AUS vs SA: ಬವುಮಾ ಶತಕ ವ್ಯರ್ಥ; ಮೊದಲ ಏಕದಿನ ಪಂದ್ಯ ಗೆದ್ದ ಆಸೀಸ್

AUS vs SA: ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಕಾಂಗರೂ ಪಡೆ ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಲಬುಶೇನ್ ಹಾಗೂ ಆಶ್ಟನ್ ಅಗರ್ ಅವರ ಎಂಟನೇ ವಿಕೆಟ್‌ಗೆ ಅಜೇಯ ಗೆಲುವಿನ ಜೊತೆಯಾಟದಿಂದಾಗಿ ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯವನ್ನು ಆಸೀಸ್ ಪಡೆ 3 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

AUS vs SA: ಬವುಮಾ ಶತಕ ವ್ಯರ್ಥ; ಮೊದಲ ಏಕದಿನ ಪಂದ್ಯ ಗೆದ್ದ ಆಸೀಸ್
ಆಸ್ಟ್ರೇಲಿಯಾ- ದಕ್ಷಿಣ ಆಫ್ರಿಕಾ
Follow us
ಪೃಥ್ವಿಶಂಕರ
|

Updated on:Sep 08, 2023 | 7:16 AM

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ (South Africa vs Australia) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗರೂ ಪಡೆ ಶುಭಾರಂಭ ಮಾಡಿದೆ. ಲಬುಶೇನ್ (Marnus Labuschagne) ಹಾಗೂ ಆಶ್ಟನ್ ಅಗರ್ (Ashton Agar) ಅವರ ಎಂಟನೇ ವಿಕೆಟ್‌ಗೆ ಅಜೇಯ ಗೆಲುವಿನ ಜೊತೆಯಾಟದಿಂದಾಗಿ ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯವನ್ನು ಆಸೀಸ್ ಪಡೆ 3 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ನಾಯಕ ಟೆಂಬಾ ಬವುಮಾ (Temba Bavuma) ಅವರ ಶತಕದ ಬಲದಿಂದ ಆಸ್ಟ್ರೇಲಿಯಾಕ್ಕೆ 223 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 40.2 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಸವಾಲನ್ನು ಪೂರ್ಣಗೊಳಿಸಿತು. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.

ಕೈ ಹಿಡಿದ ಕೆಳಕ್ರಮಾಂಕ

ಟಾಪ್ ಆರ್ಡರ್ ವೈಫಲ್ಯದ ನಡುವೆಯೂ ಆಸೀಸ್ ಕೈ ಹಿಡಿದ ಕೆಳಕ್ರಮಾಂಕದ ಬ್ಯಾಟರ್​ಗಳಾದ ಮಾರ್ನಸ್ ಲಬುಶೇನ್ ಮತ್ತು ಆಶ್ಟನ್ ಅಗರ್ ಆಸ್ಟ್ರೇಲಿಯಾದ ಗೆಲುವಿನ ಹೀರೋಗಳೆನಿಸಿಕೊಂಡರು. ಇವರಿಬ್ಬರು ಎಂಟನೇ ವಿಕೆಟ್‌ಗೆ 112 ರನ್‌ಗಳ ಅಜೇಯ ಜೊತೆಯಾಟವನ್ನು ಹಂಚಿಕೊಂಡರು. ಇದರಲ್ಲಿ ಮಾರ್ನಸ್ 93 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನಿಂದ ಅಜೇಯ 80 ರನ್ ಗಳಿಸಿದರೆ, ಆಷ್ಟನ್ ಅಗರ್ ಔಟಾಗದೆ 48 ರನ್ ಕಲೆಹಾಕಿದರು. ಈ ಇಬ್ಬರನ್ನು ಹೊರತುಪಡಿಸಿ ಆರಂಭಿಕ ಟ್ರಾವಿಸ್ ಹೆಡ್ 33 ರನ್ ಕೊಡುಗೆ ನೀಡಿದರು. ನಾಯಕ ಮಿಚೆಲ್ ಮಾರ್ಷ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಇಬ್ಬರೂ ತಲಾ 17 ರನ್ ಬಾರಿಸಿದರೆ, ಅಲೆಕ್ಸ್ ಕ್ಯಾರಿ 3, ಜೋಶ್ ಇಂಗ್ಲಿಸ್ 1 ಮತ್ತು ಸೀನ್ ಅಬಾಟ್ 9 ರನ್​ಗಳಿಗೆ ಸುಸ್ತಾದರು. ಡೇವಿಡ್ ವಾರ್ನ್ ಮತ್ತು ಕ್ಯಾಮರೂನ್ ಗ್ರೀನ್ ಇಬ್ಬರಿಗೂ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.

AUS vs SA: 3ನೇ ಟಿ20 ಪಂದ್ಯವನ್ನೂ ಸೋತ ಆಫ್ರಿಕಾ; ಸರಣಿ ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ

ಇನ್ನು ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ ಮತ್ತು ಜೆರಾಲ್ಡ್ ಕೋಟ್ಜಿ ತಲಾ 2 ವಿಕೆಟ್ ಪಡೆದರೆ, ಮಾರ್ಕೊ ಯಾನ್ಸೆನ್, ಲುಂಗಿ ಎಂಗಿಡಿ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾದ ಬ್ಯಾಟಿಂಗ್

ಇದಕ್ಕೂ ಮುನ್ನ ಟಾಸ್ ಗೆದ್ದ ಆಸ್ಟ್ರೇಲಿಯಾ ಆಫ್ರಿಕಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ದಕ್ಷಿಣ ಆಫ್ರಿಕಾದ ಆರಂಭ ಕೂಡ ಅಷ್ಟು ಹೇಳಿಕೊಳ್ಳುವಂತಿರಲಿಲ್ಲ. ಆದರೆ ನಾಯಕ ತೆಂಬಾ ಬಾವುಮಾ ಕೊನೆಯವರೆಗೂ ಏಕಾಂಗಿಯಾಗಿ ಹೋರಾಡಿ ಶತಕ ಸಿಡಿಸಿದರು. ಆದ್ದರಿಂದ ಆಫ್ರಿಕಾ 49 ಓವರ್‌ಗಳಲ್ಲಿ 222 ರನ್ ಕಲೆಹಾಕಿತು. ತಂಡದ ಪರ ಟೆಂಬಾ 114 ರನ್‌ಗಳ ಗರಿಷ್ಠ ಶತಕ ಗಳಿಸಿದರೆ, ಮಾರ್ಕೊ ಯಾನ್ಸೆನ್ 32 ರನ್ ಕೊಡುಗೆ ನೀಡಿದರು. ಉಳಿದಂತೆ ತಂಡದ ಇತರರಿಗೆ ವಿಶೇಷವಾದುದನ್ನು ಮಾಡಲು ಸಾಧ್ಯವಾಗಲಿಲ್ಲ.

ಆಸ್ಟ್ರೇಲಿಯಾ ಪರ ಜೋಶ್ ಹ್ಯಾಜಲ್‌ವುಡ್ 3 ವಿಕೆಟ್ ಉರುಳಿಸಿದರೆ, ಮಾರ್ಕಸ್ ಸ್ಟೊಯಿನಿಸ್ ಎರಡು ವಿಕೆಟ್ ಪಡೆದರು. ಉಳಿದಂತೆ ಸೀನ್ ಅಬಾಟ್, ಆಡಮ್ ಝಂಪಾ, ಕ್ಯಾಮರೂನ್ ಗ್ರೀನ್ ಮತ್ತು ಆಶ್ಟನ್ ಅಗರ್ ತಲಾ 1 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:15 am, Fri, 8 September 23

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ