AUS vs ENG: ವಿಶ್ವ ವಿಜೇತರಿಗೆ ಸರಣಿ ಸೋಲಿನ ಮುಖಭಂಗ..! ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ

AUS vs ENG: ಎರಡು ದಿನಗಳ ಹಿಂದೆ ಅಡಿಲೇಡ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ, ಸಿಡ್ನಿಯಲ್ಲಿಯೂ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಖಾಯಂ ನಾಯಕರಿಲ್ಲದೆ ಆಡಬೇಕಾಯಿತು.

AUS vs ENG: ವಿಶ್ವ ವಿಜೇತರಿಗೆ ಸರಣಿ ಸೋಲಿನ ಮುಖಭಂಗ..! ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ
AUS vs ENG
Follow us
TV9 Web
| Updated By: ಪೃಥ್ವಿಶಂಕರ

Updated on:Nov 19, 2022 | 5:16 PM

ಎರಡು ದಿನಗಳು, ಇಬ್ಬರು ಹೊಸ ನಾಯಕರು ಮತ್ತು ಎರಡು ಗೆಲುವುಗಳು. ಆರನ್ ಫಿಂಚ್ (Aaron Finch) ಅವರ ನಿವೃತ್ತಿಯ ನಂತರ, ಏಕದಿನ ಕ್ರಿಕೆಟ್‌ನಲ್ಲಿ ಹೊಸ ಯುಗವನ್ನು ಪ್ರವೇಶಿಸಿದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australian cricket team), ಸತತ ಎರಡನೇ ಏಕದಿನ ಪಂದ್ಯದ ಗೆಲುವಿನೊಂದಿಗೆ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದೆ. ಹೊಸ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) ಅನುಪಸ್ಥಿತಿಯಲ್ಲಿ, ತಂಡದ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ (Josh Hazlewood) ಆಸ್ಟ್ರೇಲಿಯಾವನ್ನು ಮುನ್ನಡೆಸಿದರು. ಈ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 40 ಓವರ್‌ಗಳೊಳಗೆ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡುವುದರೊಂದಿಗೆ 72 ರನ್‌ಗಳ ಜಯ ಸಾಧಿಸಿದೆ.

ಎರಡು ದಿನಗಳ ಹಿಂದೆ ಅಡಿಲೇಡ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ, ಸಿಡ್ನಿಯಲ್ಲಿಯೂ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಖಾಯಂ ನಾಯಕರಿಲ್ಲದೆ ಆಡಬೇಕಾಯಿತು. ಮೊಯಿನ್ ಅಲಿ ಇಂಗ್ಲೆಂಡ್‌ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರೆ, ಆಸ್ಟ್ರೇಲಿಯಾ ಪರ ಜೋಶ್ ಹ್ಯಾಜಲ್‌ವುಡ್ ತಂಡವನ್ನು ಮುನ್ನಡೆಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಅವರ ಅತ್ಯುತ್ತಮ ಇನ್ನಿಂಗ್ಸ್ ಆಧಾರದ ಮೇಲೆ ನಿಗಧಿತ 50 ಓವರ್​ಗಳಲ್ಲಿ 280 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆಂಗ್ಲರ ತಂಡವು ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಹಾಗೂ ಸ್ಪಿನ್ನರ್ ಝಂಪಾ ದಾಳಿಗೆ ಸಿಲುಕಿ ಕೇವಲ 208 ರನ್‌ಗಳಿಗೆ ಆಲೌಟ್ ಆಯಿತು.

ಸ್ಟಾರ್ಕ್‌ ಮಾರಕ ದಾಳಿ

ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ನ ಆರಂಭ ಮತ್ತೊಮ್ಮೆ ಕೆಟ್ಟದಾಗಿತ್ತು. ಇಂಗ್ಲೆಂಡ್‌ ಪರ ಮೊದಲ ಓವರ್ ಮಾಡಿದ ಸ್ಟಾರ್ಕ್ ಮೊದಲ ಓವರ್‌ನಲ್ಲಿ ಎರಡು ವಿಕೆಟ್ ಪಡೆದರು. ಕೆಟ್ಟ ಫಾರ್ಮ್‌ನಲ್ಲಿರುವ ಜೇಸನ್ ರಾಯ್ ಎರಡನೇ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರೆ, ಕಳೆದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ್ದ ಡೇವಿಡ್ ಮಲಾನ್ ಐದನೇ ಎಸೆತದಲ್ಲಿ ಬೌಲ್ಡ್ ಆದರು. ಫಿಲ್ ಸಾಲ್ಟ್ ಕೂಡ ಹೆಚ್ಚು ಕಾಲ ಪಿಚ್​ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

ಬಿಲ್ಲಿಂಗ್ಸ್-ವಿನ್ಸ್ ಪ್ರಯತ್ನ ವ್ಯರ್ಥ

ಇಲ್ಲಿಂದ ಇಂಗ್ಲೆಂಡ್ ಪರ ಜೇಮ್ಸ್ ವಿನ್ಸ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಇನ್ನಿಂಗ್ಸ್ ನಿಭಾಯಿಸಲು ಯತ್ನಿಸಿದರು. ನಾಯಕ ಬಟ್ಲರ್ ಅನುಪಸ್ಥಿತಿಯಿಂದ ಆಂಗ್ಲರ ಬ್ಯಾಟಿಂಗ್ ದುರ್ಬಲವಾಗಿ ಕಂಡರೂ ಈ ಇಬ್ಬರೂ ಬ್ಯಾಟ್ಸ್​ಮನ್​ಗಳು ತಂಡವನ್ನು ಗುರಿಯತ್ತ ಮುನ್ನಡೆಸಿ ನಾಲ್ಕನೇ ವಿಕೆಟ್​ಗೆ 122 ರನ್​ಗಳ ಜತೆಯಾಟ ನಡೆಸಿದರು. ನಾಯಕ ಹ್ಯಾಜಲ್‌ವುಡ್ ವಿನ್ಸ್ ಅವರನ್ನು ಔಟ್ ಮಾಡುವ ಮೂಲಕ ಈ ಜೊತೆಯಾಟವನ್ನು ಮುರಿದರು. ನಂತರ ಸ್ಟಾರ್ಕ್ ಮತ್ತು ಲೆಗ್-ಸ್ಪಿನ್ನರ್ ಆಡಮ್ ಝಂಪಾ ಕೆಳ ಕ್ರಮಾಂಕವನ್ನು ಇತ್ಯರ್ಥಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ.

Published On - 5:14 pm, Sat, 19 November 22

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ