
ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಆಗಸ್ಟ್ 10 ರಿಂದ ಶುರುವಾಗಲಿರುವ ಈ ಸರಣಿ ವೇಳೆ ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಟಿ20 ಹಾಗೂ ಏಕದಿನ ತಂಡಗಳನ್ನು ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಜೇಕ್ ಪ್ರೇಸರ್ ಮೆಕ್ಗುರ್ಕ್ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮಿಚೆಲ್ ಓವನ್ ಅವರನ್ನು ಏಕದಿನ ತಂಡಕ್ಕೂ ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ವೇಳೆ ಗಾಯದ ಕಾರಣ ಹೊರಗುಳಿದಿದ್ದ ಮ್ಯಾಥ್ಯೂ ಶಾರ್ಟ್ ಇದೀಗ ಸಂಪೂರ್ಣ ಫಿಟ್ ಆಗಿದ್ದು, ಅದರಂತೆ ಇದೀಗ 14 ಸದಸ್ಯರ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಆರಂಭಿಕರಾಗಿ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ಕಾಣಿಸಿಕೊಂಡಿದ್ದು, ಮಧ್ಯಮ ಕ್ರಮಾಂಕದ ದಾಂಡಿಗರಾಗಿ ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ಟಿಮ್ ಡೇವಿಡ್ ಇದ್ದಾರೆ, ಇನ್ನು ಬೌಲರ್ಗಳಾಗಿ ಶಾನ್ ಅಬಾಟ್, ನಾಥನ್ ಎಲ್ಲಿಸ್ ಹಾಗೂ ಜೋಶ್ ಹೇಝಲ್ವುಡ್ ತಂಡದಲ್ಲಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಟಿ20 ತಂಡ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾ ಅಬಾಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್ , ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ.
ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಅಲೆಕ್ಸ್ ಕ್ಯಾರಿ ಸ್ಥಾನ ಪಡೆದಿದ್ದು, ಇವರೊಂದಿಗೆ ಮಾರ್ನಸ್ ಲಾಬುಶೇನ್ ಕೂಡ ಕಾಣಿಸಿಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಏಕದಿನ ತಂಡ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಲ್ಯಾನ್ಸ್ ಮೋರಿಸ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ.
ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ
| ಪಂದ್ಯ | ದಿನಾಂಕ | ಸಮಯ | ಸ್ಥಳ |
|---|---|---|---|
| ಮೊದಲ ಟಿ20 | ಆಗಸ್ಟ್ 10, 2025 | ಮಧ್ಯಾಹ್ನ 2:30 | ಡಾರ್ವಿನ್ |
| ಎರಡನೇ ಟಿ20 | ಆಗಸ್ಟ್ 12, 2025 | ಮಧ್ಯಾಹ್ನ 2:30 | ಡಾರ್ವಿನ್ |
| ಮೂರನೇ ಟಿ20 | ಆಗಸ್ಟ್ 16, 2025 | ಮಧ್ಯಾಹ್ನ 2:30 | ಕೈರ್ನ್ಸ್ |
| ಮೊದಲ ಏಕದಿನ | ಆಗಸ್ಟ್ 19, 2025 | ಬೆಳಗ್ಗೆ 10:00 | ಕೈರ್ನ್ಸ್ |
| ಎರಡನೇ ಏಕದಿನ | ಆಗಸ್ಟ್ 22, 2025 | ಬೆಳಗ್ಗೆ 10:00 | ಮಕೆ |
| ಮೂರನೇ ಏಕದಿನ | ಆಗಸ್ಟ್ 24, 2025 | ಬೆಳಗ್ಗೆ 10:00 | ಮಕೆ |