WTC ಫೈನಲ್ ಪಂದ್ಯಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
WTC Final 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್ನ ಗದಾಯುದ್ಧದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಜೂನ್ 11 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನ ಆತಿಥ್ಯವಹಿಸುತ್ತಿರುವುದು ವಿಶೇಷ.

ಜೂನ್ 11 ರಿಂದ ಶುರುವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ (WTC) ಫೈನಲ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದ ನಾಯಕರಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಟೀಮ್ ಇಂಡಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದ ಆಲ್ರೌಂಡರ್ ಮಿಚೆಲ್ ಮಾರ್ಷ್ ಟೆಸ್ಟ್ ತಂಡದಿಂದ ಹೊರಬಿದ್ದರೆ, ಕ್ಯಾಮರೋನ್ ಗ್ರೀನ್ ಮತ್ತೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಈ ತಂಡದಲ್ಲಿ ಆರಂಭಿಕರಾಗಿ ಉಸ್ಮಾನ್ ಖ್ವಾಜಾ ಹಾಗೂ ಸ್ಯಾಮ್ ಕೊನ್ಸ್ಟಾಸ್ ಸ್ಥಾನ ಪಡೆದರೆ, ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೆನ್, ಟ್ರಾವಿಸ್ ಹೆಡ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಸ್ಥಾನದಲ್ಲಿ ಅಲೆಕ್ ಕ್ಯಾರಿ ಹಾಗೂ ಜೋಶ್ ಇಂಗ್ಲಿಸ್ ಸ್ಥಾನ ಪಡೆದಿದ್ದಾರೆ.
ಇವರೊಂದಿಗೆ ಆಲ್ರೌಂಡರ್ಗಳಾಗಿ ಕ್ಯಾಮರೋನ್ ಗ್ರೀನ್ ಹಾಗೂ ಬ್ಯೂ ವೆಬ್‌ಸ್ಟರ್ ತಂಡದಲ್ಲಿದ್ದಾರೆ. ಇನ್ನು ವೇಗಿಗಳಾಗಿ ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹೇಝಲ್‌ವುಡ್ ತಂಡದಲ್ಲಿದ್ದಾರೆ. ಸ್ಪಿನ್ನರ್ಗಳಾಗಿ ಮ್ಯಾಥ್ಯೂ ಕುಹ್ನೆಮನ್ ಹಾಗೂ ನಾಥನ್ ಲಿಯಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್, ಸ್ಯಾಮ್ ಕೊನ್ಸ್ಟಾಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ , ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್‌ವುಡ್, ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್, ಮ್ಯಾಥ್ಯೂ ಕುಹ್ನೆಮನ್.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಯಾವಾಗ?
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಲಿದೆ. ಈ ಬಾರಿಯ WTC ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಈ ಪಂದ್ಯಕ್ಕೆ ಇಂಗ್ಲೆಂಡ್ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸುತ್ತಿರುವುದು ವಿಶೇಷ. ಇದಕ್ಕೂ ಮುನ್ನ ನಡೆದ 2021ರ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಗಳಿಗೆ ಇಂಗ್ಲೆಂಡ್ನ ಓವಲ್ ಮೈದಾನ ಆತಿಥ್ಯವಹಿಸಿತ್ತು.
ಇದನ್ನೂ ಓದಿ: IPL 2025: PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!
ಈ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಅಂತಿಮ ಹಣಾಹಣಿಯನ್ನು ಆಯೋಜಿಸಲಾಗುತ್ತಿದೆ. ಅದರಂತೆ ಜೂನ್ 11 ರಿಂದ 15 ರವರೆಗೆ ಫೈನಲ್ ಪಂದ್ಯ ಜರುಗಲಿದೆ. ಈ ಪಂದ್ಯದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಸೌತ್ ಆಫ್ರಿಕಾ ಮತ್ತು ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಗಳು ಸೆಣಸಲಿದ್ದು, ಇದರಲ್ಲಿ ಗೆದ್ದ ತಂಡವು WTC ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.
