AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AUS A: ಮತ್ತೆ ಮಿಂಚಿದ ಧ್ರುವ್ ಜುರೇಲ್: ಆಸ್ಟ್ರೇಲಿಯಾಗೆ ಅಲ್ಪ ಮೊತ್ತದ ಗುರಿ

Australia A vs India A: ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 80 ರನ್ ಬಾರಿಸಿ ಮಿಂಚಿದ್ದ ಧ್ರುವ್ ಜುರೇಲ್ ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ 68 ರನ್ ಬಾರಿಸಿದ್ದಾರೆ. ಈ ಮೂಲಕ ಆಸೀಸ್ ನೆಲದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

IND A vs AUS A: ಮತ್ತೆ ಮಿಂಚಿದ ಧ್ರುವ್ ಜುರೇಲ್: ಆಸ್ಟ್ರೇಲಿಯಾಗೆ ಅಲ್ಪ ಮೊತ್ತದ ಗುರಿ
Dhruv Jurel
ಝಾಹಿರ್ ಯೂಸುಫ್
|

Updated on: Nov 09, 2024 | 10:08 AM

Share

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಎ ಮತ್ತು ಭಾರತ ಎ ತಂಡಗಳ ನಡುವಣ 2ನೇ ಅನಧಿಕೃತ ಟೆಸ್ಟ್ ಪಂದ್ಯವು ಮುಕ್ತಾಯದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಎ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಕೇವಲ 64 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಆಸರೆಯಾಗಿ ನಿಂತಿದ್ದರು.

ಅಲ್ಲದೆ 186 ಎಸೆತಗಳಲ್ಲಿ 80 ರನ್ ಬಾರಿಸುವ ಮೂಲಕ ಜುರೇಲ್ ಟೀಮ್ ಇಂಡಿಯಾ ಸ್ಕೋರ್ ಅನ್ನು 150ರ ಗಡಿದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾಗ್ಯೂ ಮೊದಲ ಇನಿಂಗ್ಸ್​ನಲ್ಲಿ ಭಾರತ ಎ ತಂಡವು 161 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವು 223 ರನ್​ಗಳಿಸಿ ಸರ್ವಪತನ ಕಂಡಿತು. ಮೊದಲ ಇನಿಂಗ್ಸ್​ನಲ್ಲಿನ 62 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡವು ಮತ್ತೆ ಬ್ಯಾಟಿಂಗ್​ನಲ್ಲಿ ಮುಗ್ಗರಿಸಿತು.

ಕೇವಲ 56 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಹಂತದಲ್ಲಿ ಭಾರತ ತಂಡಕ್ಕೆ ಧ್ರುವ್ ಜುರೇಲ್ ಮತ್ತೆ ಆಸರೆಯಾದರು. 122 ಎಸೆತಗಳನ್ನು ಎದುರಿಸಿದ ಜುರೇಲ್ 5 ಫೋರ್​ಗಳೊಂದಿಗೆ 68 ರನ್ ಬಾರಿಸಿದರು.

ಇನ್ನು ಕೊನೆಯ ಹಂತದಲ್ಲಿ ತನುಷ್ ಕೋಟ್ಯಾನ್ 44 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ಎ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 229 ರನ್ ಕಲೆಹಾಕಿತು. ಅತ್ತ ಮೊದಲ ಇನಿಂಗ್ಸ್​ನಲ್ಲಿ 62 ರನ್​ಗಳ ಮುನ್ನಡೆ ಪಡೆದಿದ್ದ ಆಸ್ಟ್ರೇಲಿಯಾ ಎ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 168 ರನ್​ಗಳ ಗುರಿ ಪಡೆದುಕೊಂಡಿದೆ.

ಆಸ್ಟ್ರೇಲಿಯಾ ಎ ಪ್ಲೇಯಿಂಗ್ 11: ಮಾರ್ಕಸ್ ಹ್ಯಾರಿಸ್ , ಸ್ಯಾಮ್ ಕಾನ್ಸ್ಟಾಸ್ , ಕ್ಯಾಮರೋನ್ ಬ್ಯಾಂಕ್ರಾಫ್ಟ್ , ನಾಥನ್ ಮೆಕ್‌ಸ್ವೀನಿ (ನಾಯಕ) , ಬ್ಯೂ ವೆಬ್‌ಸ್ಟರ್ , ಒಲಿವರ್ ಡೇವಿಸ್ , ಜಿಮ್ಮಿ ಪೀರ್ಸನ್ (ವಿಕೆಟ್ ಕೀಪರ್) , ಮೈಕೆಲ್ ನೆಸರ್ , ನಾಥನ್ ಮ್ಯಾಕ್‌ಆಂಡ್ರ್ಯೂ , ಸ್ಕಾಟ್ ಬೋಲ್ಯಾಂಡ್ , ಕೋರೆ ರೊಚಿಚಿಯೋಲಿ.

ಇದನ್ನೂ ಓದಿ: IPL 2025: ಐಪಿಎಲ್ ಮೆಗಾ ಹರಾಜಿಗೆ ಇಟಲಿ ಆಟಗಾರ ಎಂಟ್ರಿ

ಭಾರತ ಎ ಪ್ಲೇಯಿಂಗ್ 11: ಅಭಿಮನ್ಯು ಈಶ್ವರನ್ , ರುತುರಾಜ್ ಗಾಯಕ್ವಾಡ್ (ನಾಯಕ) , ಸಾಯಿ ಸುದರ್ಶನ್ , ಕೆಎಲ್ ರಾಹುಲ್ , ದೇವದತ್ತ್ ಪಡಿಕ್ಕಲ್ , ಧ್ರುವ ಜುರೇಲ್ (ವಿಕೆಟ್ ಕೀಪರ್) , ನಿತೀಶ್ ರೆಡ್ಡಿ , ತನುಷ್ ಕೋಟ್ಯಾನ್ , ಖಲೀಲ್ ಅಹ್ಮದ್ , ಪ್ರಸಿದ್ಧ್ ಕೃಷ್ಣ , ಮುಖೇಶ್ ಕುಮಾರ್.

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು