ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಎ ಮತ್ತು ಭಾರತ ಎ ತಂಡಗಳ ನಡುವಣ 2ನೇ ಅನಧಿಕೃತ ಟೆಸ್ಟ್ ಪಂದ್ಯವು ಮುಕ್ತಾಯದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಎ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಕೇವಲ 64 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಆಸರೆಯಾಗಿ ನಿಂತಿದ್ದರು.
ಅಲ್ಲದೆ 186 ಎಸೆತಗಳಲ್ಲಿ 80 ರನ್ ಬಾರಿಸುವ ಮೂಲಕ ಜುರೇಲ್ ಟೀಮ್ ಇಂಡಿಯಾ ಸ್ಕೋರ್ ಅನ್ನು 150ರ ಗಡಿದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾಗ್ಯೂ ಮೊದಲ ಇನಿಂಗ್ಸ್ನಲ್ಲಿ ಭಾರತ ಎ ತಂಡವು 161 ರನ್ಗಳಿಗೆ ಆಲೌಟ್ ಆಯಿತು.
ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡವು 223 ರನ್ಗಳಿಸಿ ಸರ್ವಪತನ ಕಂಡಿತು. ಮೊದಲ ಇನಿಂಗ್ಸ್ನಲ್ಲಿನ 62 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡವು ಮತ್ತೆ ಬ್ಯಾಟಿಂಗ್ನಲ್ಲಿ ಮುಗ್ಗರಿಸಿತು.
ಕೇವಲ 56 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಹಂತದಲ್ಲಿ ಭಾರತ ತಂಡಕ್ಕೆ ಧ್ರುವ್ ಜುರೇಲ್ ಮತ್ತೆ ಆಸರೆಯಾದರು. 122 ಎಸೆತಗಳನ್ನು ಎದುರಿಸಿದ ಜುರೇಲ್ 5 ಫೋರ್ಗಳೊಂದಿಗೆ 68 ರನ್ ಬಾರಿಸಿದರು.
ಇನ್ನು ಕೊನೆಯ ಹಂತದಲ್ಲಿ ತನುಷ್ ಕೋಟ್ಯಾನ್ 44 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ಎ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 229 ರನ್ ಕಲೆಹಾಕಿತು. ಅತ್ತ ಮೊದಲ ಇನಿಂಗ್ಸ್ನಲ್ಲಿ 62 ರನ್ಗಳ ಮುನ್ನಡೆ ಪಡೆದಿದ್ದ ಆಸ್ಟ್ರೇಲಿಯಾ ಎ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 168 ರನ್ಗಳ ಗುರಿ ಪಡೆದುಕೊಂಡಿದೆ.
ಆಸ್ಟ್ರೇಲಿಯಾ ಎ ಪ್ಲೇಯಿಂಗ್ 11: ಮಾರ್ಕಸ್ ಹ್ಯಾರಿಸ್ , ಸ್ಯಾಮ್ ಕಾನ್ಸ್ಟಾಸ್ , ಕ್ಯಾಮರೋನ್ ಬ್ಯಾಂಕ್ರಾಫ್ಟ್ , ನಾಥನ್ ಮೆಕ್‌ಸ್ವೀನಿ (ನಾಯಕ) , ಬ್ಯೂ ವೆಬ್‌ಸ್ಟರ್ , ಒಲಿವರ್ ಡೇವಿಸ್ , ಜಿಮ್ಮಿ ಪೀರ್ಸನ್ (ವಿಕೆಟ್ ಕೀಪರ್) , ಮೈಕೆಲ್ ನೆಸರ್ , ನಾಥನ್ ಮ್ಯಾಕ್‌ಆಂಡ್ರ್ಯೂ , ಸ್ಕಾಟ್ ಬೋಲ್ಯಾಂಡ್ , ಕೋರೆ ರೊಚಿಚಿಯೋಲಿ.
ಇದನ್ನೂ ಓದಿ: IPL 2025: ಐಪಿಎಲ್ ಮೆಗಾ ಹರಾಜಿಗೆ ಇಟಲಿ ಆಟಗಾರ ಎಂಟ್ರಿ
ಭಾರತ ಎ ಪ್ಲೇಯಿಂಗ್ 11: ಅಭಿಮನ್ಯು ಈಶ್ವರನ್ , ರುತುರಾಜ್ ಗಾಯಕ್ವಾಡ್ (ನಾಯಕ) , ಸಾಯಿ ಸುದರ್ಶನ್ , ಕೆಎಲ್ ರಾಹುಲ್ , ದೇವದತ್ತ್ ಪಡಿಕ್ಕಲ್ , ಧ್ರುವ ಜುರೇಲ್ (ವಿಕೆಟ್ ಕೀಪರ್) , ನಿತೀಶ್ ರೆಡ್ಡಿ , ತನುಷ್ ಕೋಟ್ಯಾನ್ , ಖಲೀಲ್ ಅಹ್ಮದ್ , ಪ್ರಸಿದ್ಧ್ ಕೃಷ್ಣ , ಮುಖೇಶ್ ಕುಮಾರ್.