ಸತತ ಎರಡನೇ ಅಭ್ಯಾಸ ಪಂದ್ಯದಲ್ಲೂ ಸೋತ ಪಾಕಿಸ್ತಾನ! ಸತತ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ

ODI World Cup Warm-Up match: ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ 10ನೇ ಅಭ್ಯಾಸ ಪಂದ್ಯದಲ್ಲಿ ಕಾಂಗರೂಗಳು 14 ರನ್​ಗಳ ರೋಚಕ ಗೆಲುವು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 351 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ 337 ರನ್‌ಗಳಿಗೆ ಆಲೌಟ್ ಆಯಿತು.

ಸತತ ಎರಡನೇ ಅಭ್ಯಾಸ ಪಂದ್ಯದಲ್ಲೂ ಸೋತ ಪಾಕಿಸ್ತಾನ! ಸತತ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ತಂಡ
Follow us
|

Updated on: Oct 04, 2023 | 8:44 AM

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ (Pakistan vs Australia) ನಡುವಿನ ವಿಶ್ವಕಪ್ (ICC World Cup 2023) ಅಭ್ಯಾಸ ಪಂದ್ಯದಲ್ಲಿ ಕಾಂಗರೂಗಳು 14 ರನ್​ಗಳ ರೋಚಕ ಗೆಲುವು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 351 ರನ್ ಕಲೆಹಾಕಿತು. ತಂಡದ ಪರ ಅರ್ಧಶತಕ ಇನ್ನಿಂಗ್ಸ್ ಆಡಿದ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಮತ್ತು ಕ್ಯಾಮರೂನ್ ಗ್ರೀನ್ ತಂಡವನ್ನು 350 ರನ್‌ಗಳ ಗಡಿ ದಾಟಿಸಿದರು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡ 337 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಬಾಬರ್ ಪಡೆ ಆಡಿದ ಎರಡೂ ಪಂದ್ಯಗಳಲ್ಲಿ ಸೋಲುಂಡರೆ, ಇತ್ತ ಆಸ್ಟ್ರೇಲಿಯಾ ತಾನು ಆಡಿದ ಎರಡೂ ಅಭ್ಯಾಸ ಪಂದ್ಯಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದೆ.

ಆಸೀಸ್ ಪಡೆ ಭರ್ಜರಿ ಬ್ಯಾಟಿಂಗ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ ಮತ್ತು ಅಲೆಕ್ಸ್ ಕ್ಯಾರಿ ಹೊರತುಪಡಿಸಿ ಎಲ್ಲಾ ಆಟಗಾರರು 30 ಕ್ಕೂ ಹೆಚ್ಚು ರನ್ ಗಳಿಸಿದರು. ಡೇವಿಡ್ ವಾರ್ನರ್ 48 ರನ್, ಲಬುಶೇನ್ 40 ರನ್, ಗ್ಲೆನ್ ಮ್ಯಾಕ್ಸ್‌ವೆಲ್ 77 ರನ್, ಕ್ಯಾಮರೂನ್ ಗ್ರೀನ್ 50 ರನ್, ಜೋಶ್ ಇಂಗ್ಲಿಷ್ 48 ರನ್​ಗಳ ಇನ್ನಿಂಗ್ಸ್ ಆಡಿದರು. ಇನ್ನು ಈ ಪಂದ್ಯದಲ್ಲಿ ತೀರ ದುಬಾರಿಯಾದ ಪಾಕಿಸ್ತಾನದ ಬೌಲಿಂಗ್‌, ಆಸೀಸ್ ಬ್ಯಾಟರ್​ಗಳು ಸರಾಗವಾಗಿ ರನ್ ಕಲೆಹಾಕಲು ನೆರವಾದರು. ಪಾಕ್ ಪರ ಉಸಾಮಾ ಮಿರ್ ಪಾಕ್ ಪರ ಅತಿ ಹೆಚ್ಚು 2 ವಿಕೆಟ್ ಪಡೆದರೆ, ಇದರೊಂದಿಗೆ ಇತರ ಬೌಲರ್‌ಗಳು ತಲಾ ಒಂದು ವಿಕೆಟ್ ಪಡೆದರು.

ಬೃಹತ್ ಟಾರ್ಗೆಟ್ ನೀಡಿಯೂ ಸೋತ ಪಾಕಿಸ್ತಾನ; ಸೋಲಿನೊಂದಿಗೆ ವಿಶ್ವಕಪ್‌ ಪ್ರಯಾಣ ಆರಂಭ..!

ಪಾಕಿಸ್ತಾನ ತಂಡಕ್ಕೆ ಕೆಟ್ಟ ಆರಂಭ

ಇನ್ನು ಆಸ್ಟ್ರೇಲಿಯಾ ನೀಡಿದ 350 ರನ್​ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡಕ್ಕೆ ಕೆಟ್ಟ ಆರಂಭ ಸಿಕ್ಕಿತು. ಕೇವಲ 83 ರನ್ ಗಳಿಸುವಷ್ಟರಲ್ಲಿ ತಂಡ 4 ಪ್ರಮುಖ ವಿಕೆಟ್ ಕಳೆದುಕೊಂಡಿತು. ಬಳಿಕ ಇಫ್ತಿಕರ್ ಅಹ್ಮದ್ 83 ರನ್ ಹಾಗೂ ಬಾಬರ್ ಅಜಮ್ 90 ರನ್ ಬಾರಿಸಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದರೆ ಈ ವೇಳೆ ಇಫ್ತಿಕರ್ ಅಹ್ಮದ್ ಇತರ ಆಟಗಾರರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಮೈದಾನ ತೊರೆದರೆ, ಸ್ವಲ್ಪ ಸಮಯದ ನಂತರ ಬಾಬರ್ ಆಝಂ ಇಂಜುರಿಯಿಂದಾಗಿ ಪೆವಿಲಿಯನ್ ಸೇರಿಕೊಂಡರು. ಆ ನಂತರ ಕಾಂಗರೂಗಳು ಇಡೀ ತಂಡವನ್ನು ಆಲೌಟ್ ಮಾಡುವ ಮೂಲಕ ಪಂದ್ಯವನ್ನು ಗೆದ್ದು ಬೀಗಿದರು.

ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಆಝಂ, ಸೌದ್ ಶಕೀಲ್, ಮೊಹಮ್ಮದ್ ಹ್ಯಾರಿಸ್, ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಫಖರ್ ಜಮಾನ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಉಸಾಮಾ ಮಿರ್, ಮೊಹಮ್ಮದ್ ರಿಜ್ವಾನ್, ಹಸನ್ ಅಲಿ , ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂ.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಮಾರ್ನಸ್ ಲಬುಶೇನ್, ಮಾರ್ಕಸ್ ಸ್ಟೋನಿಸ್, ಶಾನ್ ಅಬಾಟ್, ಟ್ರಾವಿಸ್ ಹೆಡ್, ಆಡಮ್ ಝಂಪಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ