್ಕೆ 113 ರನ್​ಗಳಿಗೆ ಏರಿಸಿದರು.

ಇದರೊಂದಿಗೆ, ಆಸ್ಟ್ರೇಲಿಯಾ ತಂಡವು ಪೂರ್ಣ ಸದಸ್ಯ ತಂಡವಾಗಿ ಅಂತರಾಷ್ಟ್ರೀಯ ಟಿ20ಯ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡವೆಂಬ ಹೊಸ ದಾಖಲೆಯನ್ನು ತನ್ನದಾಗಿಸಿಕೊಂಡಿತು. ಇದಕ್ಕೂ ಮೊದಲು ಈ ದಾಖಲೆ ದಕ್ಷಿಣ ಆಫ್ರಿಕಾ ಹೆಸರಿನಲ್ಲಿತ್ತು. ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ವಿರುದ್ಧ 2023 ರಲ್ಲಿ ನಡೆದಿದ್ದ ಟಿ20 ಪಂದ್ಯದ ಪವರ್‌ಪ್ಲೇನಲ್ಲಿ 102 ರನ್ ದಾಖಲಿಸಿತ್ತು.

ಹೆಡ್ ಅಬ್ಬರ

ಈ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಕೇವಲ 25 ಎಸೆತಗಳಲ್ಲಿ 80 ರನ್ ಗಳಿಸಿದರು. 320.00 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ ಹೆಡ್, 12 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳನ್ನು ಸಿಡಿಸಿ, ಪವರ್‌ಪ್ಲೇನಲ್ಲಿಯೇ ಒಟ್ಟು 73 ರನ್ ಕಲೆಹಾಕಿದರು. ಇದರೊಂದಿಗೆ ಪವರ್‌ಪ್ಲೇಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 2020 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪವರ್‌ಪ್ಲೇಯಲ್ಲಿ ಪಾಲ್ ಸ್ಟಿರ್ಲಿಂಗ್ 63 ರನ್ ಬಾರಿಸಿ ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದರು. ಆದರೆ ಈಗ ಆ ದಾಖಲೆಯನ್ನು ಹೆಡ್ ತನ್ನದಾಗಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 4 September 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ