AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೊಡ್ಡ ಅವಮಾನ’; ಹೀನಾಯ ಸೋಲನ್ನು ಅರಗಿಸಿಕೊಳ್ಳದ ಮಾಜಿ ಆಸೀಸ್ ಆಟಗಾರರು

Australia's Shocking Loss to Bangladesh: ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ತವರು ನೆಲದಲ್ಲಿ ಬಾಂಗ್ಲಾದೇಶದ ವಿರುದ್ಧ ಅನುಭವಿಸಿದ ಐತಿಹಾಸಿಕ ಸೋಲು ಕ್ರೀಡಾ ಜಗತ್ತನ್ನು ಬೆಚ್ಚಿಬೀಳಿಸಿದೆ. ಡಾರ್ವಿನ್‌ನಲ್ಲಿ 9 ವಿಕೆಟ್‌ಗಳಿಂದ ಸೋತ ಆಸೀಸ್‌ ತಂಡದ ಪ್ರದರ್ಶನಕ್ಕೆ ಮಾಜಿ ನಾಯಕ ರಿಕಿ ಪಾಂಟಿಂಗ್ ಮತ್ತು ಮ್ಯಾಥ್ಯೂ ಹೇಡನ್ ಕೆರಳಿದ್ದಾರೆ. ಈ ಸೋಲು "ದೊಡ್ಡ ಅವಮಾನ" ಎಂದು ಕರೆದಿದ್ದು, ತಂಡದಲ್ಲಿ ತಕ್ಷಣವೇ ಸಂಪೂರ್ಣ ಬದಲಾವಣೆಗಳನ್ನು ಮಾಡಬೇಕೆಂದು ಒತ್ತಾಯಿಸಿದ್ದಾರೆ.

‘ದೊಡ್ಡ ಅವಮಾನ’; ಹೀನಾಯ ಸೋಲನ್ನು ಅರಗಿಸಿಕೊಳ್ಳದ ಮಾಜಿ ಆಸೀಸ್ ಆಟಗಾರರು
Australia Team
ಪೃಥ್ವಿಶಂಕರ
|

Updated on:Aug 16, 2026 | 9:13 PM

Share

ಆಸ್ಟ್ರೇಲಿಯಾ ಕ್ರಿಕೆಟ್ (Australia cricket) ತಂಡವು ತವರು ನೆಲದಲ್ಲಿ ಎದುರಿಸಿದ ಹೀನಾಯ ಸೋಲು ಕ್ರೀಡಾ ಜಗತ್ತನ್ನು ಬೆಚ್ಚಿಬೀಳಿಸಿದೆ. ಏಕೆಂದರೆ ಕ್ರಿಕೆಟ್ ಜಗತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಪ್ರಾಬಲ್ಯ ಪದಗಳಿಗೆ ನಿಲುಕದ್ದು. ಅವರ ಸ್ವಂತ ನೆಲದಲ್ಲಿ ಅವರನ್ನು ಸೋಲಿಸುವುದು ಎಂತಹ ಬಲಿಷ್ಠ ತಂಡಕ್ಕೂ ದುಃಸ್ವಪ್ನ. ಹೀಗಿರುವಾಗ ಡಾರ್ವಿನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶದ ( Bangladesh) ವಿರುದ್ಧದ ಐತಿಹಾಸಿಕ ಸೋಲು ಆಸೀಸ್ ತಂಡದ ಮಾಜಿ ನಾಯಕರನ್ನು ಮತ್ತು ಆಟಗಾರರನ್ನು ಕೆರಳಿಸಿದೆ. ರಿಕಿ ಪಾಂಟಿಂಗ್ ಮತ್ತು ಮ್ಯಾಥ್ಯೂ ಹೇಡನ್ ಅವರಂತಹ ಮಾಜಿ ಆಟಗಾರರು ಪ್ರಸ್ತುತ ತಂಡದ ಪ್ರದರ್ಶನವನ್ನು ಟೀಕಿಸಿದ್ದು, ಇಡೀ ತಂಡವನ್ನು ಸಂಪೂರ್ಣವಾಗಿ ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ.

ಮೊದಲ ಟೆಸ್ಟ್​ನಲ್ಲಿ ಬಾಂಗ್ಲಾದೇಶ 9 ವಿಕೆಟ್‌ಗಳಿಂದ ಐತಿಹಾಸಿಕ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಈ ಗೆಲುವಿನೊಂದಿಗೆ, ಬಾಂಗ್ಲಾದೇಶ ತಂಡವು ಹೊಸ ಇತಿಹಾಸವನ್ನು ಬರೆದಿದ್ದು, ಆಸ್ಟ್ರೇಲಿಯಾದ ನೆಲದಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ ಮೊದಲ ಗೆಲುವು ಸಾಧಿಸಿದ ಮೊದಲ ಏಷ್ಯನ್ ತಂಡವೆಂಬ ದಾಖಲೆ ಬರೆದಿದೆ. ಬಾಂಗ್ಲಾದೇಶ ಕೇವಲ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಗೆಲುವು ದಾಖಲಿಸಿದೆ. ಇದು ಆಸೀಸ್ ತಂಡದ ಮಾಜಿ ಆಟಗಾರರನ್ನು ಕೆರಳಿಸಿದೆ.

ನಾಚಿಕೆಗೇಡಿನ ವಿಷಯ; ಪಾಂಟಿಂಗ್ ಫೈರ್

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತಮ್ಮ ತವರು ಪ್ರೇಕ್ಷಕರ ಮುಂದೆ ದುರ್ಬಲ ತಂಡಗಳ ವಿರುದ್ಧದ ಸೋಲಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಆಸ್ಟ್ರೇಲಿಯಾ ಕ್ರಿಕೆಟ್‌ಗೆ ‘ದೊಡ್ಡ ಅವಮಾನ’ ಎಂದು ಬಣ್ಣಿಸಿರುವ ಅವರು ಪ್ಯಾಟ್ ಕಮ್ಮಿನ್ಸ್ ನೇತೃತ್ವದ ತಂಡದ ಪ್ರದರ್ಶನದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ ಮತ್ತು ತಂಡದಲ್ಲಿ ತಕ್ಷಣವೇ ಬದಲಾವಣೆಗಳನ್ನು ಮಾಡಬೇಕಾಗಿದೆ. ಆಟಗಾರರನ್ನು ಕೈಬಿಡುವ ಅಭ್ಯಾಸವನ್ನು ನಾನು ಸಾಮಾನ್ಯವಾಗಿ ವಿರೋಧಿಸುತ್ತೇನೆ.

ಏಕೆಂದರೆ ಒಬ್ಬ ನಾಯಕನಾಗಿ, ತಂಡವನ್ನು ಒಂದು ತಂಡವಾಗಿ ಮುನ್ನಡೆಸುವುದು ನನ್ನ ಆದ್ಯತೆಯಾಗಿದೆ. ಪರಿಸ್ಥಿತಿ ಸಂಪೂರ್ಣವಾಗಿ ಕೈ ಮೀರುವವರೆಗೆ ಆಟಗಾರರನ್ನು ಕೈಬಿಡಲು ನಾನು ಬಯಸುವುದಿಲ್ಲ. ಆದರೆ ಡಾರ್ವಿನ್ ಟೆಸ್ಟ್‌ಗೆ ಮುನ್ನ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಮತ್ತು ನಂಬರ್ 3 ಸ್ಥಾನಗಳಲ್ಲಿ ಬದಲಾವಣೆ ಮಾಡುವುದರಿಂದ ಹೆಚ್ಚಿನ ಹಾನಿಯಾಗುತ್ತಿರಲಿಲ್ಲ. ಇತ್ತೀಚಿನ ಸೋಲಿನ ನಂತರ ತಂಡದಲ್ಲಿನ ಬದಲಾವಣೆಯನ್ನು ಇನ್ನು ಮುಂದೆ ಮುಂದೂಡಬಾರದು ಎಂದು ಪಾಂಟಿಂಗ್ ಕ್ರಿಕೆಟ್ ಆಸ್ಟ್ರೇಲಿಯಾಗೆ ಎಚ್ಚರಿಕೆ ನೀಡಿದ್ದಾರೆ.

‘ಅತಿದೊಡ್ಡ ಗೆಲುವು’; ಆಸ್ಟ್ರೇಲಿಯಾವನ್ನು ಮಣಿಸಿದ ಬಳಿಕ ಬಾಂಗ್ಲಾ ನಾಯಕ ಹೇಳಿದ್ದಿದು

ಬ್ಯಾಟಿಂಗ್ ಕ್ರಮಾಂಕವನ್ನೇ ಬದಲಾಯಿಸಬೇಕು

ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಭರವಸೆ ತೋರಿಸುತ್ತಿರುವ ಯುವ ಆಟಗಾರರಾದ ಸ್ಯಾಮ್ ಕಾನ್ಸ್ಟಸ್ ಮತ್ತು ಮ್ಯಾಟ್ ವ್ರೆನ್‌ಶಾ ಅವರಿಗೆ ಅಂತಿಮ ತಂಡದಲ್ಲಿ ತಕ್ಷಣ ಅವಕಾಶ ನೀಡಬೇಕು. ಪ್ರಸ್ತುತ ಬ್ಯಾಟಿಂಗ್ ಲೈನ್‌ಅಪ್ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಡ್ಯಾಶಿಂಗ್ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅವರನ್ನು ಓಪನರ್ ಆಗಿ ಕಳುಹಿಸುವುದು ಸರಿಯಾದ ನಿರ್ಧಾರವಲ್ಲ. ಅವರು ಐದನೇ ಸ್ಥಾನಕ್ಕೆ ಸೂಕ್ತರು. ಅದೇ ಸಮಯದಲ್ಲಿ, ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಅವರನ್ನು ಐದನೇ ಸ್ಥಾನದಲ್ಲಿ ಆಡಿಸುವುದು ತನಗೆ ಇಷ್ಟವಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Sun, 16 August 26

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!