AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

Australia vs South Africa: ಆಸ್ಟ್ರೇಲಿಯಾ-ಸೌತ್ ಆಫ್ರಿಕಾ ನಡುವಣ 6 ಪಂದ್ಯಗಳ ಸರಣಿಯು ಆಗಸ್ಟ್ 10 ರಿಂದ ಶುರುವಾಗಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಮೊದಲಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಮೂರು ಮ್ಯಾಚ್​ಗಳ ಏಕದಿನ ಸರಣಿ ನಡೆಯಲಿದೆ.

ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
Australia
ಝಾಹಿರ್ ಯೂಸುಫ್
|

Updated on: Jul 30, 2025 | 9:55 AM

Share

ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಆಗಸ್ಟ್ 10 ರಿಂದ ಶುರುವಾಗಲಿರುವ ಈ ಸರಣಿ ವೇಳೆ ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್​ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಟಿ20 ಹಾಗೂ ಏಕದಿನ ತಂಡಗಳನ್ನು ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಜೇಕ್ ಪ್ರೇಸರ್ ಮೆಕ್​ಗುರ್ಕ್ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮಿಚೆಲ್ ಓವನ್ ಅವರನ್ನು ಏಕದಿನ ತಂಡಕ್ಕೂ ಆಯ್ಕೆ ಮಾಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ವೇಳೆ ಗಾಯದ ಕಾರಣ ಹೊರಗುಳಿದಿದ್ದ ಮ್ಯಾಥ್ಯೂ ಶಾರ್ಟ್ ಇದೀಗ ಸಂಪೂರ್ಣ ಫಿಟ್ ಆಗಿದ್ದು, ಅದರಂತೆ ಇದೀಗ 14 ಸದಸ್ಯರ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಆರಂಭಿಕರಾಗಿ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಕಾಣಿಸಿಕೊಂಡಿದ್ದು, ಮಧ್ಯಮ ಕ್ರಮಾಂಕದ ದಾಂಡಿಗರಾಗಿ ಗ್ಲೆನ್ ಮ್ಯಾಕ್ಸ್​ವೆಲ್, ಕ್ಯಾಮರೋನ್ ಗ್ರೀನ್, ಟಿಮ್ ಡೇವಿಡ್ ಇದ್ದಾರೆ, ಇನ್ನು ಬೌಲರ್​ಗಳಾಗಿ ಶಾನ್ ಅಬಾಟ್, ನಾಥನ್ ಎಲ್ಲಿಸ್ ಹಾಗೂ ಜೋಶ್ ಹೇಝಲ್​ವುಡ್ ತಂಡದಲ್ಲಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಟಿ20 ತಂಡ ಈ ಕೆಳಗಿನಂತಿದೆ…

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾ ಅಬಾಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್​ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್ , ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ.

ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಅಲೆಕ್ಸ್ ಕ್ಯಾರಿ ಸ್ಥಾನ ಪಡೆದಿದ್ದು, ಇವರೊಂದಿಗೆ ಮಾರ್ನಸ್ ಲಾಬುಶೇನ್ ಕೂಡ ಕಾಣಿಸಿಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಏಕದಿನ ತಂಡ ಈ ಕೆಳಗಿನಂತಿದೆ…

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್​ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಲ್ಯಾನ್ಸ್ ಮೋರಿಸ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ.

ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ

ಆಸ್ಟ್ರೇಲಿಯಾ-ಸೌತ್ ಆಫ್ರಿಕಾ ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ ಸಮಯ ಸ್ಥಳ
ಮೊದಲ ಟಿ20 ಆಗಸ್ಟ್ 10, 2025 ಮಧ್ಯಾಹ್ನ 2:30 ಡಾರ್ವಿನ್
ಎರಡನೇ ಟಿ20 ಆಗಸ್ಟ್ 12, 2025 ಮಧ್ಯಾಹ್ನ 2:30 ಡಾರ್ವಿನ್
ಮೂರನೇ ಟಿ20 ಆಗಸ್ಟ್ 16, 2025 ಮಧ್ಯಾಹ್ನ 2:30 ಕೈರ್ನ್ಸ್
ಮೊದಲ ಏಕದಿನ ಆಗಸ್ಟ್ 19, 2025 ಬೆಳಗ್ಗೆ 10:00 ಕೈರ್ನ್ಸ್
ಎರಡನೇ ಏಕದಿನ ಆಗಸ್ಟ್ 22, 2025 ಬೆಳಗ್ಗೆ 10:00 ಮಕೆ
ಮೂರನೇ ಏಕದಿನ ಆಗಸ್ಟ್ 24, 2025 ಬೆಳಗ್ಗೆ 10:00 ಮಕೆ

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?