SCO vs AUS: ಸ್ಕಾಟ್ಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ
Australia vs Scotland: ಸ್ಕಾಟ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟಿ20 ಪಂದ್ಯವನ್ನು ಆಸೀಸ್ ಪಡೆ 70 ರನ್ಗಳಿಂದ ಗೆದ್ದುಕೊಂಡಿತ್ತು. ಇದೀಗ ಮೂರನೇ ಟಿ20 ಪಂದ್ಯದಲ್ಲಿ 6 ವಿಕೆಟ್ಗಳ ಜಯ ಸಾಧಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ಸ್ಕಾಟ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಎಡಿನ್ಬರ್ಗ್ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡದ ಪರ ಆರಂಭಿಕ ಆಟಗಾರ ಜಾರ್ಜ್ ಮುನ್ಸಿ 25 ರನ್ ಬಾರಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೆಂಡನ್ ಮೆಕ್ಮುಲ್ಲನ್ 39 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 56 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನಿಂದ ಸ್ಕಾಟ್ಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 149 ರನ್ ಕಲೆಹಾಕಿತು. ಆಸ್ಟ್ರೇಲಿಯಾ ಪರ ಕ್ಯಾಮರೋನ್ ಗ್ರೀನ್ 3 ವಿಕೆಟ್ ಪಡೆದರೆ, ಶಾನ್ ಅಬಾಟ್ 2 ವಿಕೆಟ್ ಕಬಳಿಸಿದರು.
150 ರನ್ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್‌ಗುರ್ಕ್ (0) ಮತ್ತೊಮ್ಮೆ ಶೂನ್ಯಕ್ಕೆ ಔಟಾದರು. ಇನ್ನು ಟ್ರಾವಿಸ್ ಹೆಡ್ ಕೇವಲ 12 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಈ ಹಂತದಲ್ಲಿ ಕಣಕ್ಕಿಳಿದ ನಾಯಕ ಮಿಚೆಲ್ ಮಾರ್ಷ್ 31 ರನ್ಗಳ ಕೊಡುಗೆ ನೀಡಿದರು. ಮತ್ತೊಂದೆಡೆ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ ಕ್ಯಾಮರೋನ್ ಗ್ರೀನ್ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅಜೇಯ 62 ರನ್ ಚಚ್ಚಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 16.1 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ.
ಸ್ಕಾಟ್ಲೆಂಡ್ ಪ್ಲೇಯಿಂಗ್ 11: ಜಾರ್ಜ್ ಮುನ್ಸಿ , ಆಲಿ ಹೇರ್ಸ್ , ಬ್ರಾಂಡನ್ ಮೆಕ್‌ಮುಲ್ಲೆನ್ , ರಿಚಿ ಬೆರಿಂಗ್ಟನ್ (ನಾಯಕ) , ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್) , ಮೈಕೆಲ್ ಲೀಸ್ಕ್ , ಮಾರ್ಕ್ ವ್ಯಾಟ್ , ಜ್ಯಾಕ್ ಜಾರ್ವಿಸ್ , ಕ್ರಿಸ್ಟೋಫರ್ ಸೋಲ್ , ಸಫ್ಯಾನ್ ಷರೀಫ್ , ಬ್ರಾಡ್ಲಿ ಕ್ಯೂರಿ.
ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಜೇಕ್ ಫ್ರೇಸರ್-ಮೆಕ್‌ಗುರ್ಕ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ (ನಾಯಕ) , ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್) , ಕ್ಯಾಮರೋನ್ ಗ್ರೀನ್ , ಟಿಮ್ ಡೇವಿಡ್ , ಮಾರ್ಕಸ್ ಸ್ಟೊಯಿನಿಸ್ , ಕೂಪರ್ ಕೊನೊಲಿ , ಆರನ್ ಹಾರ್ಡಿ , ಸೀನ್ ಅಬಾಟ್ , ಆ್ಯಡಮ್ ಝಂಪಾ.