ಗಬ್ಬಾದಲ್ಲಿ ವಿಂಡೀಸ್​ಗೆ ಐತಿಹಾಸಿಕ ಗೆಲುವು! ಕುಣಿದು ಕುಪ್ಪಿಳಿಸಿ ಭಾವುಕರಾದ ಬ್ರಿಯಾನ್ ಲಾರಾ

AUS vs WI: ಹಲವು ವರ್ಷಗಳ ನಂತರ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ವಿರುದ್ಧ ಗಬ್ಬಾ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಗೆಲುವು ಸಾಧಿಸಿದೆ. ಈ ಗೆಲುವು ವೆಸ್ಟ್ ಇಂಡೀಸ್ ಕ್ರಿಕೆಟಿಗರನ್ನು ಭಾವುಕರನ್ನಾಗಿಸಿದೆ. ಅದರಲ್ಲೂ ಪಂದ್ಯದ ವೇಳೆ ಕಾಮೆಂಟೇಟರಿ ಮಾಡುತ್ತಿದ್ದ ವೆಸ್ಟ್ ಇಂಡೀಸ್ ದಂತಕಥೆ ಬ್ರಿಯಾನ್ ಲಾರಾ ಅವರು ಭಾವುಕರಾಗಿ ಕಣ್ಣೀರಿಡುವಂತೆ ಮಾಡಿದೆ.

ಗಬ್ಬಾದಲ್ಲಿ ವಿಂಡೀಸ್​ಗೆ ಐತಿಹಾಸಿಕ ಗೆಲುವು! ಕುಣಿದು ಕುಪ್ಪಿಳಿಸಿ ಭಾವುಕರಾದ ಬ್ರಿಯಾನ್ ಲಾರಾ
ಭಾವುಕರಾದ ಬ್ರಿಯಾನ್ ಲಾರಾ
Follow us
ಪೃಥ್ವಿಶಂಕರ
|

Updated on:Jan 28, 2024 | 4:38 PM

ಬ್ರಿಸ್ಬೇನ್‌ನ ಗಬ್ಬಾ ಕ್ರೀಡಾಂಗಣದಲ್ಲಿ (Gabba in Brisbane) ನಡೆದ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ (West Indies vs Australia) ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ವೆಸ್ಟ್ ಇಂಡೀಸ್ 8 ರನ್‌ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ವೆಸ್ಟ್ ಇಂಡೀಸ್ ಎರಡು ಪಂದ್ಯಗಳ ಸರಣಿಯನ್ನು 1-1 ಅಂತರದ ಸಮಬಲದೊಂದಿಗೆ ಅಂತ್ಯಗೊಳಿಸಿದೆ. ಗಬ್ಬಾ ಮೈದಾನದಲ್ಲಿ ಆಸ್ಟ್ರೇಲಿಯದ ದಾಖಲೆ ಅತ್ಯುತ್ತಮವಾಗಿದ್ದರೂ ಇದೀಗ ವೆಸ್ಟ್ ಇಂಡೀಸ್ ಕಾಂಗರೂ ತಂಡದ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ. ಹಲವು ವರ್ಷಗಳ ನಂತರ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ವಿರುದ್ಧ ಗಬ್ಬಾ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಗೆಲುವು ವೆಸ್ಟ್ ಇಂಡೀಸ್ ಕ್ರಿಕೆಟಿಗರನ್ನು ಭಾವುಕರನ್ನಾಗಿಸಿದೆ. ಅದರಲ್ಲೂ ಪಂದ್ಯದ ವೇಳೆ ಕಾಮೆಂಟೇಟರಿ ಮಾಡುತ್ತಿದ್ದ ವೆಸ್ಟ್ ಇಂಡೀಸ್ ದಂತಕಥೆ ಬ್ರಿಯಾನ್ ಲಾರಾ (Brian Lara) ಕೂಡ ಭಾವುಕರಾಗಿ ಕಣ್ಣೀರಿಡುವಂತೆ ಮಾಡಿದೆ.

ಗೆಲುವಿನ ನಂತರ ಭಾವುಕರಾದ ಬ್ರಿಯಾನ್ ಲಾರಾ

ವೆಸ್ಟ್ ಇಂಡೀಸ್‌ನ ಮಾಜಿ ದಿಗ್ಗಜ ಬ್ಯಾಟರ್ ಬ್ರಿಯಾನ್ ಲಾರಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಾಮೆಂಟೇಟರಿ ಮಾಡುತ್ತಿದ್ದರು. ಗಬ್ಬಾದಲ್ಲಿ ವೆಸ್ಟ್ ಇಂಡೀಸ್ ತಂಡ ಐತಿಹಾಸಿಕ ಜಯ ದಾಖಲಿಸಿದ ಕೂಡಲೇ ಬ್ರಿಯಾನ್ ಲಾರಾ ಜೋರಾಗಿ ಜಿಗಿದು ಸಹ ವಿವರಣೆಗಾರ ಆಸ್ಟ್ರೇಲಿಯಾದ ಮಾಜಿ ನಾಯಕ ಗಿಲ್‌ಕ್ರಿಸ್ಟ್ ಅವರನ್ನು ಅಪ್ಪಿಕೊಂಡರು. ಈ ಸಮಯದಲ್ಲಿ, ಬ್ರಿಯಾನ್ ಲಾರಾ ತುಂಬಾ ಭಾವುಕರಾಗಿದ್ದರು. ಮತ್ತೊಂದೆಡೆ, ವೆಸ್ಟ್ ಇಂಡೀಸ್‌ನ ಐತಿಹಾಸಿಕ ವಿಜಯದ ನಂತರ, ತಂಡದ ಮಾಜಿ ಅನುಭವಿ ಆಟಗಾರ ಕಾರ್ಲ್ ಹೂಪರ್ ಕೂಡ ತುಂಬಾ ಭಾವುಕರಾದರು. ಈ ಇಬ್ಬರು ಲೆಜೆಂಡರಿ ಆಟಗಾರರು ಭಾವುಕರಾದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವೆಸ್ಟ್ ಇಂಡೀಸ್​ಗೆ 8 ರನ್​​ಗಳ ಜಯ

ಎರಡನೇ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ 8 ರನ್​ಗಳಿಂದ ಗೆದ್ದುಕೊಂಡಿದೆ. ವೆಸ್ಟ್ ಇಂಡೀಸ್ ಗೆಲುವಿನಲ್ಲಿ ಯುವ ವೇಗಿ ಶಮರ್ ಜೋಸೆಫ್ ಪ್ರಮುಖ ಪಾತ್ರ ವಹಿಸಿದರು. ಶಮರ್ ಜೋಸೆಫ್ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬೌಲಿಂಗ್ ಮಾಡಿ ಆಸ್ಟ್ರೇಲಿಯಾ ತಂಡದ ಪ್ರಮುಖ 7 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಇವರನ್ನು ಹೊರತುಪಡಿಸಿ, ಅಲ್ಜಾರಿ ಜೋಸೆಫ್ 2 ಹಾಗೂ ಜಸ್ಟಿನ್ ಒಂದು ವಿಕೆಟ್ ಪಡೆದು ತಂಡದ ಗೆಲುವಿಗೆ ನಾಂದಿ ಹಾಡಿದರು. ಒಮ್ಮೆ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಸುಲಭವಾಗಿ ಗೆಲ್ಲುತ್ತದೆ ಎಂದು ಅನಿಸಿದರೂ ವೆಸ್ಟ್ ಇಂಡೀಸ್ ಅಮೋಘ ಬೌಲಿಂಗ್ ಮಾಡಿ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದು ಮಾತ್ರವಲ್ಲದೆ ಭರ್ಜರಿ ಜಯ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Sun, 28 January 24

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್